AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs NAM: ಕ್ರಿಕೆಟ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾವನ್ನು ಮಣಿಸಿದ ನಮೀಬಿಯಾ

South Africa vs Namibia: ಕ್ರಿಕೆಟ್ ಜಗತ್ತಿಗೆ ಅಚ್ಚರಿ ಮೂಡಿಸಿ, ನಮೀಬಿಯಾ ತಂಡ ಬಲಿಷ್ಠ ದಕ್ಷಿಣ ಆಫ್ರಿಕಾವನ್ನು T20 ಪಂದ್ಯದಲ್ಲಿ ಸೋಲಿಸಿ ಇತಿಹಾಸ ನಿರ್ಮಿಸಿದೆ. ಕ್ರಿಕೆಟ್ ಇತಿಹಾಸದಲ್ಲಿ ನಮೀಬಿಯಾಗೆ ದಕ್ಷಿಣ ಆಫ್ರಿಕಾ ವಿರುದ್ಧದ ಇದು ಮೊದಲ ಅಂತರರಾಷ್ಟ್ರೀಯ ಗೆಲುವು. ರೂಬೆನ್ ಟ್ರಂಪೆಲ್‌ಮನ್ ಹಾಗೂ ಜೇನ್ ಗ್ರೀನ್ ಅವರ ಉತ್ತಮ ಪ್ರದರ್ಶನದಿಂದ ನಮೀಬಿಯಾ ಕೊನೆಯ ಕ್ಷಣದಲ್ಲಿ ರೋಚಕ ಜಯ ಸಾಧಿಸಿತು. ಈ ವಿಜಯವು ನಮೀಬಿಯಾ ಕ್ರಿಕೆಟ್‌ಗೆ ಹೊಸ ಮೈಲಿಗಲ್ಲು.

SA vs NAM: ಕ್ರಿಕೆಟ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾವನ್ನು ಮಣಿಸಿದ ನಮೀಬಿಯಾ
Sa Vs Nam
ಪೃಥ್ವಿಶಂಕರ
|

Updated on:Oct 11, 2025 | 10:07 PM

Share

ಕ್ರಿಕೆಟ್ ಜಗತ್ತು ಅಚ್ಚರಿಗಳ ಆಗರ ಎಂದರೆ ತಪ್ಪಾಗಲಾರದು. ಇಲ್ಲಿ ಅತ್ಯಂತ ದುರ್ಬಲ ತಂಡದೆದುರು ಬಲಿಷ್ಠ ತಂಡವೊಂದು ಸೋಲಿಗೆ ಶರಣಾಗುವುದು ಅಥವಾ ಇನ್ನೇನು ಈ ತಂಡ ಸೋತೇ ಹೋಯ್ತು ಎನ್ನುವಾಗ ಅಚ್ಚರಿಯೆಂಬಂತೆ ಆ ತಂಡವೇ ಗೆಲುವು ಸಾಧಿಸುವುದನ್ನು ಸಾಕಷ್ಟು ಭಾರಿ ನೋಡಿದ್ದೇವೆ. ಇನ್ನು ಕೆಲವೊಮ್ಮೆ ಪಂದ್ಯ ಆರಂಭವಾಗುವುದಕ್ಕೂ ಮುನ್ನವೇ ಯಾವ ತಂಡ ಗೆಲ್ಲುತ್ತದೆ ಎಂಬುದನ್ನು ಮೊದಲೇ ನಿರೀಕ್ಷಿಸಲಾಗಿರುತ್ತದೆ. ಆದರೆ ಇಂದು ನಡೆದ ಪಂದ್ಯವೊಂದರಲ್ಲಿ ಕೋಟ್ಯಾಂತರ ಅಭಿಮಾನಿಗಳ ನಿರೀಕ್ಷೆಗೆ ವಿರುದ್ಧವಾಗಿ ಅಚ್ಚರಿಯ ಫಲಿತಾಂಶವೊಂದು ಹೊರಬಿದ್ದಿದೆ. ಕ್ರಿಕೆಟ್ ಲೋಕದಲ್ಲಿ ಅತ್ಯಂತ ಬಲಿಷ್ಠ ತಂಡ ಎನಿಸಿಕೊಂಡಿರುವ ದಕ್ಷಿಣ ಆಫ್ರಿಕಾ ತಂಡ ನಮೀಬಿಯಾ ( South Africa vs Namibia) ವಿರುದ್ಧ ಮಂಡಿಯೂರಿದೆ. ಇತ್ತ ನಮೀಬಿಯಾ ತಂಡ ಕ್ರಿಕೆಟ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ದಕ್ಷಿಣ ಆಪ್ರಿಕಾ ತಂಡವನ್ನು ಸೋಲಿಸಿದ ದಾಖಲೆ ಸೃಷ್ಟಿಸಿದೆ.

ಇತ್ತೀಚೆಗೆ 2026 ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿರುವ ನಮೀಬಿಯಾ ತನ್ನ ಕ್ರಿಕೆಟ್ ಇತಿಹಾಸದಲ್ಲಿ ಅತಿದೊಡ್ಡ ಗೆಲುವು ದಾಖಲಿಸಿದೆ. ರೂಬೆನ್ ಟ್ರಂಪೆಲ್‌ಮನ್ ಅವರ ಸ್ಮರಣೀಯ ಪ್ರದರ್ಶನದ ಆಧಾರದ ಮೇಲೆ ನಮೀಬಿಯಾ, ದಕ್ಷಿಣ ಆಫ್ರಿಕಾವನ್ನು ಟಿ20 ಪಂದ್ಯದಲ್ಲಿ 4 ವಿಕೆಟ್‌ಗಳಿಂದ ಸೋಲಿಸಿದೆ. ಯಾವುದೇ ಸ್ವರೂಪದಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಅಂತರರಾಷ್ಟ್ರೀಯ ಪಂದ್ಯ ಇದಾಗಿದ್ದು, ಈ ಪಂದ್ಯದಲ್ಲಿ ನಮೀಬಿಯಾ ತಂಡವು ಐತಿಹಾಸಿಕ ಗೆಲುವು ಸಾಧಿಸಿದೆ.

ಸ್ಟಾರ್ ಆಟಗಾರರ ಅಲಭ್ಯತೆ

ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯವು ಪ್ರತಿಯೊಂದು ಅರ್ಥದಲ್ಲಿಯೂ ಐತಿಹಾಸಿಕವಾಗಿತ್ತು. ಆದಾಗ್ಯೂ, ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ನಡುವಿನ ಮೊದಲ ಟೆಸ್ಟ್ ಪಂದ್ಯವು ಅಕ್ಟೋಬರ್ 12 ರ ಭಾನುವಾರ ಲಾಹೋರ್‌ನಲ್ಲಿ ಪ್ರಾರಂಭವಾಗುತ್ತಿರುವ ಕಾರಣ ದಕ್ಷಿಣ ಆಫ್ರಿಕಾ ತಂಡದ ಬಹುತೇಕ ಎಲ್ಲಾ ಪ್ರಮುಖ ಆಟಗಾರರು ನಮೀಬಿಯಾ ವಿರುದ್ಧದ ಈ ಪಂದ್ಯಕ್ಕೆ ಲಭ್ಯವಿರಲಿಲ್ಲ. ಇದರ ಹೊರತಾಗಿಯೂ, ದಕ್ಷಿಣ ಆಫ್ರಿಕಾ ತಂಡವನ್ನು ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿತ್ತು.

134 ರನ್ ಕಲೆಹಾಕಿದ ಆಫ್ರಿಕಾ

ಆದಾಗ್ಯೂ, ಗೆರ್ಹಾರ್ಡ್ ಎರಾಸ್ಮಸ್ ನೇತೃತ್ವದ ನಮೀಬಿಯಾ ತಂಡವು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡವನ್ನು ಕೇವಲ 134 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಒಂದು ವರ್ಷದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ ಅನುಭವಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಕೂಡ ಕೇವಲ 1 ರನ್​ಗಳಿಗೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ನಮೀಬಿಯಾ ವೇಗಿ ರೂಬೆನ್ ಟ್ರಂಪೆಲ್‌ಮನ್ ಹಾಗೂ ಜೇಸನ್ ಸ್ಮಿತ್ ದಾಳಿಗೆ ನಲುಗಿದ ಆಫ್ರಿಕಾ ತಂಡ 134 ರನ್‌ ಕಲೆಹಾಕಲಷ್ಟೇ ಶಕ್ತವಾಯಿತು.

ನಮೀಬಿಯಾಕ್ಕೆ ಐತಿಹಾಸಿಕ ಜಯ

ಈ ಗುರಿ ಬೆನ್ನಟ್ಟಿದ ನಮೀಬಿಯಾಕ್ಕೂ ಕೂಡ ಸುಲಭವಾಗಿ ಜಯ ಧಕ್ಕಲಿಲ್ಲ. ನಾಯಕ ಗೆರ್ಹಾರ್ಡ್ ಎರಾಸ್ಮಸ್ ಸೇರಿದಂತೆ ತಂಡದ ಅಗ್ರ ಮತ್ತು ಮಧ್ಯಮ ಕ್ರಮಾಂಕ ಬಹುಬೇಗನೇ ಪೆವಿಲಿಯನ್ ಸೇರಿಕೊಂಡಿತು. ಹೀಗಾಗಿ ತಂಡವು 16.3 ಓವರ್‌ಗಳಲ್ಲಿ ಕೇವಲ 101 ರನ್‌ಗಳಿಗೆ ಆರು ವಿಕೆಟ್‌ಗಳನ್ನು ಕಳೆದುಕೊಂಡಿತು. ಆದರೆ ಈ ವೇಳೆ ಏಳನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ ಜೇನ್ ಗ್ರೀನ್ ತಮ್ಮ ಆಟದ ಮೂಲಕ ತಂಡವನ್ನು ಗೆಲುವಿನ ಹತ್ತಿರ ತಂದರು.

ಕೊನೆಯ ಓವರ್‌ನಲ್ಲಿ ನಮೀಬಿಯಾ ಗೆಲುವಿಗೆ 11 ರನ್‌ಗಳು ಬೇಕಾಗಿದ್ದವು. ಈ ವೇಳೆ ಸ್ಟ್ರೈಕ್​​ನಲ್ಲಿದ್ದ ಗ್ರೀನ್ ಮೊದಲ ಎಸೆತದಲ್ಲೇ ಸಿಕ್ಸ್ ಬಾರಿಸಿದರು. ಮುಂದಿನ ಮೂರು ಎಸೆತಗಳಲ್ಲಿ ನಾಲ್ಕು ರನ್ ಗಳಿಸುವ ಮೂಲಕ ಸ್ಕೋರ್ ಅನ್ನು ಸಮಗೊಳಿಸಿದರು. ಆದಾಗ್ಯೂ, ಐದನೇ ಎಸೆತದಲ್ಲಿ ಯಾವುದೇ ರನ್ ಗಳಿಸಲಿಲ್ಲ, ಇದರಿಂದಾಗಿ ಪಂದ್ಯ ಟೈ ಆಗುವ ಸಾಧ್ಯತೆ ಹೆಚ್ಚಾಯಿತು. ಆದರೆ ಮೊದಲು ಬೌಲಿಂಗ್‌ನಲ್ಲಿ ತನ್ನ ಛಾಪು ಮೂಡಿಸಿದ್ದ ಟ್ರಂಪೆಲ್‌ಮನ್ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿ ನಮೀಬಿಯಾ ಕ್ರಿಕೆಟ್‌ಗೆ ಅತಿದೊಡ್ಡ ಜಯ ತಂದುಕೊಟ್ಟರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:06 pm, Sat, 11 October 25

ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?