ಟಿ20 ವಿಶ್ವಕಪ್​ಗೂ ಮುನ್ನ ಆಫ್ರಿಕಾಗೆ ಆಘಾತ; ರೋಹಿತ್ ಪಡೆ ಸೇರಿದ ಹರಿಣಗಳ ಮಾಜಿ ವಿಕೆಟ್ ಕೀಪರ್..!

ಮುಂಬರುವ ಐಪಿಎಲ್ 2023 ರಲ್ಲಿ, ಮುಂಬೈ ತಂಡವು ಮಾರ್ಕ್ ಬೌಚರ್ ಮಾರ್ಗದರ್ಶನದಲ್ಲಿ ಮೈದಾನಕ್ಕಿಳಿಯಲಿದೆ. ಈ ವಾರದ ಆರಂಭದಲ್ಲಿ, ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ T20 ವಿಶ್ವಕಪ್ ನಂತರ ತಂಡದ ಮುಖ್ಯ ಕೋಚ್ ಮಾರ್ಕ್​ ಬೌಚರ್ ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಾರೆ ಎಂದು ದೃಢಪಡಿಸಿತ್ತು.

ಟಿ20 ವಿಶ್ವಕಪ್​ಗೂ ಮುನ್ನ ಆಫ್ರಿಕಾಗೆ ಆಘಾತ; ರೋಹಿತ್ ಪಡೆ ಸೇರಿದ ಹರಿಣಗಳ ಮಾಜಿ ವಿಕೆಟ್ ಕೀಪರ್..!
Rohit Sharma
Follow us
TV9 Web
| Updated By: ಪೃಥ್ವಿಶಂಕರ

Updated on: Sep 16, 2022 | 12:43 PM

ಟಿ20 ವಿಶ್ವಕಪ್ (T20 World Cup) ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿದ್ದು ಎಲ್ಲಾ ತಂಡಗಳು ತಮ್ಮ ತಮ್ಮ ಅಂತಿಮ ಹಂತದ ಸಿದ್ದತೆಗಳನ್ನು ಪೂರ್ಣಗೊಳಿಸುವುದರಲ್ಲಿ ತೊಡಗಿಕೊಂಡಿವೆ. ಆದರೆ ಈ ಟೂರ್ನಿಗೂ ಮುನ್ನ ದಕ್ಷಿಣ ಆಫ್ರಿಕಾ ತಂಡ ಮಾತ್ರ ಹಿನ್ನಡೆ ಅನುಭವಿಸಿದೆ. ತಂಡದ ಮುಖ್ಯ ಕೋಚ್ ಮಾರ್ಕ್ ಬೌಚರ್ (Mark Boucher) ಆಫ್ರಿಕಾ ತಂಡವನ್ನು ತೊರೆಯಲು ನಿರ್ಧರಿಸಿದ್ದು, ರೋಹಿತ್ (Rohit Sharma) ತಂಡವನ್ನು ಸೇರಲು ಸಿದ್ದತೆ ನಡೆಸಿದ್ದಾರೆ. ಐಪಿಎಲ್‌ನ ಅತ್ಯಂತ ಯಶಸ್ವಿ ತಂಡ ಮುಂಬೈ ಇಂಡಿಯನ್ಸ್ (Mumbai Indians) ಶುಕ್ರವಾರ ದಕ್ಷಿಣ ಆಫ್ರಿಕಾದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಾರ್ಕ್ ಬೌಚರ್ ಅವರು ತಮ್ಮ ತಂಡದ ಹೊಸ ಮುಖ್ಯ ಕೋಚ್ ಆಗಲಿದ್ದಾರೆ ಎಂಬುದನ್ನು ಖಚಿತಪಡಿಸಿದೆ. ಈ ಹಿಂದೆ ಮುಂಬೈ ತಂಡದ ಜವಬ್ದಾರಿವಹಿಸಿಕೊಂಡಿದ್ದ ಮಹೇಲಾ ಜಯವರ್ಧನೆ ಬದಲಿಗೆ ಬೌಚರ್ ಅವರನ್ನು ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಾಗಿದೆ.

ಮುಂದಿನ ಐಪಿಎಲ್​ನಲ್ಲಿ ಮುಂಬೈಗೆ ಬೌಚರ್ ಮಾರ್ಗದರ್ಶನ

ಮುಂಬರುವ ಐಪಿಎಲ್ 2023 ರಲ್ಲಿ, ಮುಂಬೈ ತಂಡವು ಮಾರ್ಕ್ ಬೌಚರ್ ಮಾರ್ಗದರ್ಶನದಲ್ಲಿ ಮೈದಾನಕ್ಕಿಳಿಯಲಿದೆ. ಈ ವಾರದ ಆರಂಭದಲ್ಲಿ, ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ T20 ವಿಶ್ವಕಪ್ ನಂತರ ತಂಡದ ಮುಖ್ಯ ಕೋಚ್ ಮಾರ್ಕ್​ ಬೌಚರ್ ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಾರೆ ಎಂದು ದೃಢಪಡಿಸಿತ್ತು. 2019 ರಲ್ಲಿ, ಬೌಚರ್ ಅವರನ್ನು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯು ಮುಖ್ಯ ತರಬೇತುದಾರರನ್ನಾಗಿ ನೇಮಿಸಿತ್ತು. ಅಲ್ಲಿಂದ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಆಫ್ರಿಕಾ 11 ಟೆಸ್ಟ್, 12 ODI ಮತ್ತು 23 T20 ಪಂದ್ಯಗಳನ್ನು ಗೆದ್ದಿದೆ. ಮುಂದಿನ ವರ್ಷ ಅಂದರೆ 2023ರಲ್ಲಿ ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ವರೆಗೆ ಬೌಚರ್‌ನೊಂದಿಗೆ ಆಫ್ರಿಕಾ 4 ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಲು ಮುಂದಾಗಿತ್ತು. ಆದರೆ ಮಾರ್ಕ್ ಬೌಚರ್ ಅವರು ಈಗಾಗಲೇ ತಂಡವನ್ನು ತೊರೆಯಲು ನಿರ್ಧರಿಸಿರುವುದರಿಂದ ಈ ಒಪ್ಪಂದ ರದ್ದಾಗಿದೆ.

ಕಳೆದೆರಡು ಸೀಸನ್​ಗಳು ಮುಂಬೈ ತಂಡಕ್ಕೆ ಉತ್ತಮವಾಗಿಲ್ಲ

ಮುಂಬೈ ಇಂಡಿಯನ್ಸ್ ನೀಡಿದ ಹೇಳಿಕೆಯಲ್ಲಿ ಬೌಚರ್, ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಆಗಿರುವುದು ನಮಗೆ ಸಂತಸ ತಂದಿದೆ ಎಂದಿದೆ. ಮುಂಬೈ ಇಂಡಿಯನ್ಸ್ ಬಗ್ಗೆ ಮಾತನಾಡುವುದಾದರೆ, 5 ಬಾರಿಯ ಚಾಂಪಿಯನ್‌ ಮುಂಬೈ ತಂಡ ತನ್ನ ಕೊನೆಯ 2 ಸೀಸನ್‌ಗಳಲ್ಲಿ ಸಾಕಷ್ಟು ನಿರಾಶಾದಾಯಕ ಪ್ರದರ್ಶನ ನೀಡಿತ್ತು. 2021 ರಲ್ಲಿ, ತಂಡವು 5 ನೇ ಸ್ಥಾನದಲ್ಲಿದ್ದರೆ, ಕಳೆದ ಸೀಸನ್​ನಲ್ಲಿ ಮುಂಬೈ ತಂಡ 10 ತಂಡಗಳಲ್ಲಿ ಕೊನೆಯ ಸ್ಥಾನ ಪಡೆದಿತ್ತು. ಅಲ್ಲದೆ 2022ರಲ್ಲಿ ರೋಹಿತ್ ಪಡೆ 10 ಪಂದ್ಯಗಳಲ್ಲಿ ಸೋಲನ್ನು ಎದುರಿಸಿ ಕೇವಲ 4 ಪಂದ್ಯಗಳನ್ನು ಗೆಲ್ಲಲು ಸಾಧ್ಯವಾಗಿತ್ತು.

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?