Mumbai Indians: ಸಾಲು ಸಾಲು ಪಂದ್ಯ ಸೋತು ಮುಂಬೈ ಪ್ಲೇ ಆಫ್ ಪ್ರವೇಶಿಸಿತ್ತು..!

Mumbai Indians: ಈಗಾಗಲೇ 11 ಪಂದ್ಯವನ್ನಾಡಿರುವ ಮುಂಬೈ ಇಂಡಿಯನ್ಸ್​​ಗೆ ಇನ್ನೂ 3 ಪಂದ್ಯಗಳು ಮಾತ್ರ ಉಳಿದಿವೆ. ಈ ಮೂರು ಪಂದ್ಯಗಳಲ್ಲಿ ರೋಹಿತ್ ಪಡೆ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಖಚಿತ.

Mumbai Indians: ಸಾಲು ಸಾಲು ಪಂದ್ಯ ಸೋತು ಮುಂಬೈ ಪ್ಲೇ ಆಫ್ ಪ್ರವೇಶಿಸಿತ್ತು..!
Mumbai Indians
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 29, 2021 | 3:42 PM

ಮೊದಲಾರ್ಧದ ಐಪಿಎಲ್​ ಮುಕ್ತಾಯದ ವೇಳೆಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್​ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು. ಆದರೆ ಯುಎಇನಲ್ಲಿ ಶುರುವಾದ ದ್ವಿತಿಯಾರ್ಧದಲ್ಲಿ ರೋಹಿತ್ ಪಡೆಯ ಲೆಕ್ಕಾಚಾರಗಳು ತಲೆಕೆಳಗಾದವು. ಏಕೆಂದರೆ ಮರಳುಗಾಡಿನ ಮೈದಾನದಲ್ಲಿ ಹ್ಯಾಟ್ರಿಕ್​ ಸೋಲನುಭವಿಸುವ ಮೂಲಕ ಮುಂಬೈ ಇಂಡಿಯನ್ಸ್​ ಅಂಕ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿತ್ತು. ಇದೀಗ ಪಂಜಾಬ್ ಕಿಂಗ್ಸ್​ ವಿರುದ್ದದ ಜಯದೊಂದಿಗೆ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಅಲ್ಲದೆ ಪಾಯಿಂಟ್​ ಟೇಬಲ್​​ನಲ್ಲಿ 5ನೇ ಸ್ಥಾನಕ್ಕೇರಿದೆ. ಈ ಮೂಲಕ ಮತ್ತೆ ಪ್ಲೇ ಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ.

ಈಗಾಗಲೇ 11 ಪಂದ್ಯವನ್ನಾಡಿರುವ ಮುಂಬೈ ಇಂಡಿಯನ್ಸ್​​ಗೆ ಇನ್ನೂ 3 ಪಂದ್ಯಗಳು ಮಾತ್ರ ಉಳಿದಿವೆ. ಈ ಮೂರು ಪಂದ್ಯಗಳಲ್ಲಿ ರೋಹಿತ್ ಪಡೆ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಖಚಿತ. ಏಕೆಂದರೆ ಮುಂದಿನ ಮೂರು ಜಯ ಮುಂಬೈ ತಂಡವನ್ನು ಅಂಕಪಟ್ಟಿಯಲ್ಲಿ 2ನೇ ಅಥವಾ 3ನೇ ಸ್ಥಾನಕ್ಕೆ ತಂದು ನಿಲ್ಲಿಸಲಿದೆ. ಅಷ್ಟೇ ಅಲ್ಲದೆ 16 ಅಂಕಗಳೊಂದಿಗೆ ಅಗ್ರ ಮೂರು ತಂಡಗಳೊಂದಿಗೆ ಪ್ಲೇ ಆಫ್​ ಖಚಿತಪಡಿಸಿಕೊಳ್ಳಬಹುದು. ಅಂದರೆ ಪ್ಲೇಆಫ್ ಖಚಿತಪಡಿಸಿಕೊಳ್ಳಲು ಮುಂಬೈ ಇಂಡಿಯನ್ಸ್​ ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್​ ಹಾಗೂ ಸನ್​ರೈಸರ್ಸ್​​ ಹೈದರಾಬಾದ್ ವಿರುದ್ದ ಗೆಲ್ಲಬೇಕಿದೆ.

ಇನ್ನು 3 ಪಂದ್ಯಗಳ ಪೈಕಿ 2 ಪಂದ್ಯಗಳಲ್ಲಿ ಗೆದ್ದು, ಒಂದು ಪಂದ್ಯವನ್ನು ಸೋತರೆ 14 ಅಂಕಗಳನ್ನು ಪಡೆದುಕೊಳ್ಳಲಿದೆ. ಆ ಮೂಲಕ ಕೂಡ ನಾಲ್ಕನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸುವ ಅವಕಾಶವಿದೆ. ಆದರೆ ಈ ವೇಳೆ ಉಳಿದ ತಂಡಗಳ ನಡುವಿನ ಪಂದ್ಯಗಳ ಫಲಿತಾಂಶದ ಮೇಲೆ ಅವಲಂಬಿತವಾಗಬೇಕಾಗುತ್ತದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ ಉತ್ತಮವಾಗಿರಬೇಕಾದ ಅನಿವಾರ್ಯತೆಯಿದೆ.  ಈ ಹಿಂದಿನ ಅಂಕಿ ಅಂಶಗಳನ್ನು ನೋಡಿದ್ರೆ  ಅನಿವಾರ್ಯ ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಪ್ಲೇ ಆಫ್​ಗೆ ಲಗ್ಗೆಯಿಟ್ಟ ಇತಿಹಾಸ ಮುಂಬೈ ಇಂಡಿಯನ್ಸ್​ ಹೆಸರಿನಲ್ಲಿದೆ.

ಐಪಿಎಲ್ 2014 ರಲ್ಲಿ, ಮುಂಬೈ ಇಂಡಿಯನ್ಸ್ ಅತ್ಯಂತ ಕೆಟ್ಟ ಆರಂಭ ಪಡೆದಿತ್ತು. ಯುಎಇಯಲ್ಲಿ ನಿಗದಿಯಾಗಿದ್ದ ಮೊದಲ 5 ಪಂದ್ಯಗಳಲ್ಲಿ ಮುಂಬೈ ಸೋಲನುಭವಿಸಿತ್ತು. ಇದಾದ ಬಳಿಕ ಕಂಬ್ಯಾಕ್ ಮಾಡಿದ್ದ ಮುಂಬೈ ಮುಂದಿನ 9 ಪಂದ್ಯಗಳಲ್ಲಿ 7 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿತು. ಲೀಗ್‌ನ ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 5 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ರನ್​ರೇಟ್​ ಆಧಾರದ ಮೇಲೆ ಪ್ಲೇ ಆಫ್‌ಗೆ ಅರ್ಹತೆ ಪಡೆದಿತ್ತು.

ಅಷ್ಟೇ ಅಲ್ಲದೆ ಐಪಿಎಲ್ 2015 ರಲ್ಲಿ, ಮುಂಬೈ ಇಂಡಿಯನ್ಸ್ ಮೊದಲ 4 ಪಂದ್ಯಗಳಲ್ಲಿ ಹೀನಾಯವಾಗಿ ಸೋಲನುಭವಿಸಿತ್ತು. ಅಲ್ಲದೆ ಮೊದಲ 6 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಪರಾಜಯಗೊಂಡಿತ್ತು. ದ್ವಿತಿಯಾರ್ಧದ ಆರಂಭಕ್ಕೂ ಮುನ್ನ ಪಾಯಿಂಟ್​ ಟೇಬಲ್​ನಲ್ಲಿ 7ನೇ ಸ್ಥಾನದಲ್ಲಿದ್ದ ಮುಂಬೈ ನಂತರ ಪುಟಿದೆದ್ದು ಮುಂದಿನ 8 ಪಂದ್ಯಗಳಲ್ಲಿ 7 ರಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿ ಪ್ಲೇ ಆಫ್ ಆಡಿತ್ತು. ಅಷ್ಟೇ ಅಲ್ಲದೆ 2015 ರಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿ ಮುಂಬೈ ಇಂಡಿಯನ್ಸ್​ ಹೊಸ ಇತಿಹಾಸ ನಿರ್ಮಿಸಿತ್ತು. ಇದೀಗ ಮತ್ತೊಮ್ಮೆ ಸತತ ಸೋಲಿನ ಬಳಿಕ ಮುಂಬೈ ಗೆಲುವಿನ ಟ್ರ್ಯಾಕ್​ಗೆ ಮರಳಿದೆ. ಅಲ್ಲದೆ ಈ ಹಿಂದಿನಂತೆ ಅದ್ಭುತ ಕಂಬ್ಯಾಕ್​ನೊಂದಿಗೆ ಮುಂಬೈ ಇಂಡಿಯನ್ಸ್​ ಪ್ಲೇ ಆಫ್​ ಪ್ರವೇಶಿಸಿದರೆ ಅಚ್ಚರಿಪಡಬೇಕಿಲ್ಲ ಎಂದೇ ಹೇಳಬಹುದು.

ಇದನ್ನೂ ಓದಿ: IPL 2021: ಇದು ಅಂತಿಂಥ ಗೆಲುವಲ್ಲ…ಮುಂಬೈ ದಾಖಲೆಯನ್ನು ಅಳಿಸಿ ಹಾಕಿದ RCB

ಇದನ್ನೂ ಓದಿ: IPL 2021: RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು ಇವರೇ..!

ಇದನ್ನೂ ಓದಿ: Crime News: ತಾಯಿಗೆ ಅನೈತಿಕ ಸಂಬಂಧ: ಅದನ್ನೇ ಬಂಡವಾಳ ಮಾಡಿಕೊಂಡ ಮಗಳು

(Mumbai Indians Greatest comebacks in IPL History to reach playoffs)

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ