IPL 2025: ಮುಂಬೈಗೆ ಮರ್ಮಾಘಾತ; ಆರಂಭಿಕ ಪಂದ್ಯಗಳಿಗೆ ಜಸ್ಪ್ರೀತ್ ಬುಮ್ರಾ ಅಲಭ್ಯ
Jasprit Bumrah injury: ಮುಂಬೈ ಇಂಡಿಯನ್ಸ್ ತಂಡಕ್ಕೆ ಐಪಿಎಲ್ ಆರಂಭಕ್ಕೂ ಮುನ್ನ ದೊಡ್ಡ ಆಘಾತ ಎದುರಾಗಿದೆ. ಹಾರ್ದಿಕ್ ಪಾಂಡ್ಯ ಅವರು ತಂಡದ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಇದಲ್ಲದೆ, ತಂಡದ ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಮೊದಲ ಪಂದ್ಯದಲ್ಲಿ ಆಡುವುದಿಲ್ಲ ಎಂದು ಖಚಿತವಾಗಿದೆ. ಮಾರ್ಚ್ 23 ರಂದು ಚೆನ್ನೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುವ ಮುಂಬೈನ ಮೊದಲ ಪಂದ್ಯಕ್ಕೆ ಇದು ದೊಡ್ಡ ಹಿನ್ನಡೆಯಾಗಿದೆ.

ಐಪಿಎಲ್ (IPL 2025) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವಾಗ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಈಗಾಗಲೇ ಕಳೆದ ಐಪಿಎಲ್‌ನಲ್ಲಿ ಮಾಡಿದ ತಪ್ಪಿಗಾಗಿ ತಂಡದ ನಿಯಮಿತ ನಾಯಕ ಹಾರ್ದಿಕ್ ಪಾಂಡ್ಯ ತಂಡದ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇದೀಗ ತಂಡದ ಬೌಲಿಂಗ್ ಜೀವಾಳ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ (Jasprit Bumrah) ಲೀಗ್ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯ ಮಾರ್ಚ್ 23 ರಂದು ಚೆನ್ನೈನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಆಡದಿರುವುದು ಇದೀಗ ಖಚಿತವಾಗಿದೆ.
ಮುಖ್ಯ ಕೋಚ್ ಹೇಳಿದ್ದೇನು?
ಮಾರ್ಚ್ 19 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಮಹೇಲ ಜಯವರ್ಧನೆ, ‘ಜಸ್ಪ್ರೀತ್ ಬುಮ್ರಾ ಯಾವಾಗ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುತ್ತಾರೆ ಎಂಬುದರ ಬಗ್ಗೆ ಯಾವುದೇ ಖಚಿತ ಮಾಹಿತಿ ಸಿಕ್ಕಿಲ್ಲ. ಬುಮ್ರಾ ಅವರ ಅನುಪಸ್ಥಿತಿಯು ನಮ್ಮ ತಂಡಕ್ಕೆ ಇದೀಗ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರಸ್ತುತ ಬುಮ್ರಾ ಬೆಂಗಳೂರಿನಲ್ಲಿರುವ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ರಿಹ್ಯಾಬ್ಗೆ ಒಳಗಾಗಿದ್ದಾರೆ.
ಇದನ್ನೂ ಓದಿ: IPL 2025: ಐಪಿಎಲ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದ ಬಿಸಿಸಿಐ
ಪ್ರಸ್ತುತ ಎನ್ಸಿಎ ಅಧಿಕಾರಿಗಳಿಂದ ಬುಮ್ರಾ ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಹಾಗೆಯೇ ಬುಮ್ರಾ ಐಪಿಎಲ್‌ನಲ್ಲಿ ಆಡುವುದಕ್ಕೂ ಎನ್ಸಿಎಯಿಂದ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎಂದಿದ್ದಾರೆ. ಜಯವರ್ಧನೆ ಈ ರೀತಿ ಹೇಳಿಕೆ ನೀಡಿರುವುದು ಮುಂಬೈ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ್ದು, ಸಧ್ಯಕ್ಕಂತೂ ಬುಮ್ರಾ, ಟೂರ್ನಿಯ ಮೊದಲ ಕೆಲವು ಪಂದ್ಯಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂಬುದು ಖಚಿತವಾದಂತ್ತಾಗಿದೆ.
Mahela Jayawardene hands update about Jasprit Bumrah 🏏#JaspritBumrah #MumbaiIndians #MI #IPL #IPL2025 #CricketTwitter pic.twitter.com/uRZz99WTaS
— InsideSport (@InsideSportIND) March 19, 2025
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್, ರೋಹಿತ್ ಶರ್ಮಾ, ತಿಲಕ್ ವರ್ಮಾ, ಜಸ್ಪ್ರೀತ್ ಬುಮ್ರಾ, ಬೆವೊನ್ ಜೇಕಬ್ಸ್, ರಯಾನ್ ರಿಕಲ್ಟನ್, ರಾಬಿನ್ ಮಿಂಜ್, ಕೃಷ್ಣನ್ ಶ್ರೀಜೀತ್, ನಮನ್ ಧೀರ್, ರಾಜ್ ಅಂಗದ್ ಬಾವಾ, ವಿಘ್ನೇಶ್ ಪುತ್ತೂರ್, ವಿಲ್ ಜಾಕ್ಸ್, ಮಿಚೆಲ್ ಸ್ಯಾಂಟ್ನರ್, ಅರ್ಜುನ್ ತೆಂಡೂಲ್ಕರ್, ಅಶ್ವಿನಿ ಕುಮಾರ್, ರೀಸ್ ಟೋಪ್ಲಿ, ಕರ್ಣ್ ಶರ್ಮಾ, ಟ್ರೆಂಟ್ ಬೌಲ್ಟ್, ದೀಪಕ್ ಚಾಹರ್, ವೆಂಕಟ್ ಸತ್ಯನಾರಾಯಣ ರಾಜು, ಮುಜೀಬ್-ಉರ್-ರಹಮಾನ್, ಕಾರ್ಬಿನ್ ಬಾಷ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:40 pm, Wed, 19 March 25