ಟೀಮ್ ಇಂಡಿಯಾ ಕ್ರಿಕೆಟಿಗನ ತಂದೆಗೆ 7 ವರ್ಷ ಜೈಲು ಶಿಕ್ಷೆ

Naman Ojha: ನಮನ್ ಓಜಾ ಭಾರತದ ಪರ ಒಟ್ಟು 4 ಪಂದ್ಯಗಳನ್ನಾಡಿದ್ದಾರೆ. 2010 ಮತ್ತು 2015ರ ನಡುವೆ ಟೀಮ್ ಇಂಡಿಯಾ ಪರ ಆಡಿದ್ದ ಓಜಾ ಒಟ್ಟು 69 ರನ್​ಗಳನ್ನು ಕಲೆಹಾಕಿದ್ದಾರೆ. ಹಾಗೆಯೇ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಂಡಿದ್ದರು.

ಟೀಮ್ ಇಂಡಿಯಾ ಕ್ರಿಕೆಟಿಗನ ತಂದೆಗೆ 7 ವರ್ಷ ಜೈಲು ಶಿಕ್ಷೆ
Naman Ojha
Follow us
ಝಾಹಿರ್ ಯೂಸುಫ್
|

Updated on: Dec 25, 2024 | 10:53 AM

ಒಂದು ದಶಕಕ್ಕೂ ಹೆಚ್ಚು ಕಾಲ ನಡೆದ ಕಾನೂನು ಪ್ರಕ್ರಿಯೆಗಳ ಬಳಿಕ ಟೀಮ್ ಇಂಡಿಯಾದ ಮಾಜಿ ಆಟಗಾರ ನಮನ್ ಓಜಾ ತಂದೆ ವಿನಯ್ ಓಜಾ ಸೇರಿದಂತೆ ನಾಲ್ವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. 2013 ರಲ್ಲಿ ವಿನಯ್ ಓಜಾ ಸೇರಿದಂತೆ ನಾಲ್ವರು ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 1.25 ಕೋಟಿ ರೂ. ವಂಚಿಸಿದ್ದರು. ಈ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷಗಳ ಬಳಿಕ ನ್ಯಾಯಾಲಯ ತೀರ್ಪು ನೀಡಿದೆ.

ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾಗಿದೆ. ಅದರಂತೆ ಮುಲ್ತಾಯಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ವಿನಯ್ ಓಜಾ ಸೇರಿದಂತೆ ಮೂವರಿಗೆ 7 ವರ್ಷಗಳ ಜೈಲು ಶಿಕ್ಷೆ, 14 ಲಕ್ಷ ರೂ. ದಂಡ ಹಾಗೂ ಹಗರಣದ ಮಾಸ್ಟರ್ ಮೈಂಡ್ ಅಭಿಷೇಕ್ ರತ್ನಂಗೆ 10 ವರ್ಷ ಜೈಲು ಮತ್ತು 80 ಲಕ್ಷ ರೂ. ದಂಡ ವಿಧಿಸಿದೆ.

ಏನಿದು ಪ್ರಕರಣ?

2013 ರಲ್ಲಿ, ಬೇತುಲ್‌ನ ಮುಲ್ತಾಯಿ ಪೊಲೀಸ್ ಠಾಣೆ ವ್ಯಾಪ್ತಿಯ ಬ್ಯಾಂಕ್ ಆಫ್ ಮಹಾರಾಷ್ಟ್ರದ ಜೌಲ್ಖೇಡಾ ಶಾಖೆಯಲ್ಲಿ 1.25 ಕೋಟಿ ರೂ.ಗಳ ದೊಡ್ಡ ವಂಚನೆ ಪತ್ತೆಯಾಗಿತ್ತು. ಈ ವಂಚನೆಯಲ್ಲಿ ಆರು ಮಂದಿ ಭಾಗಿಯಾಗಿದ್ದರು. ಅಂದು ಇದೇ ಬ್ಯಾಂಕ್​ನಲ್ಲಿ ನಮನ್ ಓಜಾ ಅವರ ತಂದೆ ವಿನಯ್ ಓಜಾ ಅವರು ಸಹಾಯಕ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇವರೆಲ್ಲರೂ ಸೇರಿ ಬ್ಯಾಂಕ್‌ ಅಧಿಕಾರಿಗಳ ಪಾಸ್‌ವರ್ಡ್‌ಗಳ ಮೂಲಕ ಅವ್ಯವಹಾರ ನಡೆಸಿದ್ದರು. ಅಭಿಷೇಕ್ ರತ್ನಂ ಈ ಎಲ್ಲಾ ರುಜುವಾತುಗಳನ್ನು ಬಳಸಿಕೊಂಡು ಅನೇಕ ನಕಲಿ ಖಾತೆಗಳನ್ನು ತೆರೆದು, ಕೋಟಿ ರೂ.ಗಳನ್ನು ವಂಚಿಸಿದ್ದರು.

ಈ ಅವ್ಯವಹಾರವು ಬೆಳಕಿಗೆ ಬರುತ್ತಿದ್ದಂತೆ ಅಭಿಷೇಕ್ ರತ್ನಂ ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಹಾಗೆಯೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ನಮನ್ ಓಜಾ ಅವರ ತಂದೆಯು 2022 ರಲ್ಲಿ ಬಂಧನಕ್ಕೊಳಗಾಗಿದ್ದರು.

ಇದೀಗ ಈ ಪ್ರಕರಣದಲ್ಲಿ ನಾಲ್ವರು ತಪ್ಪಿತಸ್ಥರೆಂದು ದೃಢವಾಗಿದೆ. ಹೀಗಾಗಿ ಮುಲ್ತಾಯಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಅಭಿಷೇಕ್ ರತ್ನಂ ಅವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ವಿನಯ್ ಓಜಾ ಸೇರಿದಂತೆ ಮೂವರಿಗೆ 7 ವರ್ಷಗಳ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: 22ನೇ ವಯಸ್ಸಿನಲ್ಲೇ ಸೈಮ್ ಅಯ್ಯೂಬ್ ಅಬ್ಬರ: ಸಚಿನ್, ವಿರಾಟ್ ಕೊಹ್ಲಿ ದಾಖಲೆ ಶೇಕಿಂಗ್

ಯಾರು ನಮನ್ ಓಜಾ?

ನಮನ್ ಓಜಾ ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್. 2010 ರಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ಓಜಾ 1 ಟೆಸ್ಟ್, 1 ಏಕದಿನ ಮತ್ತು 2 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 69 ರನ್ ಕಲೆಹಾಕಿದ್ದರು. ಇನ್ನು ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳ ಪರ ಕಣಕ್ಕಿಳಿದಿದ್ದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ನಮನ್ ಓಜಾ ಲೆಜೆಂಡ್ಸ್ ಲೀಗ್​ ಸೇರಿದಂತೆ ಒಂದಷ್ಟು ಫ್ರಾಂಚೈಸಿ ಲೀಗ್​​ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು