VIDEO: ನ್ಯೂ ಹೆಲಿಕಾಪ್ಟರ್ ಶಾಟ್: ಮುಶೀರ್ ಖಾನ್​ರ ಭರ್ಜರಿ ಸಿಕ್ಸ್ ವಿಡಿಯೋ ವೈರಲ್

| Updated By: ಝಾಹಿರ್ ಯೂಸುಫ್

Updated on: Jan 31, 2024 | 1:23 PM

Musheer Khan: ಮುಶೀರ್ ಖಾನ್ ಭಾರತ ಟೆಸ್ಟ್ ತಂಡದ ಆಟಗಾರ ಸರ್ಫರಾಝ್ ಖಾನ್ ಅವರ ಸಹೋದರ. ಇಂಗ್ಲೆಂಡ್ ಲಯನ್ಸ್ ವಿರುದ್ಧ ಭರ್ಜರಿ ಶತಕ ಬಾರಿಸುವ ಮೂಲಕ ಅಣ್ಣ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದರೆ, ತಮ್ಮ ಅಂಡರ್ 19 ವಿಶ್ವಕಪ್​ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ 2 ಶತಕ ಬಾರಿಸಿದ ಎರಡನೇ ಭಾರತೀಯ ಎನಿಸಿಕೊಂಡಿದ್ದಾರೆ.

VIDEO: ನ್ಯೂ ಹೆಲಿಕಾಪ್ಟರ್ ಶಾಟ್: ಮುಶೀರ್ ಖಾನ್​ರ ಭರ್ಜರಿ ಸಿಕ್ಸ್ ವಿಡಿಯೋ ವೈರಲ್
Musheer Khan
Follow us on

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಲಿಕಾಪ್ಟರ್ ಶಾಟ್​ ಮೂಲಕ ಕ್ರಿಕೆಟ್​ ಅಂಗಳದಲ್ಲಿ ಸಂಚಲನ ಸೃಷ್ಟಿಸಿದ್ದರು. ಈ ಅತ್ಯಾಕರ್ಷಕ ಬ್ಯಾಟಿಂಗ್ ಶೈಲಿಯನ್ನು ಆ ಬಳಿಕ ಅನೇಕರು ಅನುಕರಿಸಿದ್ದರು. ಇದೀಗ ಟೀಮ್ ಇಂಡಿಯಾ ಅಂಡರ್-19 ತಂಡದ ಆಟಗಾರ ಮುಶೀರ್ ಖಾನ್ (Musheer Khan)​ ಕೂಡ ಹೆಲಿಕಾಪ್ಟರ್ ಶಾಟ್ ಮೂಲಕ ಗಮನ ಸೆಳೆದಿದ್ದಾರೆ.

ಅಂಡರ್​-19 ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮುಶೀರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಪಂದ್ಯದ 45ನೇ ಓವರ್​ನ ಮೊದಲ ಎಸೆತದಲ್ಲಿ ಡೀಪ್ ಮಿಡ್​ ವಿಕೆಟ್​ನತ್ತ ಬಾರಿಸಿದ ಸಿಕ್ಸ್​ ನೋಡಿ ಎಲ್ಲರೂ ಹುಬ್ಬೇರಿಸಿದ್ದರು.

ಏಕೆಂದರೆ ಕ್ಲಾರ್ಕ್​ ಎಸೆದ ಅತೀ ವೇಗದ ಎಸೆತಕ್ಕೆ ಮುಶೀರ್ ಖಾನ್ ಹೆಲಿಕಾಪ್ಟರ್ ಶಾಟ್ ಮೂಲಕ ಉತ್ತರ ನೀಡಿದ್ದರು. ಈ ಭರ್ಜರಿ ಸಿಕ್ಸ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮುಶೀರ್ ಖಾನ್ ಅವರ ಹೆಲಿಕಾಪ್ಟರ್ ಶಾಟ್ ವಿಡಿಯೋ:

ಸೆಂಚುರಿ ಸಿಡಿಸಿದ ಮುಶೀರ್:

ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಅಂಡರ್-19 ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಆದರ್ಶ್ ಸಿಂಗ್ 52 ರನ್ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು. ಆದರೆ ಕೇವಲ 9 ರನ್ ಬಾರಿಸಿದ್ದ ಅರ್ಶೀನ್ ಕುಲ್ಕರ್ಣಿ ಬೇಗನೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು.

ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮುಶೀರ್ ಖಾನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ನ್ಯೂಝಿಲೆಂಡ್ ಬೌಲರ್​ಗಳನ್ನು ಲೀಲಾಜಾಲವಾಗಿ ಎದುರಿಸಿದ ಮುಶೀರ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

126 ಎಸೆತಗಳನ್ನು ಎದುರಿಸಿದ ಮುಶೀರ್ ಖಾನ್ 3 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 131 ರನ್ ಸಿಡಿಸಿದರು. ಈ ಭರ್ಜರಿ ಶತಕದ ನೆರವಿನಿಂದ ಈ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್ ಕಳೆದುಕೊಂಡು 295 ರನ್ ಕಲೆಹಾಕಿತು.

ಇದನ್ನೂ ಓದಿ: IPL 2024: RCB ಗೆ ವಿಂಡೀಸ್ ವೇಗಿ?

296 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ನ್ಯೂಝಿಲೆಂಡ್ ತಂಡವು 28.1 ಓವರ್​ಗಳಲ್ಲಿ ಕೇವಲ 81 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 214 ರನ್​ಗಳ ಭರ್ಜರಿ ಜಯ ಸಾಧಿಸಿತು. ಇನ್ನು ಈ ಪಂದ್ಯದಲ್ಲಿ ಅತ್ಯಾಕರ್ಷಕ ಶತಕ ಬಾರಿಸಿ ಮಿಂಚಿದ್ದ ಮುಶೀರ್ ಖಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.