AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲಿ ಮೊಳಗಿದ DK..DK ಘೋಷಣೆ: ಕೈ ಮುಗಿದು ಬಿಟ್ಟು ಬಿಡ್ರಪ್ಪಾ ಎಂದ ಮುರಳಿ ವಿಜಯ್

TNPL 2022: ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಈಗಾಗಲೇ 23 ಪಂದ್ಯಗಳು ಮುಗಿದಿದ್ದು, ಪಾಯಿಂಟ್ ಟೇಬಲ್​ನಲ್ಲಿ ನೆಲ್ಲೈ ರಾಯಲ್ ಕಿಂಗ್ಸ್​ ಅಗ್ರಸ್ಥಾನದಲ್ಲಿದೆ. ಇನ್ನು ದ್ವಿತೀಯ ಸ್ಥಾನದಲ್ಲಿ ಚೆಪಕ್ ಸೂಪರ್ ಗಿಲ್ಲೀಸ್ ಇದ್ದರೆ, ಮಧುರೈ ಪ್ಯಾಂಥರ್ಸ್ ಹಾಗೂ ಕೊವೈ ಕಿಂಗ್ಸ್​ 3ನೇ ಮತ್ತು 4ನೇ ಸ್ಥಾನ ಅಲಂಕರಿಸಿದೆ. 

ಮೈದಾನದಲ್ಲಿ ಮೊಳಗಿದ DK..DK ಘೋಷಣೆ: ಕೈ ಮುಗಿದು ಬಿಟ್ಟು ಬಿಡ್ರಪ್ಪಾ ಎಂದ ಮುರಳಿ ವಿಜಯ್
Murali VIjay
TV9 Web
| Edited By: |

Updated on:Jul 20, 2022 | 6:43 PM

Share

ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್​ಮನ್ ಮುರಳಿ ವಿಜಯ್ ಭಾರತ ತಂಡದ ಪರ ಆಡಿ ವರ್ಷಗಳೇ ಕಳೆದಿವೆ. ಅಷ್ಟೇ ಅಲ್ಲದೆ ಐಪಿಎಲ್​ನಲ್ಲೂ ಅವಕಾಶ ಸಿಗುತ್ತಿಲ್ಲ. ಮತ್ತೊಂದೆಡೆ ದಿನೇಶ್ ಕಾರ್ತಿಕ್ ಐಪಿಎಲ್​ ಮೂಲಕವೇ ಟೀಮ್ ಇಂಡಿಯಾ ಕದ ತಟ್ಟಿದ್ದಾರೆ. ಇತ್ತ ಡಿಕೆಗೆ ಭಾರತ ತಂಡದಲ್ಲಿ ಅವಕಾಶ ಸಿಗುತ್ತಿದ್ದಂತೆ ಮುರಳಿ ವಿಜಯ್ ಕೂಡ ಮೈದಾನಕ್ಕೆ ಮರಳಿದ್ದಾರೆ. ಅದರಂತೆ  ಪ್ರಸ್ತುತ ನಡೆಯುತ್ತಿರುವ ತಮಿಳುನಾಡು ಪ್ರೀಮಿಯರ್​​ ಲೀಗ್​ನಲ್ಲಿ ರೂಬಿ ತಿರುಚ್ಚಿ ವಾರಿಯರ್ಸ್ ಪರ ಮುರಳಿ ವಿಜಯ್ ಕಣಕ್ಕಿಳಿಯುತ್ತಿದ್ದಾರೆ. ಅಷ್ಟೇ ಅಲ್ಲದೆ ನೆಲ್ಲೈ ರಾಯಲ್ ಕಿಂಗ್ಸ್ ವಿರುದ್ದ ಕೇವಲ 66 ಎಸೆತಗಳಲ್ಲಿ 121 ರನ್​ ಬಾರಿಸಿ ಅಬ್ಬರಿಸಿದ್ದಾರೆ.

ಇತ್ತ ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಮುರಳಿ ವಿಜಯ್​​ಗೆ ಫೀಲ್ಡಿಂಗ್ ಮಾಡುವುದೇ ಸಮಸ್ಯೆಯಾಗಿದೆ. ಏಕೆಂದರೆ ಅವರು ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್​ ನಿಂತರೆ ದಿನೇಶ್ ಕಾರ್ತಿಕ್ ಅವರ ಹೆಸರು ಕೇಳಿ ಬರುತ್ತಿದೆ. ಹೌದು, ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಮುರಳಿ ವಿಜಯ್​ ಅವರನ್ನು ಚುಡಾಯಿಸಲೆಂದೇ ಅಭಿಮಾನಿಗಳು ಇದೀಗ ಡಿಕೆ ಡಿಕೆ ಎಂದು ಘೋಷಣೆ ಕೂಗುತ್ತಿದ್ದಾರೆ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಅತ್ತ ದಿನೇಶ್ ಕಾರ್ತಿಕ್ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲೂ ಕಾಣಿಸಿಕೊಳ್ಳದಿದ್ದರೂ ಅಭಿಮಾನಿಗಳು ಮಾತ್ರ ಡಿಕೆ ಹೆಸರಿನೊಂದಿಗೆ ಹರ್ಷೋದ್ಘಾರ ಮಾಡುತ್ತಿದ್ದಾರೆ. ಅದು ಸಹ ಮುರಳಿ ವಿಜಯ್ ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಎಂಬುದು ವಿಶೇಷ.

ನೆಲ್ಲೈ ರಾಯಲ್ ಕಿಂಗ್ಸ್ ವಿರುದ್ದದ ಪಂದ್ಯದ ವೇಳೆ ಡಿಕೆಯ ಹೆಸರಿನೊಂದಿಗೆ ಮುರಳಿ ವಿಜಯ್ ಅವರನ್ನು ಅಭಿಮಾನಿಗಳು ಕೀಟಲೆ ಮಾಡುತ್ತಿರುವ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಏನ್ರಾಪ್ಪ ನಿಮ್ಮ ಪ್ರಾಬ್ಲಂ ಎನ್ನುವ ಭಾವದಲ್ಲಿ ಮುರಳಿ ವಿಜಯ್ ಕೈಸನ್ನೆ ಮಾಡಿದ್ದಾರೆ. ಇದಾಗ್ಯೂ ಅಭಿಮಾನಿಗಳ ಡಿಕೆ ಘೋಷಣೆ ಜೋರಾಗಿತ್ತು. ಈ ವೇಳೆ ಮುರಳಿ ವಿಜಯ್ ಕೈ ಮುಗಿಯುತ್ತಿರುವುದು ಕೂಡ ಕಾಣಬಹುದು. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಮತ್ತೊಮ್ಮೆ ಮುರಳಿ ವಿಜಯ್ ಹಾಗೂ ದಿನೇಶ್ ಕಾರ್ತಿಕ್ ವೈಯುಕ್ತಿಕ ವಿಚಾರ ಚರ್ಚೆಗೆ ಗ್ರಾಸವಾಗಿದೆ.

ಅಷ್ಟಕ್ಕೂ ಮುರಳಿ ವಿಜಯ್​ರನ್ನು ಯಾಕೆ ದಿನೇಶ್ ಕಾರ್ತಿಕ್ ಹೆಸರಿನೊಂದಿಗೆ ಅಭಿಮಾನಿಗಳು ಚುಡಾಯಿಸುತ್ತಿದ್ದಾರೆ? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ:- ಮೋಸ, ಖಿನ್ನತೆ, ಆತ್ಮಹತ್ಯೆ ಚಿಂತೆ: ಇದು ಮುರಳಿ ವಿಜಯ್ ಮುಂದೆ ಸೋತು ಗೆದ್ದ DK ಯ ಕಥೆ

ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಈಗಾಗಲೇ 23 ಪಂದ್ಯಗಳು ಮುಗಿದಿದ್ದು, ಪಾಯಿಂಟ್ ಟೇಬಲ್​ನಲ್ಲಿ ನೆಲ್ಲೈ ರಾಯಲ್ ಕಿಂಗ್ಸ್​ ಅಗ್ರಸ್ಥಾನದಲ್ಲಿದೆ. ಇನ್ನು ದ್ವಿತೀಯ ಸ್ಥಾನದಲ್ಲಿ ಚೆಪಕ್ ಸೂಪರ್ ಗಿಲ್ಲೀಸ್ ಇದ್ದರೆ, ಮಧುರೈ ಪ್ಯಾಂಥರ್ಸ್ ಹಾಗೂ ಕೊವೈ ಕಿಂಗ್ಸ್​ 3ನೇ ಮತ್ತು 4ನೇ ಸ್ಥಾನ ಅಲಂಕರಿಸಿದೆ.

Published On - 6:24 pm, Wed, 20 July 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು