IPL 2025: ನಾವು ಅಂದುಕೊಂಡಂತೆ ಏನೂ ನಡೆದಿಲ್ಲ, ಅದಕ್ಕೆ ಗೆಲ್ತಿರಲಿಲ್ಲ: ಧೋನಿ

|

Updated on: Apr 15, 2025 | 9:04 AM

IPL 2025 CSK vs LSG: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 166 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 19.3 ಓವರ್​ಗಳಲ್ಲಿ ಗೆಲುವಿನ ಗುರಿ ಮುಟ್ಟಿದೆ.

IPL 2025: ನಾವು ಅಂದುಕೊಂಡಂತೆ ಏನೂ ನಡೆದಿಲ್ಲ, ಅದಕ್ಕೆ ಗೆಲ್ತಿರಲಿಲ್ಲ: ಧೋನಿ
Ms Dhoni
Follow us on

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 30ನೇ ಪಂದ್ಯದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಗೆಲುವಿನ ಲಯಕ್ಕೆ ಮರಳಿದೆ. ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ರಿಷಭ್ ಪಂತ್ (63) ಅರ್ಧಶತಕದ ನೆರವಿನೊಂದಿಗೆ 20 ಓವರ್​ಗಳಲ್ಲಿ 166 ರನ್ ಕಲೆಹಾಕಿತು.

167 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.3 ಓವರ್​ಗಳಲ್ಲಿ 166 ರನ್ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ವಿಶೇಷ ಎಂದರೆ ಇದು ಈ ಸೀಸನ್​ನಲ್ಲಿನ ಸಿಎಸ್​ಕೆ ತಂಡ 2ನೇ ಗೆಲುವು. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸತತ 5 ಪಂದ್ಯಗಳಲ್ಲಿ ಸೋಲನುಭವಿಸಿತ್ತು.

ಈ ಗೆಲುವಿನ ಬಳಿಕ ಮಾತನಾಡಿದ ಮಹೇಂದ್ರ ಸಿಂಗ್ ಧೋನಿ, ಈ ಗೆಲುವು ಖುಷಿ ಕೊಟ್ಟಿದೆ. ದುರದೃಷ್ಟವಶಾತ್ ನಾವು ಕೊನೆಯ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಈ ಗೆಲುವು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಇದು ಕಠಿಣ ಪಂದ್ಯವಾಗಿತ್ತು ಮತ್ತು ಗೆದ್ದಿದ್ದಕ್ಕೆ ನನಗೆ ಸಂತೋಷವಾಗಿದೆ. ಅಲ್ಲದೆ ಈ ಜಯದೊಂದಿಗೆ ತಂಡವು ಲಯವನ್ನು ಮರಳುತ್ತದೆ ಎಂಬ ವಿಶ್ವಾಸವಿದೆ ಎಂದರು.

ಇದನ್ನೂ ಓದಿ
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಇನ್ನು ಈ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ತವರು ಮೈದಾನವಾದ ಚೆಪಾಕ್ ಕ್ರೀಡಾಂಗಣದಲ್ಲಿ ಮೂರು ಸೋಲುಗಳನ್ನು ಅನುಭವಿಸಿದೆ. ತಂಡದ ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳು ತವರಿನ ಉತ್ತಮ ಪ್ರದರ್ಶನ ನಿಡಲು ಪರದಾಡುತ್ತಿದ್ದಾರೆ.

ಈ ಬಗ್ಗೆ ಕೇಳಿದಾಗ, ಹಿಂದಿನ ಪಂದ್ಯಗಳಲ್ಲಿ, ನಾವು ಮೊದಲ ಆರು ಓವರ್‌ಗಳಲ್ಲಿ ಬೌಲಿಂಗ್ ಮಾಡುವಾಗ ಕಷ್ಟಪಟ್ಟ್ಟಿರುವುದು ನಿಜ. ಆದರೆ ಮಧ್ಯದ ಓವರ್‌ಗಳಲ್ಲಿ ಮತ್ತೆ ಕಂಬ್ಯಾಕ್ ಮಾಡಿದ್ದೆವು. ಬ್ಯಾಟರ್​ಗಳು ಸಹ, ನಾವು ಬಯಸಿದ ಆರಂಭವನ್ನು ಪಡೆಯುತ್ತಿರಲಿಲ್ಲ. ನಾವು ಅಂದುಕೊಂಡಂತೆ ಏನೂ ಸಹ ನಡೆಯುತ್ತಿರಲಿಲ್ಲ. ಅದಕ್ಕೆ ಗೆಲುವು ನಮ್ಮದಾಗಿರಲಿಲ್ಲ. ಬಹುಶಃ ಚೆನ್ನೈ ಪಿಚ್​ ಇದಕ್ಕೆ ಕಾರಣ ಇರಬಹುದು. ಭವಿಷ್ಯದಲ್ಲಿ ನಾವು ಉತ್ತಮ ವಿಕೆಟ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತೇವೆ ಎಂಬ ನಂಬಿಕೆಯಿದೆ ಎಂದು ಧೋನಿ ಹೇಳಿದ್ದಾರೆ.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಿದ ಧೋನಿ, ಮೊದಲ ಆರು ಓವರ್‌ಗಳಲ್ಲಿ ನಮಗೆ ಹೆಚ್ಚಿನ ಬೌಲರ್‌ಗಳು ಬೇಕಾಗಿದ್ದರು. ಆದರೆ ಪವರ್​ಪ್ಲೇನಲ್ಲಿ ಅಶ್ವಿನ್ ಅವರಿಂದ 2 ಓವರ್​ಗಳನ್ನು ಬೌಲಿಂಗ್ ಮಾಡಿಸುವುದರಿಂದ ಅವರು ಒತ್ತಡಕ್ಕೆ ಒಳಗಾಗುತ್ತಿದ್ದರು. ಇದಕ್ಕಾಗಿಯೇ ನಾವು ಬೌಲಿಂಗ್‌ನಲ್ಲಿ ಬದಲಾವಣೆಗಳನ್ನು ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಮೋಸದಾಟದ ಡೌಟ್… ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್

ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಉತ್ತಮ ಗೆಲುವು ದಾಖಲಿಸಿರುವ ಕಾರಣ, ಮುಂದಿನ ಪಂದ್ಯಗಳಲ್ಲೂ ಸಿಎಸ್​ಕೆ ಕಡೆಯಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಬಹುದು. ಈ ಮೂಲಕ ಉಳಿದ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ದಾಖಲಿಸುವ ವಿಶ್ವಾಸವಿದೆ ಎಂದು ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.