AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಮುಂಬೈ ತಂಡದಿಂದ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ ಗೆಳತಿಯೊಂದಿಗೆ ಸುತ್ತಾಟ

Hardik Pandya: ಹಾರ್ದಿಕ್ ಪಾಂಡ್ಯ ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್‌ನ RCB ವಿರುದ್ಧದ ಪಂದ್ಯದಿಂದ ಹೊರಗುಳಿದಿರುವುದು ವರದಿಯಾಗಿದೆ. ತಂಡದೊಂದಿಗೆ ರಾಯ್‌ಪುರಕ್ಕೆ ಪ್ರಯಾಣಿಸಿಲ್ಲ. ಕಳಪೆ ನಾಯಕತ್ವ ಮತ್ತು ಪ್ರದರ್ಶನದಿಂದಾಗಿ ಅವರನ್ನು ಕೈಬಿಡಲಾಗಿದೆ ಎಂಬ ಊಹಾಪೋಹಗಳಿವೆ. ಎಂಟು ಪಂದ್ಯಗಳಲ್ಲಿ ಕೇವಲ 146 ರನ್ ಹಾಗೂ 4 ವಿಕೆಟ್ ಪಡೆದಿರುವ ಪಾಂಡ್ಯ ಅವರ ಭವಿಷ್ಯ ಅನಿಶ್ಚಿತವಾಗಿದೆ.

IPL 2026: ಮುಂಬೈ ತಂಡದಿಂದ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ ಗೆಳತಿಯೊಂದಿಗೆ ಸುತ್ತಾಟ
Hardik Pandya
ಪೃಥ್ವಿಶಂಕರ
|

Updated on: May 06, 2026 | 6:18 PM

Share

ಐಪಿಎಲ್ 2026 (IPL 2026) ರಲ್ಲಿ ಮುಂಬೈ ಇಂಡಿಯನ್ಸ್ ತಂಡವು, ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ವಿರುದ್ಧ ರಾಯ್‌ಪುರದಲ್ಲಿ ತಮ್ಮ ಮುಂದಿನ ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಬಗ್ಗೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಭಾಗವಹಿಸುವ ಸಾಧ್ಯತೆ ಕಡಿಮೆ ಇದ್ದು, ಇದಕ್ಕೆ ಪೂರಕವಾಗಿ ಅವರು ಮುಂಬೈ ಇಂಡಿಯನ್ಸ್ ತಂಡದೊಂದಿಗೆ ರಾಯ್‌ಪುರಕ್ಕೆ ಪ್ರಯಾಣಿಸಿಲ್ಲ ಎಂದು ವರದಿಯಾಗಿದೆ. ಆರ್​​ಸಿಬಿ ವಿರುದ್ಧದ ಈ ಪಂದ್ಯ ಮೇ 10 ರಂದು ನಡೆಯಲಿದ್ದು, ಮುಂಬೈ ತಂಡವು ಮೇ 6 ರ ಮಧ್ಯಾಹ್ನ ರಾಯ್‌ಪುರಕ್ಕೆ ತೆರಳಿದೆ. ಆದರೆ ನಾಯಕ ಹಾರ್ದಿಕ್ ಪಾಂಡ್ಯ ತಂಡದೊಂದಿಗೆ ಕಾಣಿಸಿಕೊಂಡಿಲ್ಲ. ಪಾಂಡ್ಯ ಶೀಘ್ರದಲ್ಲೇ ತಂಡವನ್ನು ಸೇರುವ ಯಾವುದೇ ಸೂಚನೆ ಇನ್ನೂ ಇಲ್ಲ.

ಹಾರ್ದಿಕ್ ಪಾಂಡ್ಯ ಆಟ ಮುಗಿಯಿತೇ?

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಲಕ್ನೋ ಸೂಪರ್‌ಜೈಂಟ್ಸ್ ತಂಡದ ನಾಯಕತ್ವ ವಹಿಸಿದ್ದರು. ತಂಡವು ಏಕಪಕ್ಷೀಯವಾಗಿ ಆ ಪಂದ್ಯವನ್ನು ಗೆದ್ದುಕೊಂಡಿತು. ಪಂದ್ಯದ ಸಮಯದಲ್ಲಿ ಪಾಂಡ್ಯ ಅಲಭ್ಯತೆಯ ಬಗ್ಗೆ ಮಾತನಾಡಿದ್ದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಗಾಯದಿಂದಾಗಿ ಆಡುತ್ತಿಲ್ಲ ಎಂದು ಹೇಳಿದ್ದರು. ಆದಾಗ್ಯೂ, ಪಾಂಡ್ಯ ಅವರ ಅಲಭ್ಯತೆಯನ್ನು ಬೇರೆ ದೃಷ್ಟಿಕೋನದಿಂದ ನೋಡಲಾಗುತ್ತಿದೆ. ಪಾಂಡ್ಯ ಅವರ ನಾಯಕತ್ವ ಮತ್ತು ಪ್ರದರ್ಶನದ ಬಗ್ಗೆ ತಂಡದ ಆಡಳಿತ ಮಂಡಳಿ ಅತೃಪ್ತವಾಗಿದ್ದು, ಅದಕ್ಕಾಗಿಯೇ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂಬ ಊಹಾಪೋಹಗಳಿವೆ.

ಗಾಯದ ಕಾರಣದಿಂದಾಗಿ ಐಪಿಎಲ್​ನಿಂದ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ, ತಂಡದಿಂದ ಹೊರಗಿದ್ದು, ತಮ್ಮ ಗೆಳತಿ ಮಹಿಕಾ ಅವರೊಂದಿಗೆ ಸುತ್ತಾಟ ನಡೆಸುತ್ತಿದ್ದಾರೆ. ಪಾಂಡ್ಯ ತಮ್ಮ ಗೆಳತಿಯೊಂದಿಗೆ ಫೆರಾರಿ ಕಾರಿನಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ರಸ್ತುತ ಹಾರ್ದಿಕ್ ಪ್ರದರ್ಶನ

ಐಪಿಎಲ್ 2026 ರಲ್ಲಿ ಹಾರ್ದಿಕ್ ಪಾಂಡ್ಯ ಇದುವರೆಗೆ ಒಟ್ಟು ಎಂಟು ಪಂದ್ಯಗಳನ್ನಾಡಿದ್ದು, 20.8 ಸರಾಸರಿಯಲ್ಲಿ ಕೇವಲ 146 ರನ್ ಗಳಿಸಿದ್ದಾರೆ. ಕೇವಲ ನಾಲ್ಕು ಸಿಕ್ಸರ್‌ಗಳನ್ನು ಮಾತ್ರ ಹೊಡೆದಿದ್ದಾರೆ. ಬೌಲಿಂಗ್​ನಲ್ಲೂ ಪರಿಣಾಮ ಬೀರದ ಪಾಂಡ್ಯ ಎಂಟು ಪಂದ್ಯಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದು, ಅವರ ಎಕಾನಮಿ ರೇಟ್ ಪ್ರತಿ ಓವರ್‌ಗೆ 11.9 ರನ್‌ಗಳಾಗಿದೆ. ಇದಲ್ಲದೆ, ಅವರ ನಾಯಕತ್ವವನ್ನು ಟೀಕಿಸಲಾಗುತ್ತಿದೆ. ಬುಮ್ರಾ ಅವರಂತಹ ಬೌಲರ್‌ಗಳನ್ನು ಅವರು ಸರಿಯಾಗಿ ಬಳಸಿಕೊಂಡಿಲ್ಲ ಎಂಬ ಆರೋಪಗಳು ಇವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ