AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಹೊಸ ಟಿ20 ಲೀಗ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಧೋನಿ?

MS Dhoni: ಆಟಗಾರನಾಗಿ ಹಾಗೂ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಧೋನಿ ಹಲವು ಅದ್ಭುತ ವಿಜಯಗಳನ್ನು ತಂದುಕೊಟ್ಟಿದ್ದಾರೆ.

MS Dhoni: ಹೊಸ ಟಿ20 ಲೀಗ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಧೋನಿ?
MS Dhoni
TV9 Web
| Edited By: |

Updated on: Jul 21, 2022 | 2:24 PM

Share

ಟಿ20 ಕ್ರಿಕೆಟ್ ಟೂರ್ನಿಗೆ ಹೊಸ ಲೀಗ್​ವೊಂದು ಸೇರ್ಪಡೆಯಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮೂಲಕ ಶುರುವಾದ ಈ ಪರ್ವ ಇದೀಗ ವಿಶ್ವದೆಲ್ಲೆಡೆ ವಿಸ್ತರಿಸಿಕೊಂಡಿದೆ. ಐಪಿಎಲ್​ನಂತೆ ಇದೀಗ ವಿದೇಶದಲ್ಲಿ ಹಲವು ಲೀಗ್ ಗಳು ಹುಟ್ಟಿಕೊಂಡಿವೆ. ಪಾಕಿಸ್ತಾನ್ ಸೂಪರ್ ಲೀಗ್, ಕೆರಿಬಿಯನ್ ಪ್ರೀಮಿಯರ್ ಲೀಗ್, ಬಾಂಗ್ಲಾದೇಶ ಪ್ರೀಮಿಯರ್ ಲೀಗ್, ಯುಎಇ ಕ್ರಿಕೆಟ್ ಲೀಗ್, ಬಿಗ್ ಬ್ಯಾಷ್…ಹೀಗೆ ಮುಂದುವರೆಯುತ್ತಿರುವ ಲೀಗ್​ಗೆ ಹೊಸ ಸೇರ್ಪಡೆ ಸೌತ್ ಆಫ್ರಿಕಾ ಟಿ20 ಲೀಗ್. ಆದರೆ ಇದುವರೆಗೆ ಬಂದ ಹಲವು ಲೀಗ್​ಗಳಿಗೆ ಐಪಿಎಲ್ ಟೂರ್ನಿಯಂತೆ ಜನಪ್ರಿಯತೆ ಗಳಿಸಲು ಸಾಧ್ಯವಾಗಿಲ್ಲ. ಆದರೆ ಸೌತ್ ಆಫ್ರಿಕಾ ಲೀಗ್ ಜನಮನ್ನಣೆ ಪಡೆಯುವ ಸಾಧ್ಯತೆಯಿದೆ. ಏಕೆಂದರೆ ಈ ಲೀಗ್​ನಲ್ಲಿ ಕಾಣಿಸಿಕೊಳ್ಳುತ್ತಿರುವ 6 ತಂಡಗಳನ್ನು ಐಪಿಎಲ್​ ಫ್ರಾಂಚೈಸಿಗಳೇ ಖರೀದಿಸಿದೆ.

ಕೇಪ್ ಟೌನ್, ಜೋಹಾನ್ಸ್‌ಬರ್ಗ್, ಪೋರ್ಟ್ ಎಲಿಜಬೆತ್, ಪ್ರಿಟೋರಿಯಾ, ಡರ್ಬನ್ ಮತ್ತು ಪರ್ಲ್ ನಗರಗಳ ಕೇಂದ್ರೀಕೃತ ತಂಡಗಳು ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಣಕ್ಕಿಳಿಯಲಿದ್ದು, ಈ ತಂಡಗಳು ಪ್ರಸ್ತುತ ಐಪಿಎಲ್‌ನಲ್ಲಿನ ಫ್ರಾಂಚೈಸಿಗಳ ಒಡೆತನದಲ್ಲಿರುವುದು ವಿಶೇಷ. ಅದರಂತೆ ಕೇಪ್ ಟೌನ್ ತಂಡವನ್ನು ಮುಂಬೈ ಇಂಡಿಯನ್ಸ್ ಖರೀದಿಸಿದರೆ , ಜೋಹಾನ್ಸ್ ಬರ್ಗ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ಪಾಲಾಗಿದೆ. ಇನ್ನು ಡರ್ಬನ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ಒಡೆತನದಲ್ಲಿದ್ದರೆ, ಪೋರ್ಟ್ ಎಲಿಜಬೆತ್ ತಂಡವನ್ನು ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿಸಿದೆ. ಹಾಗೆಯೇ ಪ್ರಿಟೋರಿಯಾ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದರೆ, ಪರ್ಲ್ ತಂಡವನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಖರೀದಿಸಿದೆ. ಹೀಗಾಗಿಯೇ ಸೌತ್ ಆಫ್ರಿಕಾ ಟಿ20 ಲೀಗ್ ಅನ್ನು ಮಿನಿ ಐಪಿಎಲ್ ಎಂದೇ ವರ್ಣಿಸಲಾಗುತ್ತಿದೆ.

ಅತ್ತ ಜೋಹಾನ್ಸ್​ ಬರ್ಗ್​ ತಂಡವನ್ನು ಸಿಎಸ್​ಕೆ ಫ್ರಾಂಚೈಸಿ ಖರೀದಿಸುತ್ತಿದ್ದಂತೆ, ಇತ್ತ ಮಹೇಂದ್ರ ಸಿಂಗ್ ಧೋನಿ ಮೈದಾನಕ್ಕೆ ಮರಳುವ ಬಗ್ಗೆ ಚರ್ಚೆಗಳು ಶುರುವಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ನೀಡಿರುವ ಧೋನಿ ಸದ್ಯ ಐಪಿಎಲ್ ಮಾತ್ರ ಆಡುತ್ತಿದ್ದಾರೆ. ಇದೀಗ ಬಿಸಿಸಿಐನಿಂದ ಎನ್​ಒಸಿ ಪಡೆಯುವ ಮೂಲಕ ಯಾವುದೇ ಲೀಗ್​ನಲ್ಲೂ ಕೂಡ ಭಾಗವಹಿಸಬಹುದು. ಹೀಗಾಗಿಯೇ ಸಿಎಸ್​ಕೆ ತಂಡದ ನಾಯಕ ಎಂಎಸ್ ಧೋನಿ ಸೌತ್ ಆಫ್ರಿಕಾ ಲೀಗ್​​ನಲ್ಲಿ ಆಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಸಿಎಸ್​ಕೆ ಅಂದರೆ ಧೋನಿ: ಧೋನಿ ಸಿಎಸ್​ಕೆ ತಂಡದ ಆಧಾರಸ್ತಂಭ. ಅವರು ಐಪಿಎಲ್​​ಗೆ ನಿವೃತ್ತಿ ನೀಡಲು ಬಯಸಿದರೂ, ಸಿಎಸ್​ಕೆ ಫ್ರಾಂಚೈಸಿ ಅದಕ್ಕೆ ಒಪ್ಪುತ್ತಿಲ್ಲ ಎಂಬುದೇ ಸತ್ಯ. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಹೊಸ ತಂಡದಲ್ಲೂ ಧೋನಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಏಕೆಂದರೆ ಆಟಗಾರನಾಗಿ ಹಾಗೂ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಧೋನಿ ಹಲವು ಅದ್ಭುತ ವಿಜಯಗಳನ್ನು ತಂದುಕೊಟ್ಟಿದ್ದಾರೆ. ಧೋನಿ ನಾಯಕತ್ವದಲ್ಲಿ ಸಿಎಸ್​ಕೆ ತಂಡವು 2010, 2011, 2018 ಮತ್ತು 2021ರಲ್ಲಿ ಪ್ರಶಸ್ತಿ ಗೆದ್ದಿದೆ. ಇನ್ನು 2008, 2012, 2013, 2019 ಲೀಗ್‌ಗಳಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದೆ. ಮತ್ತೊಂದೆಡೆ, 2010 ಮತ್ತು 2014 ರಲ್ಲಿ ಚಾಂಪಿಯನ್ಸ್ ಲೀಗ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಹೀಗಾಗಿಯೇ ಧೋನಿ ಜೋಹಾನ್ಸ್​ ಬರ್ಗ್ ತಂಡದೊಂದಿಗೆ ಕೈ ಜೋಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Follow Us
TV9 Web
TV9 Web

TV9 Kannada

Read More
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ