AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಸಿಕ್ಸ್, 10 ಫೋರ್: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಫಹಾದ್

T20 World Records; ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮೂವತ್ತಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿರುವುದು ಕೇವಲ ಇಬ್ಬರು ಬ್ಯಾಟರ್​ಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಸಾಹಿಲ್ ಚೌಹಾಣ್. ಇದೀಗ ಈ ಪಟ್ಟಿಗೆ ಟರ್ಕಿ ತಂಡದ ಆರಂಭಿಕ ದಾಂಡಿಗ ಮುಹಮ್ಮದ್ ಫಹಾದ್ ಕೂಡ ಸೇರ್ಪಡೆಯಾಗಿದ್ದಾರೆ. ಅದು ಕೂಡ ದಾಖಲೆಯ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ.

12 ಸಿಕ್ಸ್, 10 ಫೋರ್: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಫಹಾದ್
Muhammad Fahad
ಝಾಹಿರ್ ಯೂಸುಫ್
|

Updated on: Jul 13, 2025 | 2:04 PM

Share

ಬಲ್ಗೇರಿಯಾದಲ್ಲಿ ನಡೆಯುತ್ತಿರುವ ಟಿ20 ತ್ರಿಕೋನ ಸರಣಿಯಲ್ಲಿ ಟರ್ಕಿ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮುಹಮ್ಮದ್ ಫಹಾದ್ ಸಿಡಿಲಬ್ಬರದ ಸೆಂಚುರಿ ಸಿಡಿಸಿದ್ದಾರೆ. ಅದು ಕೂಡ ಕೇವಲ 29 ಎಸೆತಗಳಲ್ಲಿ ಎಂಬುದೇ ಅಚ್ಚರಿ. ಸೋಫಿಯಾದ ಕ್ವೀನ್ಸ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯ ಬಲ್ಗೇರಿಯಾ ಹಾಗೂ ಟರ್ಕಿ ತಂಡಗಳು ಮುಖಾಮುಖಿಯಾಗಿದ್ದವು.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಲು ಅವಕಾಶ ಪಡೆದ ಟರ್ಕಿ ತಂಡವು ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಮೊದಲ ವಿಕೆಟ್​ಗೆ ಆರಂಭಿಕರಾದ ಮುಹಮ್ಮದ್ ಫಹಾದ್ ಹಾಗೂ ಇಲ್ಯಾಸ್ ಅತಾವುಲ್ಲ 154 ರನ್​ಗಳ ಜೊತೆಯಾಟವಾಡಿದರು. ಅದು ಕೂಡ ಕೇವಲ 9.2 ಓವರ್​ಗಳಲ್ಲಿ.

ಇದರ ನಡುವೆ ಮುಹಮ್ಮದ್ ಫಹಾದ್ ಕೇವಲ 29 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಸೆಂಚುರಿ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡರು. ಇದಾದ ಬಳಿಕ ಕೂಡ ಆರ್ಭಟ ಮುಂದುವರೆಸಿದ ಫಹಾದ್ 34 ಎಸೆತಗಳಲ್ಲಿ 12 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 120 ರನ್ ಬಾರಿಸಿ ಇನಿಂಗ್ಸ್ ಅಂತ್ಯಗೊಳಿಸಿದರು.

ಫಹಾದ್ ಹಾಗೂ ಇಲ್ಯಾಸ್ ಅತಾವುಲ್ಲಾ (44) ವಿಕೆಟ್ ಪತನಗೊಳ್ಳುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಟರ್ಕಿ ತಂಡವು 19.3 ಓವರ್​ಗಳಲ್ಲಿ 237 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬಲ್ಗೇರಿಯಾ ತಂಡಕ್ಕೆ 238 ರನ್​ಗಳ ಕಠಿಣ ಗುರಿ ನೀಡಿದೆ.

238 ರನ್​ಗಳ ಬೃಹತ್ ಮೊತ್ತ ಗುರಿ ಪಡೆದ ಬಲ್ಗೇರಿಯಾ ತಂಡವು ವಿಸ್ಫೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಆರಂಭಿಕನಾಗಿ ಕಣಕ್ಕಿಳಿದ ನಾಯಕ ಕ್ರಿಸ್ ಹಿಸ್ಟೊ ಬ್ಯಾಟ್​ನಿಂದ 29 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 78 ರನ್​ಗಳು ಮೂಡಿಬಂತು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಕಂಡು ಬಂದಿರಲಿಲ್ಲ. ಪರಿಣಾಮ 16.5 ಓವರ್​ಗಳಲ್ಲಿ 178 ರನ್​ಗಳಿಸಿ ಬಲ್ಗೇರಿಯಾ ತಂಡವು ಆಲೌಟ್ ಆಗಿದೆ. ಈ ಮೂಲಕ ಟರ್ಕಿ ತಂಡ 59 ರನ್​ಗಳ ಜಯ ಸಾಧಿಸಿತು.

ಫಹಾದ್ ವಿಶ್ವ ದಾಖಲೆ:

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 30 ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿರುವುದು ಕೇವಲ ಇಬ್ಬರು ಬ್ಯಾಟರ್​ಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಈಸ್ಟೋನಿಯಾ ತಂಡದ ಸಾಹಿಲ್ ಚೌಹಾಣ್. 2024 ರಲ್ಲಿ ನಡೆದ ಸೈಪ್ರಸ್ ವಿರುದ್ಧದ ಟಿ20 ಪಂದ್ಯದಲ್ಲಿ ಸಾಹಿಲ್ ಕೇವಲ 27 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದನ್ನೂ ಓದಿ: ಒಂದು ಸೆಂಚುರಿಯೊಂದಿಗೆ 6 ಭರ್ಜರಿ ದಾಖಲೆ ಬರೆದ ಕೆಎಲ್ ರಾಹುಲ್

ಇದೀಗ ಮುಹಮ್ಮದ್ ಫಹಾದ್ ಕೂಡ 30 ಕ್ಕಿಂತ ಕಡಿಮೆ ಎಸೆತಗಳಲ್ಲಿ ಸೆಂಚುರಿ ಪೂರೈಸಿದ್ದಾರೆ. ಬಲ್ಗೇರಿಯಾ ವಿರುದ್ಧ ಕೇವಲ 29 ಎಸೆತಗಳಲ್ಲಿ ಮೂರಂಕಿ ಮೊತ್ತ ಕಲೆಹಾಕುವ ಮೂಲಕ ಫಹಾದ್ ಈ ಸಾಧನೆ ಮಾಡಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನ ಅತೀ ವೇಗದ ಶತಕಗಳು:

  1. ಸಾಹಿಲ್ ಚೌಹಾಣ್ (ಈಸ್ಟೋನಿಯಾ) – 27 ಎಸೆತಗಳು
  2. ಮುಹಮ್ಮದ್ ಫಹಾದ್ (ಟರ್ಕಿ) – 29 ಎಸೆತಗಳು
  3. ಜಾನ್ ನಿಕಲ್ ಲಾಫ್ಟಿ ಈಟನ್ (ನಮೀಬಿಯಾ) – 33 ಎಸೆತಗಳು
  4. ಸಿಕಂದರ್ ರಾಝ (ಝಿಂಬಾಬ್ವೆ) – 33 ಎಸೆತಗಳು
  5. ಕುಸಾಲ್ ಮಲ್ಲಾ (ನೇಪಾಳ) – 34 ಎಸೆತಗಳು.
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ