Irani Cup 2024: ಇರಾನಿ ಕಪ್​ಗೆ ಬಲಿಷ್ಠ ಮುಂಬೈ ತಂಡ ಪ್ರಕಟ

Irani Cup 2024: ಈ ಬಾರಿಯ ಇರಾನಿ ಕಪ್ ಪಂದ್ಯವು ಅಕ್ಟೋಬರ್ 1 ರಿಂದ ಅಕ್ಟೋಬರ್ 5 ರವರೆಗೆ ನಡೆಯಲಿದೆ. ಈ ಮೊದಲು ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ನಿಗದಿಯಾಗಿತ್ತು. ಆದರೀಗ ಪಂದ್ಯವನ್ನು ಅಹಮದಾಬಾದ್ ಅಥವಾ ಲಕ್ನೋಗೆ ಸ್ಥಳಾಂತರಿಸಲು ಬಿಸಿಸಿಐ ಚಿಂತಿಸಿದೆ.

Irani Cup 2024: ಇರಾನಿ ಕಪ್​ಗೆ ಬಲಿಷ್ಠ ಮುಂಬೈ ತಂಡ ಪ್ರಕಟ
Mumbai Squad
Follow us
ಝಾಹಿರ್ ಯೂಸುಫ್
|

Updated on:Sep 25, 2024 | 9:52 AM

ಇರಾನಿ ಕಪ್ 2024ರ ಪಂದ್ಯಕ್ಕಾಗಿ ಮುಂಬೈ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಅನುಭವಿ ಆಟಗಾರ ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಇನ್ನು ತಂಡದಲ್ಲಿ ಶ್ರೇಯಸ್ ಅಯ್ಯರ್, ಪೃಥ್ವಿ ಶಾ ಹಾಗೂ ಶಾರ್ದೂಲ್ ಠಾಕೂರ್ ಕೂಡ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿರುವ ಸರ್ಫರಾಝ್ ಖಾನ್ ಕೂಡ ಇರಾನಿ ಕಪ್​ಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಸೆಪ್ಟೆಂಬರ್ ಅಂತ್ಯದ ವೇಳೆಗೆ ಅವರು ಮುಂಬೈ ಬಳಗವನ್ನು ಸೇರಿಕೊಳ್ಳುವುದು ಬಹುತೇಕ ಖಚಿತ.

ಮುಂಬೈ ತಂಡದಲ್ಲಿ ಸರ್ಫರಾಝ್ ಅವರ ಕಿರಿಯ ಸಹೋದರ ಮುಶೀರ್ ಖಾನ್ ಸಹ ಕಾಣಿಸಿಕೊಂಡಿದ್ದಾರೆ. ಅದರಂತೆ ಇರಾನಿ ಕಪ್​ಗೆ ಮುಂಬೈ ಬಳಗ ಈ ಕೆಳಗಿನಂತಿದೆ…

ಮುಂಬೈ ತಂಡ: ಅಜಿಂಕ್ಯ ರಹಾನೆ, ಪೃಥ್ವಿ ಶಾ , ಆಯುಷ್ ಮ್ಹಾತ್ರೆ, ಮುಶೀರ್ ಖಾನ್, ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್, ಸೂರ್ಯಾಂಶ್ ಶೆಡ್ಗೆ, ಹಾರ್ದಿಕ್ ತಮೋರ್ (ವಿಕೆಟ್ ಕೀಪರ್), ಸಿದ್ದಾಂತ್ ಅದ್ಧತ್ರಾವ್, ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ಹಿಮಾಂಶು ಸಿಂಗ್, ಶಾರ್ದೂಲ್ ಠಾಕೂರ್, ಮೊಹಿತ್ ಅವಸ್ತಿ, ಜುನೆದ್ ಖಾನ್, ರಾಯಿಸ್ಟನ್ ಡಯಾಸ್, ಸರ್ಫರಾಝ್ ಖಾನ್*.

ಯಾರ ನಡುವೆ ಮುಖಾಮುಖಿ?

ಇರಾನಿ ಕಪ್ ಎಂಬುದು ದೇಶೀಯ ಅಂಗಳದ ಟೆಸ್ಟ್ ಪಂದ್ಯ. ಈ ಪಂದ್ಯದಲ್ಲಿ ರಣಜಿ ಟೂರ್ನಿಯ ಹಾಲಿ ಚಾಂಪಿಯನ್ ಹಾಗೂ ಶೇಷ ಭಾರತ ತಂಡ ಮುಖಾಮುಖಿಯಾಗಲಿದೆ. ಇಲ್ಲಿ ರಣಜಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಶೇಷ ಭಾರತ ತಂಡಕ್ಕೆ ಆಯ್ಕೆ ಮಾಡಲಾಗುತ್ತದೆ. ಹೀಗೆ ಆಯ್ಕೆಯಾದ ಆಟಗಾರರನ್ನು ಒಳಗೊಂಡ ತಂಡವು ಹಾಲಿ ರಣಜಿ ಚಾಂಪಿಯನ್ ತಂಡವನ್ನು ಎದುರಿಸಲಿದೆ. ಈ ಬಾರಿಯ ಇರಾನಿ ಕಪ್​ಗೆ ಆಯ್ಕೆಯಾದ ಶೇಷ ಭಾರತ ತಂಡ ಈ ಕೆಳಗಿನಂತಿದೆ…

ಶೇಷ ಭಾರತ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಅಭಿಮನ್ಯು ಈಶ್ವರನ್ (ಉಪನಾಯಕ), ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೇಲ್ (ವಿಕೆಟ್ ಕೀಪರ್)*, ಇಶಾನ್ ಕಿಶನ್ (ವಿಕೆಟ್ ಕೀಪರ್), ಮಾನವ್ ಸುತಾರ್, ಸರನ್ಶ್ ಜೈನ್, ಪ್ರಸಿದ್ಧ್ ಕೃಷ್ಣ, ಮುಕೇಶ್ ಕುಮಾರ್, ಯಶ್ ದಯಾಲ್*, ರಿಕಿ ಭುಯಿ, ಶಾಶ್ವತ್ ರಾವತ್, ಖಲೀಲ್ ಅಹ್ಮದ್, ರಾಹುಲ್ ಚಹರ್.

ಇದನ್ನೂ ಓದಿ: IPL 2025: RCB ಉಳಿಸಿಕೊಳ್ಳುವ ಅನ್​ಕ್ಯಾಪ್ಡ್​ ಆಟಗಾರ ಯಾರು?

ಇರಾನಿ ಕಪ್ ಪಂದ್ಯ ಯಾವಾಗ?

ಈ ಬಾರಿಯ ಇರಾನಿ ಕಪ್ ಪಂದ್ಯವು ಅಕ್ಟೋಬರ್ 1 ರಿಂದ ಅಕ್ಟೋಬರ್ 5 ರವರೆಗೆ ನಡೆಯಲಿದೆ. ಈ ಮೊದಲು ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ನಿಗದಿಯಾಗಿತ್ತು. ಆದರೀಗ ಪಂದ್ಯವನ್ನು ಅಹಮದಾಬಾದ್ ಅಥವಾ ಲಕ್ನೋಗೆ ಸ್ಥಳಾಂತರಿಸಲು ಬಿಸಿಸಿಐ ಚಿಂತಿಸಿದೆ. ಹೀಗಾಗಿ ಈ ಬಾರಿಯ ಇರಾನಿ ಕಪ್ ಪಂದ್ಯವು ನರೇಂದ್ರ ಮೋದಿ ಸ್ಟೇಡಿಯಂ ಅಥವಾ ಏಕಾನ ಸ್ಟೇಡಿಯಂನಲ್ಲಿ ನಡೆಯುವ ಸಾಧ್ಯತೆಯಿದೆ.

Published On - 9:07 am, Wed, 25 September 24

ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ