VIDEO: ನ್ಯೂ ಹೆಲಿಕಾಪ್ಟರ್ ಶಾಟ್: ಮುಶೀರ್ ಖಾನ್ರ ಭರ್ಜರಿ ಸಿಕ್ಸ್ ವಿಡಿಯೋ ವೈರಲ್
Musheer Khan: ಮುಶೀರ್ ಖಾನ್ ಭಾರತ ಟೆಸ್ಟ್ ತಂಡದ ಆಟಗಾರ ಸರ್ಫರಾಝ್ ಖಾನ್ ಅವರ ಸಹೋದರ. ಇಂಗ್ಲೆಂಡ್ ಲಯನ್ಸ್ ವಿರುದ್ಧ ಭರ್ಜರಿ ಶತಕ ಬಾರಿಸುವ ಮೂಲಕ ಅಣ್ಣ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದರೆ, ತಮ್ಮ ಅಂಡರ್ 19 ವಿಶ್ವಕಪ್ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ 2 ಶತಕ ಬಾರಿಸಿದ ಎರಡನೇ ಭಾರತೀಯ ಎನಿಸಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಲಿಕಾಪ್ಟರ್ ಶಾಟ್ ಮೂಲಕ ಕ್ರಿಕೆಟ್ ಅಂಗಳದಲ್ಲಿ ಸಂಚಲನ ಸೃಷ್ಟಿಸಿದ್ದರು. ಈ ಅತ್ಯಾಕರ್ಷಕ ಬ್ಯಾಟಿಂಗ್ ಶೈಲಿಯನ್ನು ಆ ಬಳಿಕ ಅನೇಕರು ಅನುಕರಿಸಿದ್ದರು. ಇದೀಗ ಟೀಮ್ ಇಂಡಿಯಾ ಅಂಡರ್-19 ತಂಡದ ಆಟಗಾರ ಮುಶೀರ್ ಖಾನ್ (Musheer Khan) ಕೂಡ ಹೆಲಿಕಾಪ್ಟರ್ ಶಾಟ್ ಮೂಲಕ ಗಮನ ಸೆಳೆದಿದ್ದಾರೆ.
ಅಂಡರ್-19 ವಿಶ್ವಕಪ್ನಲ್ಲಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮುಶೀರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಪಂದ್ಯದ 45ನೇ ಓವರ್ನ ಮೊದಲ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಬಾರಿಸಿದ ಸಿಕ್ಸ್ ನೋಡಿ ಎಲ್ಲರೂ ಹುಬ್ಬೇರಿಸಿದ್ದರು.
ಏಕೆಂದರೆ ಕ್ಲಾರ್ಕ್ ಎಸೆದ ಅತೀ ವೇಗದ ಎಸೆತಕ್ಕೆ ಮುಶೀರ್ ಖಾನ್ ಹೆಲಿಕಾಪ್ಟರ್ ಶಾಟ್ ಮೂಲಕ ಉತ್ತರ ನೀಡಿದ್ದರು. ಈ ಭರ್ಜರಿ ಸಿಕ್ಸ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮುಶೀರ್ ಖಾನ್ ಅವರ ಹೆಲಿಕಾಪ್ಟರ್ ಶಾಟ್ ವಿಡಿಯೋ:
Musheer Khan recreated MSD’s iconic helicopter shot.#SarfarazKhan #MusheerKhan #U19WorldCup2024 #CricketTwitter pic.twitter.com/59FXGGyXFK
— not one (@ballebazz45) January 30, 2024
ಸೆಂಚುರಿ ಸಿಡಿಸಿದ ಮುಶೀರ್:
ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಅಂಡರ್-19 ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಆದರ್ಶ್ ಸಿಂಗ್ 52 ರನ್ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು. ಆದರೆ ಕೇವಲ 9 ರನ್ ಬಾರಿಸಿದ್ದ ಅರ್ಶೀನ್ ಕುಲ್ಕರ್ಣಿ ಬೇಗನೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು.
ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮುಶೀರ್ ಖಾನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ನ್ಯೂಝಿಲೆಂಡ್ ಬೌಲರ್ಗಳನ್ನು ಲೀಲಾಜಾಲವಾಗಿ ಎದುರಿಸಿದ ಮುಶೀರ್ ಸಿಕ್ಸ್-ಫೋರ್ಗಳ ಸುರಿಮಳೆಗೈದರು.
126 ಎಸೆತಗಳನ್ನು ಎದುರಿಸಿದ ಮುಶೀರ್ ಖಾನ್ 3 ಸಿಕ್ಸ್ ಹಾಗೂ 13 ಫೋರ್ಗಳೊಂದಿಗೆ 131 ರನ್ ಸಿಡಿಸಿದರು. ಈ ಭರ್ಜರಿ ಶತಕದ ನೆರವಿನಿಂದ ಈ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್ ಕಳೆದುಕೊಂಡು 295 ರನ್ ಕಲೆಹಾಕಿತು.
ಇದನ್ನೂ ಓದಿ: IPL 2024: RCB ಗೆ ವಿಂಡೀಸ್ ವೇಗಿ?
296 ರನ್ಗಳ ಸ್ಪರ್ಧಾತ್ಮಕ ಗುರಿ ಪಡೆದ ನ್ಯೂಝಿಲೆಂಡ್ ತಂಡವು 28.1 ಓವರ್ಗಳಲ್ಲಿ ಕೇವಲ 81 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 214 ರನ್ಗಳ ಭರ್ಜರಿ ಜಯ ಸಾಧಿಸಿತು. ಇನ್ನು ಈ ಪಂದ್ಯದಲ್ಲಿ ಅತ್ಯಾಕರ್ಷಕ ಶತಕ ಬಾರಿಸಿ ಮಿಂಚಿದ್ದ ಮುಶೀರ್ ಖಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.