IPL 2023 Points Table: ಪಾಯಿಂಟ್ ಟೇಬಲ್​ನಲ್ಲಿ ಮೇಲೇರಿದ ಮುಂಬೈ ಇಂಡಿಯನ್ಸ್: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?

|

Updated on: May 04, 2023 | 9:32 AM

IPL 2023 Orange-Purple Cap: ಎಲ್​ಎಸ್​ಜಿ-ಸಿಎಸ್​ಕೆ ಪಂದ್ಯ ಮಳೆಯಿಂದ ರದ್ದಾದರೆ ಪಂಜಾಬ್- ಮುಂಬೈ ಕದನದಲ್ಲಿ ರೋಹಿತ್ ಪಡೆ 6 ವಿಕೆಟ್​ಗಳ ಜಯ ಸಾಧಿಸಿತು. ಇದೀಗ ಈ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್​ ಹೇಗಿದೆ?, ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL 2023 Points Table: ಪಾಯಿಂಟ್ ಟೇಬಲ್​ನಲ್ಲಿ ಮೇಲೇರಿದ ಮುಂಬೈ ಇಂಡಿಯನ್ಸ್: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?
Mumbai Indians
Follow us on

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 46 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಸುಲಭವಾಗಿ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಸಾಮಾನ್ಯವಾಗುತ್ತಿದೆ. ಬುಧವಾರ ಲಖನೌ ಸೂಪರ್ ಜೇಂಟ್ಸ್- ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್- ಮುಂಬೈ ಇಂಡಿಯನ್ಸ್ (PBKS vs MI) ನಡುವೆ ಪಂದ್ಯ ನಡೆಯಿತು. ಎಲ್​ಎಸ್​ಜಿ-ಸಿಎಸ್​ಕೆ ಪಂದ್ಯ ಮಳೆಯಿಂದ ರದ್ದಾದರೆ ಪಂಜಾಬ್- ಮುಂಬೈ ಕದನದಲ್ಲಿ ರೋಹಿತ್ ಪಡೆ 6 ವಿಕೆಟ್​ಗಳ ಜಯ ಸಾಧಿಸಿತು. ಇದೀಗ ಈ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಗುಜರಾತ್ ಟೈಟಾನ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ ಒಂಬತ್ತು ಪಂದ್ಯಗಳಲ್ಲಿ ಆರು ಗೆಲುವು, ಮೂರು ಸೋಲುಂಡು +0.532 ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.
  • ಲಖನೌ ಸೂಪರ್ ಜೇಂಟ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಆಡಿದ ಹತ್ತು ಪಂದ್ಯಗಳಲ್ಲಿ ಐದು ಗೆಲುವು, ನಾಲ್ಕು ಸೋಲು ಕಂಡು 11 ಅಂಕ ಸಂಪಾದಿಸಿ +0.639 ರನ್​ರೇಟ್​ ಹೊಂದಿದೆ.
  • ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯಗಳಲ್ಲಿ ಐದರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು ಒಟ್ಟು 11 ಅಂಕ ಸಂಪಾದಿಸಿದೆ. +0.329 ರನ್​ರೇಟ್ ಹೊಂದಿದೆ.
  • ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಆಡಿದ 9 ಪಂದ್ಯಗಳಲ್ಲಿ ಐದು ಗೆಲುವು, ನಾಲ್ಕರಲ್ಲಿ ಸೋಲುಂಡು +0.800 ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸ್ಥಾನದಲ್ಲಿದೆ. ಆಡಿದ ಒಂಬತ್ತು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.030 ರನ್​ರೇಟ್ ಹೊಂದಿದೆ.
  • ಪಂಜಾಬ್ ವಿರುದ್ಧ ಗೆದ್ದ ಬಳಿಕ ಮುಂಬೈ ಇಂಡಿಯನ್ಸ್ ಮೇಲಕ್ಕೆರಿ ಆರನೇ ಸ್ಥಾನದಲ್ಲಿದೆ. ಆಡಿದ 9 ಪಂದ್ಯದಲ್ಲಿ 4 ಸೋಲು, ಐದು ಗೆಲುವು ಕಂಡು 10 ಅಂಕ ಸಂಪಾದಿಸಿ -0.373 ರನ್​ರೇಟ್ ಹೊಂದಿದೆ.
  • ಪಂಜಾಬ್ ಕಿಂಗ್ಸ್ ಆಡಿದ ಹತ್ತು ಪಂದ್ಯಗಳಲ್ಲಿ ಐದು ಸೋಲು- ಐದು ಜಯ ಕಂಡು 10 ಅಂಕ ಹೊಂದಿ -0.472ರನ್​ರೇಟ್​ನೊಂದಿಗೆ ಏಳನೇ ಸ್ಥಾನಕ್ಕೆ ಕುಸಿದಿದೆ.
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಪ್ಲೇಸ್​ನಲ್ಲಿದೆ. ಆಡಿದ ಒಂಬತ್ತು ಪಂದ್ಯಗಳಲ್ಲಿ ಮೂರು ಗೆಲುವು, ಆರರಲ್ಲಿ ಸೋಲುಂಡು -0.147 ರನ್​ರೇಟ್​ನೊಂದಿಗೆ 6 ಅಂಕ ಸಂಪಾದಿಸಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯದಲ್ಲಿ ಐದರಲ್ಲಿ ಸೋಲು ಮೂರರಲ್ಲಿ ಜಯ ಕಂಡು 6 ಅಂಕ ಸಂಪಾದಿಸಿ -0.577 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ 9 ಪಂದ್ಯಗಳ ಪೈಕಿ ಕೇವಲ ಮೂರರಲ್ಲಷ್ಟೆ ಜಯ ಸಾಧಿಸಿ 6 ಅಂಕ ಸಂಪಾದಿಸಿ -0.768 ರನ್​ರೇಟ್ ಹೊಂದಿದೆ.

IPL 2023: RCB ಆಟಗಾರನ ಮಗನಿಗೆ ವಿಶೇಷ ಗಿಫ್ಟ್ ಕಳಿಸಿದ ವಿರಾಟ್ ಕೊಹ್ಲಿ

ಆರೆಂಜ್ ಕ್ಯಾಪ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಪುನಃ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಒಂಬತ್ತು ಪಂದ್ಯಗಳಲ್ಲಿ ಐದು ಅರ್ಧಶತಕ ಸಿಡಿಸಿ ಒಟ್ಟು 466 ರನ್ ಗಳಿಸಿದ್ದಾರೆ. ರಾಜಸ್ಥಾನ್ ತಂಡದ ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇವರು ಆಡಿದ ಒಂಬತ್ತು ಪಂದ್ಯಗಳಲ್ಲಿ ಮೂರು ಅರ್ಧಶತಕ, 1 ಶತಕ ಸಿಡಿಸಿ ಒಟ್ಟು 428 ರನ್ ಕಲೆಹಾಕಿದ್ದಾರೆ. ಸಿಎಸ್​ಕೆ ತಂಡದ ಡೆವೊನ್ ಕಾನ್ವೇ ಮೂರನೇ ಸ್ಥಾನದಲ್ಲಿದ್ದು 10 ಪಂದ್ಯಗಳಿಂದ 414 ರನ್ ಗಳಿಸಿದ್ದಾರೆ.

ಇದನ್ನೂ ಓದಿ
PBKS vs MI: ಐಪಿಎಲ್​ನಲ್ಲಿ ಇತಿಹಾಸ ರಚಿಸಿದ ಮುಂಬೈ ಇಂಡಿಯನ್ಸ್: ಈವರೆಗೆ ಯಾವ ತಂಡ ಕೂಡ ಮಾಡಿಲ್ಲ ಈ ಸಾಧನೆ
SRH vs KkR, IPL 2023: ಐಪಿಎಲ್​ನಲ್ಲಿಂದು ಹೈದರಾಬಾದ್-ಕೋಲ್ಕತ್ತಾ ಮುಖಾಮುಖಿ: ಉಭಯ ತಂಡಗಳಿಗೆ ಗೆಲುವು ಅನಿವಾರ್ಯ
IPL 2023: ಪ್ರತಿ ಸೀಸನ್ ಐಪಿಎಲ್ ಆಡಿದ 7 ಆಟಗಾರರು ಯಾರು ಗೊತ್ತಾ?
IPL 2023: ನಾನು ಬಂದಿರೋದು ಐಪಿಎಲ್ ಆಡುವುದಕ್ಕೆ, ಬೈಗುಳ ಕೇಳೋಕ್ಕಲ್ಲ: ನವೀನ್ ಉಲ್ ಹಕ್

ಪರ್ಪಲ್ ಕ್ಯಾಪ್:

ಗುಜರಾತ್ ಟೈಟಾನ್ಸ್ ತಂಡದ ಮೊಹಮ್ಮದ್ ಶಮಿ ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿರುವ ಒಂಬತ್ತು ಪಂದ್ಯಗಳಿಂದ 17 ವಿಕೆಟ್ ಪಡೆದುಕೊಂಡಿದ್ದಾರೆ. ಸಿಕೆಸ್​ಕೆ ತಂಡದ ತುಷಾರ್ ದೇಶಪಾಂಡೆ 10 ಪಂದ್ಯಗಳಿಂದ 17 ವಿಕೆಟ್ ಗಳಿಸಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಅರ್ಶ್​ದೀಪ್ ಸಿಂಗ್ 10 ಪಂದ್ಯಗಳಿಂದ ಒಟ್ಟು 16 ವಿಕೆಟ್ ಕಿತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ