ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ನಮೀಬಿಯಾ; ಉಳಿದ 1 ಸ್ಥಾನಕ್ಕಾಗಿ 3 ತಂಡಗಳ ನಡುವೆ ಪೈಪೋಟಿ

T20 World Cup 2024: 2024ರ ಟಿ20 ವಿಶ್ವಕಪ್‌ಗಾಗಿ ಆಫ್ರಿಕಾ ವಲಯದ ಅರ್ಹತಾ ಪಂದ್ಯಗಳನ್ನು 7 ತಂಡಗಳ ನಡುವೆ ಆಡಲಾಗುತ್ತಿದೆ. ಇದರಲ್ಲಿ ನಮೀಬಿಯಾ ತಂಡ ಆಡಿರುವ 5 ಪಂದ್ಯಗಳಲ್ಲಿ 5ರಲ್ಲಿ ಜಯಗಳಿಸುವ ಮೂಲಕ 2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿದೆ.

ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ನಮೀಬಿಯಾ; ಉಳಿದ 1 ಸ್ಥಾನಕ್ಕಾಗಿ 3 ತಂಡಗಳ ನಡುವೆ ಪೈಪೋಟಿ
ನಮೀಬಿಯಾ ತಂಡ
Follow us
|

Updated on: Nov 29, 2023 | 1:03 PM

ಮುಂದಿನ ವರ್ಷ ಅಂದರೆ, 2024 ರ ಜೂನ್ ತಿಂಗಳಿನಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ಗೆ (ICC Men’s T20 World Cup 2024) ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ (West Indies and America) ಜಂಟಿ ಆತಿಥ್ಯದಲ್ಲಿ ನಡೆಯಲ್ಲಿರುವ ಈ ಟೂರ್ನಿ ತುಂಬಾ ವಿಶೇಷವಾಗಲಿದೆ. ಏಕೆಂದರೆ ಈ ಬಾರಿ ಟಿ20 ವಿಶ್ವಕಪ್‌ನಲ್ಲಿ 20 ತಂಡಗಳು ಆಡಲಿವೆ. ಇದುವರೆಗೆ 19 ತಂಡಗಳು ಈ ಟೂರ್ನಿಗೆ ಅರ್ಹತೆ ಪಡೆದಿದ್ದು, ಈ ಪಟ್ಟಿಗೆ ನಮೀಬಿಯಾ (Namibia) ತಂಡ ಹೊಸದಾಗಿ ಸೇರ್ಪಡೆಗೊಂಡಿದೆ.

ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದ ನಮೀಬಿಯಾ

2024ರ ಟಿ20 ವಿಶ್ವಕಪ್‌ಗಾಗಿ ಆಫ್ರಿಕಾ ವಲಯದ ಅರ್ಹತಾ ಪಂದ್ಯಗಳನ್ನು 7 ತಂಡಗಳ ನಡುವೆ ಆಡಲಾಗುತ್ತಿದೆ. ಇದರಲ್ಲಿ ನಮೀಬಿಯಾ ತಂಡ ಆಡಿರುವ 5 ಪಂದ್ಯಗಳಲ್ಲಿ 5ರಲ್ಲಿ ಜಯಗಳಿಸುವ ಮೂಲಕ 2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿದೆ. ನಮೀಬಿಯಾ, ಆಫ್ರಿಕಾ ಟಿ20 ವಿಶ್ವಕಪ್ ಕ್ವಾಲಿಫೈಯರ್‌ನಿಂದ ಟಿ20 ವಿಶ್ವಕಪ್ 2024 ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ. ಇದೀಗ ಟಿ20ವಿಶ್ವಕಪ್​ಗೆ ಅರ್ಹತೆ ಪಡೆಯಲು ಕೇವಲ 1 ಸ್ಥಾನ ಮಾತ್ರ ಉಳಿದಿದ್ದು, ಜಿಂಬಾಬ್ವೆ, ಉಗಾಂಡಾ ಮತ್ತು ಕೀನ್ಯಾ ನಡುವೆ ಭರ್ಜರಿ ಪೈಪೋಟಿ ಕಂಡು ಬರುತ್ತಿದೆ.

ಟಿ20 ಪಂದ್ಯದ ಒಂದು ಓವರ್​ನಲ್ಲಿ ಅಧಿಕ ರನ್ ಬಾರಿಸಿದ ಭಾರತೀಯ ಯಾರು ಗೊತ್ತಾ?

19 ತಂಡಗಳು ಅರ್ಹತೆ ಪಡೆದಿವೆ

ಅಮೆರಿಕ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ, ನೆದರ್ಲ್ಯಾಂಡ್ಸ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಐರ್ಲೆಂಡ್, ಸ್ಕಾಟ್ಲೆಂಡ್, ಪಪುವಾ ನ್ಯೂಗಿನಿಯಾ, ಕೆನಡಾ, ನೇಪಾಳ, ಒಮನ್ ಮತ್ತು ನಮೀಬಿಯಾ ತಂಡಗಳು ಇಲ್ಲಿಯವರೆಗೆ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದಿದೆ. ಈ ಬಾರಿಯ ಟೂರ್ನಿಯ ಆರಂಭದಲ್ಲಿ ತಲಾ ಐದು ತಂಡಗಳ ನಾಲ್ಕು ಗುಂಪುಗಳು ಮೊದಲ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ 8 ಗೆ ಮುನ್ನಡೆಯುತ್ತವೆ. ಅಲ್ಲಿಂದ ಮತ್ತೆ ಸೂಪರ್ 8 ರ ಕೊನೆಯಲ್ಲಿ ಅಗ್ರ ನಾಲ್ಕು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ.

ಪಂದ್ಯ ಹೀಗಿತ್ತು

ತನ್ನ ಐದನೇ ಪಂದ್ಯದಲ್ಲಿ ತಾಂಜಾನಿಯಾ ತಂಡವನ್ನು 58 ರನ್‌ಗಳಿಂದ ಸೋಲಿಸಿದ ನಮೀಬಿಯಾ ಸತತ ಐದನೇ ಗೆಲುವಿನೊಂದಿಗೆ ಮುಂದಿನ ವರ್ಷದ ವಿಶ್ವಕಪ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನಮೀಬಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಕಲೆಹಾಕಿತು. ಪ್ರತ್ಯುತ್ತರವಾಗಿ ತಾಂಜಾನಿಯಾ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 99 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಕ್ವಾಲಿಫೈಯರ್​ನಲ್ಲಿ ನಮೀಬಿಯಾ ಸಾಧನೆ

  • ಮೊದಲ ಪಂದ್ಯದಲ್ಲಿ ನಮೀಬಿಯಾ 7 ವಿಕೆಟ್‌ಗಳಿಂದ ಜಿಂಬಾಬ್ವೆಯನ್ನು ಸೋಲಿಸಿತು.
  • ಎರಡನೇ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಉಗಾಂಡವನ್ನು ಸೋಲಿಸಿತು.
  • ಮೂರನೇ ಪಂದ್ಯದಲ್ಲಿ 68 ರನ್‌ಗಳಿಂದ ರುವಾಂಡಾ ತಂಡವನ್ನು ಸೋಲಿಸಿತು.
  • ನಾಲ್ಕನೇ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಕೀನ್ಯಾವನ್ನು ಸೋಲಿಸಿತು.
  • ಐದನೇ ಪಂದ್ಯದಲ್ಲಿ 58 ರನ್‌ಗಳಿಂದ ತಾಂಜಾನಿಯಾವನ್ನು ಸೋಲಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ