Mumbai Indians: ಹಾರ್ದಿಕ್ಗೆ ತಲೆನೋವಾದ ನರೇಂದ್ರ ಮೋದಿ ಸ್ಟೇಡಿಯಂ: 11 ವರ್ಷಗಳಲ್ಲಿ ಒಂದೂ ಪಂದ್ಯ ಗೆದ್ದಿಲ್ಲ
PBKS vs MI, IPL 2025: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ದುರದೃಷ್ಟಕರವೆಂದೇ ಹೇಳಬಹುದು. ಕಳೆದ 6 ಪಂದ್ಯಗಳಲ್ಲಿ, ತಂಡವು 5 ಪಂದ್ಯಗಳಲ್ಲಿ ಸೋಲನ್ನು ಎದುರಿಸಬೇಕಾಯಿತು. ಮುಂಬೈ ಇಂಡಿಯನ್ಸ್ ಈ ಮೈದಾನದಲ್ಲಿ ಕೊನೆಯ ಬಾರಿಗೆ 2014 ರಲ್ಲಿ ಜಯಗಳಿಸಿತ್ತು. ಎಂಐ ಬರೋಬ್ಬರಿ 11 ವರ್ಷಗಳಿಂದ ಈ ಮೈದಾನದಲ್ಲಿ ಯಾವುದೇ ಪಂದ್ಯವನ್ನು ಗೆದ್ದಿಲ್ಲ.

ಬೆಂಗಳೂರು (ಜೂ. 01): ಐಪಿಎಲ್ 2025 ರ ಎರಡನೇ ಕ್ವಾಲಿಫೈಯರ್ ಪಂದ್ಯವು ಜೂನ್ 01 ರಂದು ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ (MI vs PBKS) ನಡುವೆ ನಡೆಯಲಿದೆ. ಈ ಪಂದ್ಯವನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಸೋತ ನಂತರ ಪಂಜಾಬ್ ಕಿಂಗ್ಸ್ ತಂಡ ಈ ಪಂದ್ಯವನ್ನು ಆಡುತ್ತಿದ್ದರೆ, ಮುಂಬೈ ಇಂಡಿಯನ್ಸ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ತಂಡವನ್ನು ಸೋಲಿಸಿ ಇಂದು ಕಣಕ್ಕಿಳಿಯುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ಟೆನ್ಶನ್ ಶುರುವಾಗಿದೆ. ಇದಕ್ಕೆ ಕಾರಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಂಬೈ ತಂಡದ ಅಂಕಿಅಂಶ.
ಅಹಮದಾಬಾದ್ ಮೈದಾನ ಮುಂಬೈಗೆ ದುರದೃಷ್ಟಕರ
ಅಹಮದಾಬಾದ್‌ನ ಈ ಮೈದಾನವು ಮುಂಬೈ ಇಂಡಿಯನ್ಸ್ ತಂಡಕ್ಕೆ ದುರದೃಷ್ಟಕರವೆಂದೇ ಹೇಳಬಹುದು. ಕಳೆದ 6 ಪಂದ್ಯಗಳಲ್ಲಿ, ತಂಡವು 5 ಪಂದ್ಯಗಳಲ್ಲಿ ಸೋಲನ್ನು ಎದುರಿಸಬೇಕಾಯಿತು. ಮುಂಬೈ ಇಂಡಿಯನ್ಸ್ ಈ ಮೈದಾನದಲ್ಲಿ ಕೊನೆಯ ಬಾರಿಗೆ 2014 ರಲ್ಲಿ ಜಯಗಳಿಸಿತ್ತು. ಎಂಐ ಬರೋಬ್ಬರಿ 11 ವರ್ಷಗಳಿಂದ ಈ ಮೈದಾನದಲ್ಲಿ ಯಾವುದೇ ಪಂದ್ಯವನ್ನು ಗೆದ್ದಿಲ್ಲ. ಈ ಅಂಕಿಅಂಶಗಳನ್ನು ನೋಡಿದರೆ, ಈ ಮೈದಾನ ಮುಂಬೈ ಇಂಡಿಯನ್ಸ್‌ಗೆ ತುಂಬಾ ದುರದೃಷ್ಟಕರವಾಗಿದೆ ಎಂದು ಹೇಳುವುದು ತಪ್ಪಾಗಲಾರದು.
ಮುಂಬೈ ಇಂಡಿಯನ್ಸ್ ತಂಡವು ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿದ್ದರೂ, ಈ ಅಂಕಿಅಂಶಗಳನ್ನು ನೋಡಿದ ನಂತರ ನಾಯಕ ಹಾರ್ದಿಕ್ ಪಾಂಡ್ಯಗೆ ತಲೆ ಹಾಳಾಗುವುದು ಖಚಿತ. ಮುಂಬರುವ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಅವರು ಈ ಸೋಲಿನ ಸರಣಿಯನ್ನು ಮುರಿಯುತ್ತಾರ ಎಂಬುದು ನೋಡಬೇಕಿದೆ.
MI vs PBKS Weather: ಪಂಜಾಬ್-ಮುಂಬೈ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಅಡ್ಡಿ?, ಹವಾಮಾನ ಹೇಗಿದೆ?
ಈ ಮೈದಾನದಲ್ಲಿ MI ಕೊನೆಯ ಪಂದ್ಯವನ್ನು ಯಾವಾಗ ಆಡಿತು?
ಮುಂಬೈ ಇಂಡಿಯನ್ಸ್ ತಂಡವು ಇದೇ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ತಮ್ಮ ಕೊನೆಯ ಪಂದ್ಯವನ್ನು ಇದೇ ಮೈದಾನದಲ್ಲಿ ಆಡಿತು, ಇಲ್ಲಿ ಅವರು 36 ರನ್‌ಗಳಿಂದ ಸೋಲನ್ನು ಅನುಭವಿಸಬೇಕಾಯಿತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 8 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ 160 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಆ ಪಂದ್ಯದಲ್ಲಿ, ಪ್ರಸಿದ್ಧ ಕೃಷ್ಣ ಗುಜರಾತ್ ಪರ ಅದ್ಭುತ ಬೌಲಿಂಗ್ ಮಾಡಿದರು. ಅವರು ತಮ್ಮ ನಾಲ್ಕು ಓವರ್‌ಗಳ ಅವಧಿಯಲ್ಲಿ ಕೇವಲ 18 ರನ್‌ಗಳಿಗೆ ಎರಡು ವಿಕೆಟ್‌ಗಳನ್ನು ಪಡೆದರು. ಈ ಅದ್ಭುತ ಬೌಲಿಂಗ್‌ಗಾಗಿ, ಅವರು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.
ಜಿಟಿ ವಿರುದ್ಧದ ಕೊನೆಯ ಪಂದ್ಯದಲ್ಲಿ ಎಂಐ ಪ್ರದರ್ಶನ ಹೇಗಿತ್ತು?
ಮುಂಬೈ ಇಂಡಿಯನ್ಸ್ ತಂಡವು ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿದೆ. ಅವರು ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಿದರು. MI ಗೆ ಒಳ್ಳೆಯ ವಿಷಯವೆಂದರೆ ಅವರ ಎಲ್ಲಾ ಆಟಗಾರರು ಫಾರ್ಮ್‌ನಲ್ಲಿದ್ದಾರೆ. ಗುಜರಾತ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ರೋಹಿತ್ 80 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಅವರಲ್ಲದೆ, ಇತರ ಆಟಗಾರರು ಸಹ ಉತ್ತಮವಾಗಿ ಬ್ಯಾಟಿಂಗ್ ಮಾಡಿದರು, ಇದರಿಂದಾಗಿ ತಂಡವು ಜಿಟಿ ವಿರುದ್ಧ ಸುಲಭ ಗೆಲುವು ಸಾಧಿಸಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




