AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ ಹಾಕಿದ ಯುವಕನ ಬಂಧನ

Virat Kohli Daughter: ಕೊಹ್ಲಿಯ ಈ ಹೇಳಿಕೆಯ ಬೆನ್ನಲ್ಲೇ ಇದೀಗ ವಿಕೃತರು ಟೀಮ್ ಇಂಡಿಯಾ ನಾಯಕನ ವಿರುದ್ದ ತಿರುಗಿ ಬಿದ್ದಿದ್ದರು. ಅನ್ಯಧರ್ಮೀಯನ ಪರ ನಿಂತಿದ್ದಕ್ಕಾಗಿ ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.

Virat Kohli: ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ ಹಾಕಿದ ಯುವಕನ ಬಂಧನ
Virat Kohli Family
TV9 Web
| Updated By: ಝಾಹಿರ್ ಯೂಸುಫ್|

Updated on: Nov 10, 2021 | 5:55 PM

Share

ಟಿ20 ವಿಶ್ವಕಪ್​ನಲ್ಲಿ (T20 World Cup 2021) ಪಾಕಿಸ್ತಾನ್ ವಿರುದ್ದದ ಸೋಲಿನ ಬಳಿಕ ಟೀಮ್ ಇಂಡಿಯಾ (Team India) ನಾಯಕ ವಿರಾಟ್ ಕೊಹ್ಲಿ (Virat Kohli) ಮಗಳಿಗೆ ಆನ್​ಲೈನ್​ನಲ್ಲಿ ಅತ್ಯಾಚಾರದ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಮುಂಬೈ ಸೈಬರ್​ ಸೆಲ್ ಪೊಲೀಸರು ಇದೀಗ ರಾಮನಾಗೇಶ್ ಅಲಿಬತಿನಿ ಎಂಬ ವ್ಯಕ್ತಿಯನ್ನು ಹೈದರಾಬಾದ್​ನಲ್ಲಿ ಬಂಧಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕೊಹ್ಲಿಯ ಮಗಳ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದ ಈತ, ಅತ್ಯಾಚಾರದ ಬೆದರಿಕೆಯನ್ನು ಹಾಕಿದ್ದನು. ಈ ಪ್ರಕರಣದ ಜಾಡು ಹಿಡಿದ ಹೊರಟ ಮುಂಬೈ ಸೈಬರ್ ಸೆಲ್ ಪೊಲೀಸರ ಬಲೆಗೆ ಕೊನೆಗೂ ಹೀನ ಮನಸ್ಥಿತಿಯ ರಾಮನಾಗೇಶ್ ಸಿಕ್ಕಿಬಿದ್ದಿದ್ದಾನೆ. 23 ವರ್ಷದ ರಾಮನಾಗೇಶ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಈ ಹಿಂದೆ ಫುಡ್ ಡೆಲಿವರಿ ಆ್ಯಪ್​ಗಾಗಿ ಕೆಲಸ ಮಾಡುತ್ತಿದ್ದರು.

ಅಕ್ಟೋಬರ್ 24 ರಂದು ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಭಾರತ 10 ವಿಕೆಟ್​ಗಳ ಅಂತರದಿಂದ ಹೀನಾಯವಾಗಿ ಸೋಲನುಭವಿಸಿತ್ತು. ಈ ಪಂದ್ಯದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ದ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಕೋಮು ದಾಳಿ ನಡೆಸಿದ್ದರು. ಈ ಬಗ್ಗೆ ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಸೆಹ್ವಾಗ್ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿ, ಶಮಿ ಪರವಾಗಿ ನಿಂತಿದ್ದರು.

ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ದದ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೇ ವಿಷಯವನ್ನು ಪ್ರಸ್ತಾಪಿಸಿದ್ದರು. ಶಮಿ ವಿರುದ್ದದ ಕೋಮು ನಿಂದನೆಯನ್ನು ಖಂಡಿಸಿದ ಕೊಹ್ಲಿ, ಒಂದು ಧರ್ಮವನ್ನು ಗುರಿಯಾಗಿಸಿ ಆಕ್ರಮಣ ಮಾಡುವುದು ಒಬ್ಬ ಮನುಷ್ಯ ಮಾಡಬಹುದಾದ ಅತ್ಯಂತ ಹೀನಾಯ ಕೃತ್ಯ. ಏಕೆಂದರೆ ಧರ್ಮ ಎಂಬುದು ಅತ್ಯಂತ ಪವಿತ್ರ ಮತ್ತು ವೈಯುಕ್ತಿಕ ವಿಷಯವಾಗಿದೆ. ಯಾವುದೇ ವ್ಯಕ್ತಿಯನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಬಾರದು ಎಂದು ವಿರಾಟ್ ಕೊಹ್ಲಿ ಸ್ಪಷ್ಟವಾಗಿ ಹೇಳಿದರು.

ಅಷ್ಟೇ ಅಲ್ಲದೆ ಮೊಹಮ್ಮದ್ ಶಮಿ ಟೀಮ್ ಇಂಡಿಯಾದ ಪ್ರಮುಖ ಭಾಗ. ಅವರು ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಟೀಕೆಗಳನ್ನು ಮಾಡುವವರಿಗಾಗಿ ನನ್ನ ಸಮಯವನ್ನು ವ್ಯರ್ಥ ಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಜೊತೆ ಶೇಕಡಾ 200 ರಷ್ಟು ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೊಹ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಕೊಹ್ಲಿಯ ಈ ಹೇಳಿಕೆಯ ಬೆನ್ನಲ್ಲೇ ಇದೀಗ ವಿಕೃತರು ಟೀಮ್ ಇಂಡಿಯಾ ನಾಯಕನ ವಿರುದ್ದ ತಿರುಗಿ ಬಿದ್ದಿದ್ದರು. ಅನ್ಯಧರ್ಮೀಯನ ಪರ ನಿಂತಿದ್ದಕ್ಕಾಗಿ ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಕೊಹ್ಲಿಯ 10 ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸೆಗುವುದಾಗಿ ಬೆದರಿಕೆಗಳ ಕಮೆಂಟ್ ಮಾಡಿದ್ದರು. ಈ ಕಮೆಂಟ್​ಗಳು ಭಾರೀ ವೈರಲ್ ಆಗಿತ್ತು. ಇದರ ಬಗ್ಗೆ ಅನೇಕರು ಮುಂಬೈ ಸೈಬರ್ ಕ್ರೈಮ್ ಪೊಲೀಸರ ಗಮನ ಸೆಳೆದಿದ್ದರು. ಇದರ ಜಾಡು ಹಿಡಿದು ಹೊರಟಿದ್ದ ಮುಂಬೈ ಪೊಲೀಸರಿಗೆ ಕೊನೆಗೂ ನೀಚ ಮನಸ್ಥಿತಿಯ ರಾಮನಾಗೇಶ್ ಅಲಿಬತಿನಿ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: India T20 squad: ಟೀಮ್ ಇಂಡಿಯಾಗೆ ಹೊಸ ನಾಯಕ: ಯುವ ಪಡೆಯನ್ನು ಪ್ರಕಟಿಸಿದ ಬಿಸಿಸಿಐ

(Mumbai Police Arrests Man Over Rape Threats To Virat Kohli’s Daughter)

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್