AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murali Vijay: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಮುರಳಿ ವಿಜಯ್

Murali Vijay announces retirement: ಟೀಮ್ ಇಂಡಿಯಾ ಪರ 61 ಟೆಸ್ಟ್‌ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಮುರಳಿ ವಿಜಯ್ 40 ರ ಸರಾಸರಿಯಲ್ಲಿ 3880 ರನ್ ಗಳಿಸಿದ್ದರು.

Murali Vijay: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಮುರಳಿ ವಿಜಯ್
murali vijay
TV9 Web
| Edited By: |

Updated on:Jan 30, 2023 | 3:55 PM

Share

ಟೀಮ್ ಇಂಡಿಯಾದ (Team India) ಅನುಭವಿ ಆರಂಭಿಕ ಆಟಗಾರ ಮುರಳಿ ವಿಜಯ್ (Murali Vijay) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ತಮಿಳುನಾಡು ಆಟಗಾರ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಕಾಣಿಸಿಕೊಂಡಿದ್ದು 2018 ರಲ್ಲಿ. ಅಂದು ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದಾದ ಬಳಿಕ ಅವರಿಗೆ ಮತ್ತೆ ಭಾರತ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುವ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ಹೊಸ ಅವಕಾಶಗಳನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.

ಟೀಮ್ ಇಂಡಿಯಾ ಪರ 61 ಟೆಸ್ಟ್‌ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಮುರಳಿ ವಿಜಯ್ 40 ರ ಸರಾಸರಿಯಲ್ಲಿ 3880 ರನ್ ಗಳಿಸಿದ್ದಾರೆ. ಈ ವೇಳೆ 12 ಶತಕ ಹಾಗೂ 15 ಅರ್ಧಶತಕಗಳನ್ನು ಕೂಡ ಬಾರಿಸಿದ್ದರು. ಅಷ್ಟೇ ಅಲ್ಲದೆ ಭಾರತದ ಪರ 17 ಏಕದಿನ ಹಾಗೂ 9 ಟಿ20 ಪಂದ್ಯಗಳನ್ನು ಆಡಿರುವ ಮುರಳಿ ವಿಜಯ್ ಕ್ರಮವಾಗಿ 339 ರನ್ ಹಾಗೂ 169 ರನ್ ಕಲೆಹಾಕಿದ್ದಾರೆ.

ಇದನ್ನೂ ಓದಿ
Image
IPLನ ಒಂದು ಪಂದ್ಯಕ್ಕೆ 107 ಕೋಟಿ ರೂ: PSL ನ 1 ಪಂದ್ಯಕ್ಕೆ ಎಷ್ಟು ಗೊತ್ತಾ?
Image
ಟೀಮ್ ಇಂಡಿಯಾ ಪರ ಅತೀ ಹೆಚ್ಚು ಬಾರಿ 150 ಕ್ಕೂ ಅಧಿಕ ರನ್ ಬಾರಿಸಿದ್ದು ಯಾರು ಗೊತ್ತಾ?
Image
Team India: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
Virat Kohli: ಕಿಂಗ್ ಕೊಹ್ಲಿಯ ಅಬ್ಬರಕ್ಕೆ ಸಚಿನ್ ದಾಖಲೆ ಉಡೀಸ್

ಇನ್ನು 2015 ರಲ್ಲಿ ಕೊನೆಯ ಬಾರಿಗೆ ಟೀಮ್ ಇಂಡಿಯಾ ಸಿಮೀತ ಓವರ್​ಗಳಲ್ಲಿ ಹಾಗೂ 2018 ರಲ್ಲಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ಮುರಳಿ ವಿಜಯ್​ಗೆ ಮತ್ತೆ ಅವಕಾಶ ಸಿಕ್ಕಿರಲಿಲ್ಲ. ಇದಾಗ್ಯೂ 2020 ರ ಸೈಯ್ಯರ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ತಮಿಳುನಾಡು ಪರ ಕಣಕ್ಕಿಳಿದಿದ್ದರು. ಕಳೆದ ವರ್ಷದ ನಡೆದ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲೂ ಅವಕಾಶ ಪಡೆದಿದ್ದರು. ಆದರೆ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಲು ಮಾತ್ರ ಸಾಧ್ಯವಾಗಿರಲಿಲ್ಲ.

ಇದೀಗ ಟ್ವೀಟ್ ಮಾಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿಯನ್ನು ಘೋಷಿಸಿರುವ ಮುರಳಿ ವಿಜಯ್, “ನನ್ನ ಎಲ್ಲಾ ತಂಡದ ಸಹ ಆಟಗಾರರು, ತರಬೇತುದಾರರು, ಮಾರ್ಗದರ್ಶಕರು ಮತ್ತು ಸಹಾಯಕ ಸಿಬ್ಬಂದಿಗಳಿಗೆ, ನಿಮ್ಮೆಲ್ಲರೊಂದಿಗೆ  ನನ್ನ ಕನಸನ್ನು ನನಸಾಗಿಸಲು ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳು. ಅಂತರಾಷ್ಟ್ರೀಯ ಕ್ರೀಡೆಯ ಏರಿಳಿತಗಳ ಮೂಲಕ ನನ್ನನ್ನು ಬೆಂಬಲಿಸಿದ ಕ್ರಿಕೆಟ್ ಅಭಿಮಾನಿಗಳಿಗೆ, ನಾನು ನಿಮ್ಮೆಲ್ಲರೊಂದಿಗೆ ಕಳೆದ ಕ್ಷಣಗಳನ್ನು ಎಂದೆಂದಿಗೂ ಸ್ಮರಿಸುತ್ತೇನೆ. ನಿಮ್ಮ ಬೆಂಬಲ ಯಾವಾಗಲೂ ನನಗೆ ಪ್ರೇರಣೆಯಾಗಿದೆ. ಇನ್ಮುಂದೆ ವಿಶ್ವ ಕ್ರಿಕೆಟ್​ನಲ್ಲಿ ಹೊಸ ಅವಕಾಶಗಳನ್ನು ಎದುರು ನೋಡುತ್ತೇನೆ. ಅಲ್ಲಿ ನನ್ನ ಕ್ರಿಕೆಟ್ ಮುಂದುವರೆಸಲು ಬಯಸುತ್ತಿರುವುದಾಗಿ ಮುರಳಿ ವಿಜಯ್ ತಿಳಿಸಿದ್ದಾರೆ.

ಸದ್ಯ 38ನೇ ವಯಸ್ಸಿನಲ್ಲಿ ಭಾರತೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಮುರಳಿ ವಿಜಯ್ ವಿದೇಶದತ್ತ ಮುಖ ಮಾಡಲು ಆಸಕ್ತಿ ಹೊಂದಿದ್ದಾರೆ. ಅಂದರೆ ಬಿಸಿಸಿಐ ಜೊತೆಗಿನ ಎಲ್ಲಾ ಒಪ್ಪಂದಗಳನ್ನು ಕೊನೆಗೊಳಿಸಿ ವಿದೇಶಿ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಆಸಕ್ತಿ ಹೊಂದಿರುವುದಾಗಿ ಇತ್ತೀಚೆಗಷ್ಟೇ ಮುರಳಿ ವಿಜಯ್ ತಿಳಿಸಿದ್ದರು. ಇದೀಗ ನಿವೃತ್ತಿ ಸುದ್ದಿಯನ್ನು ಪ್ರಕಟಿಸಿದ ಬೆನ್ನಲ್ಲೇ ಕೆಟ್ ಜಗತ್ತಿನಲ್ಲಿ ಹೊಸ ಅವಕಾಶಗಳನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ವಿದೇಶಿ ಲೀಗ್​ನತ್ತ ಮುಖ ಮಾಡಲು ಬಯಸಿರುವುದನ್ನು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ.

Published On - 3:50 pm, Mon, 30 January 23

Follow Us
ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು
ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು