Mumbai Indians: ಮುಂಬೈಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಂದಿನ ಪಂದ್ಯದಲ್ಲಿ ರೋಹಿತ್ ಪಡೆ ಹೀಗೆ ಮಾಡಬೇಕು
IPL 2021 Playoffs: ಮುಂಬೈ ತಂಡ ಹೈದರಾಬಾದ್ ತಂಡದ ವಿರುದ್ಧ ಸೆಣಸಾಡಿ ಬಹು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿ ಕೆಕೆಆರ್ ತಂಡಕ್ಕಿಂತ ಹೆಚ್ಚಿನ ನೆಟ್ ರನ್ ರೇಟ್ ಪಡೆದುಕೊಂಡರೆ ಮಾತ್ರ ಪ್ಲೇ ಆಫ್ ಹಂತವನ್ನು ಪ್ರವೇಶಿಸಬಹುದಾಗಿದೆ.
ಐಪಿಎಲ್ 2021ರ (IPL 2021) ಕೊನೇಯ ಲೀಗ್ ಪಂದ್ಯ ಇಂದು ನಡೆಯಲಿದ್ದು ಏಕಕಾಲದಲ್ಲಿ ಎರಡು ಮ್ಯಾಚ್ ಆಯೋಜಿಸಲಾಗಿದೆ. ಅದರಲ್ಲಿ ಸನ್ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ (SRH vs MI) ತಂಡಗಳ ನಡುವಣ ಸೆಣೆಸಾಟ ಕುತೂಹಲ ಕೆರಳಿಸಿದೆ. ಯಾಕಂದ್ರೆ ಕೆಕೆಆರ್ ನಿನ್ನೆ ರಾಜಸ್ಥಾನ್ (KKR vs RR) ವಿರುದ್ಧ ಗೆಲ್ಲುವ ಮೂಲಕ ರೋಹಿತ್ (Rohit Sharma) ಪಡೆಯ ಪ್ಲೇ ಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ. ನಾಲ್ಕನೇ ಸ್ಥಾನಕ್ಕೆ ಮುಂಬೈ ಅಥವಾ ಕೋಲ್ಕತ್ತಾ ಪೈಕಿ ಯಾವ ತಂಡ ಎಂಬುದು ಇಂದು ಖಚಿತವಾಗಲಿದೆ. ಹಾಗಾದ್ರೆ ಮುಂಬೈ ಇಂಡಿಯನ್ಸ್ (Mumbai Indians) ಪ್ಲೇ ಆಫ್ (IPL playoffs) ತಲುಪಬೇಕಾದರೆ ಏನು ಮಾಡಬೇಕು?, ಎಷ್ಟು ಮೊತ್ತದ ಅಂತರದಲ್ಲಿ ಗೆಲ್ಲಬೇಕು?, ಇಲ್ಲಿದೆ ನೋಡಿ ಲೆಕ್ಕಾಚಾರ.
ಮುಂಬೈ ಇಂಡಿಯನ್ಸ್ ತಂಡ ಒಟ್ಟು 13 ಪಂದ್ಯಗಳನ್ನು ಆಡಿದ್ದು ಆರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಏಳು ಪಂದ್ಯಗಳಲ್ಲಿ ಸೋತಿದೆ. ಒಟ್ಟು 12 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.048 ನೆಟ್ರೇಟ್ನೊಂದಿಗೆ ಆರನೇ ಸ್ಥಾನದಲ್ಲಿದೆ. ಇತ್ತ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಬರೋಬ್ಬರಿ 86 ರನ್‌ಗಳ ಅಂತರದಿಂದ ಗೆಲುವು ಸಾಧಿಸಿರುವುದರಿಂದ 14 ಅಂಕಗಳೊಂದಿಗೆ +0.587 ನೆಟ್ ರನ್ ರೇಟ್ ಪಡೆದುಕೊಂಡು ನಾಲ್ಕನೇ ಸ್ಥಾನದಲ್ಲಿದೆ.
ಮುಂಬೈ ತಂಡ ಹೈದರಾಬಾದ್ ತಂಡದ ವಿರುದ್ಧ ಸೆಣಸಾಡಿ ಬಹು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿ ಕೆಕೆಆರ್ ತಂಡಕ್ಕಿಂತ ಹೆಚ್ಚಿನ ನೆಟ್ ರನ್ ರೇಟ್ ಪಡೆದುಕೊಂಡರೆ ಮಾತ್ರ ಪ್ಲೇ ಆಫ್ ಹಂತವನ್ನು ಪ್ರವೇಶಿಸಬಹುದಾಗಿದೆ. ಇದಕ್ಕಾಗಿ ರೋಹಿತ್ ಪಡೆ 171 ರನ್‌ಗಳ ಅಂತರದಿಂದ ಗೆಲ್ಲಬೇಕಿದೆ. ಆದರೆ ಈ ಪಂದ್ಯದ ಟಾಸ್ ಈ ಲೆಕ್ಕಾಚಾರಗಳೆಲ್ಲ ಉಲ್ಟಾ ಮಾಡಿದರೆ ಅಚ್ಚರಿಯಿಲ್ಲ. ಈ ಪಂದ್ಯದಲ್ಲಿ ಹೈದರಾಬಾದ್ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡರೆ ಆ ಕ್ಷಣವೇ ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ ಹೊರಬೀಳಲಿದೆ.
ಒಂದುವೇಳೆ ಮುಂಬೈ ಇಂಡಿಯನ್ಸ್ ತಂಡವು ಟಾಸ್ ಗೆದ್ದರೆ ಮೊದಲು ಬ್ಯಾಟಿಂಗ್ ಆಯ್ದುಕೊಂಡು ಕಡ್ಡಾಯವಾಗಿ ಕನಿಷ್ಠವೆಂದರೂ 220 ರನ್‌ಗಳನ್ನು ಮುಂಬೈ ಇಂಡಿಯನ್ಸ್ ತಂಡ ಕಲೆ ಹಾಕಲೇಬೇಕಾಗಿದೆ. ಅಷ್ಟು ಮಾತ್ರವಲ್ಲದೇ 220 ರನ್ ಗಳಿಸಿ ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 49 ರನ್‌ಗಳಿಗೆ ಆಲೌಟ್ ಮಾಡಿ 171 ರನ್‌ಗಳಿಂದ ಮುಂಬೈ ಜಯ ಗಳಿಸಿದರೆ ಮಾತ್ರ ಪ್ಲೇ ಆಫ್ ಪ್ರವೇಶ ಸಾಧ್ಯ. ಹೀಗಾಗಿ ಮುಂಬೈ ಪ್ಲೇ ಆಫ್ ಹಾದಿ ತುಂಬಾನೆ ಕಠಿಣವಾಗಿದ್ದು, ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.
RCB Predicted XI: ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಆರ್ಸಿಬಿ ತಂಡದಿಂದ ಇಬ್ಬರು ಆಟಗಾರರು ಔಟ್: 2 ಬದಲಾವಣೆ ಖಚಿತ
RCB vs DC: ಆರ್ಸಿಬಿ ಎರಡನೇ ಸ್ಥಾನಕ್ಕೇರಲು ಇಂದಿನ ಪಂದ್ಯದಲ್ಲಿ ಏನೆಲ್ಲಾ ಮಾಡಬೇಕು: ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
(Mumbai Indians are still have the IPL 2021 playoffs qualification hopes Here how it is)