ಮುಂದಿನ ವರ್ಷ ಅಂದರೆ, 2024 ರ ಜೂನ್ ತಿಂಗಳಿನಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್‌ಗೆ (ICC Men’s T20 World Cup 2024) ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ (West Indies and America) ಜಂಟಿ ಆತಿಥ್ಯದಲ್ಲಿ ನಡೆಯಲ್ಲಿರುವ ಈ ಟೂರ್ನಿ ತುಂಬಾ ವಿಶೇಷವಾಗಲಿದೆ. ಏಕೆಂದರೆ ಈ ಬಾರಿ ಟಿ20 ವಿಶ್ವಕಪ್‌ನಲ್ಲಿ 20 ತಂಡಗಳು ಆಡಲಿವೆ. ಇದುವರೆಗೆ 19 ತಂಡಗಳು ಈ ಟೂರ್ನಿಗೆ ಅರ್ಹತೆ ಪಡೆದಿದ್ದು, ಈ ಪಟ್ಟಿಗೆ ನಮೀಬಿಯಾ (Namibia) ತಂಡ ಹೊಸದಾಗಿ ಸೇರ್ಪಡೆಗೊಂಡಿದೆ.
2024ರ ಟಿ20 ವಿಶ್ವಕಪ್‌ಗಾಗಿ ಆಫ್ರಿಕಾ ವಲಯದ ಅರ್ಹತಾ ಪಂದ್ಯಗಳನ್ನು 7 ತಂಡಗಳ ನಡುವೆ ಆಡಲಾಗುತ್ತಿದೆ. ಇದರಲ್ಲಿ ನಮೀಬಿಯಾ ತಂಡ ಆಡಿರುವ 5 ಪಂದ್ಯಗಳಲ್ಲಿ 5ರಲ್ಲಿ ಜಯಗಳಿಸುವ ಮೂಲಕ 2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿದೆ. ನಮೀಬಿಯಾ, ಆಫ್ರಿಕಾ ಟಿ20 ವಿಶ್ವಕಪ್ ಕ್ವಾಲಿಫೈಯರ್‌ನಿಂದ ಟಿ20 ವಿಶ್ವಕಪ್ 2024 ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ. ಇದೀಗ ಟಿ20ವಿಶ್ವಕಪ್‌ಗೆ ಅರ್ಹತೆ ಪಡೆಯಲು ಕೇವಲ 1 ಸ್ಥಾನ ಮಾತ್ರ ಉಳಿದಿದ್ದು, ಜಿಂಬಾಬ್ವೆ, ಉಗಾಂಡಾ ಮತ್ತು ಕೀನ್ಯಾ ನಡುವೆ ಭರ್ಜರಿ ಪೈಪೋಟಿ ಕಂಡು ಬರುತ್ತಿದೆ.
ಟಿ20 ಪಂದ್ಯದ ಒಂದು ಓವರ್ನಲ್ಲಿ ಅಧಿಕ ರನ್ ಬಾರಿಸಿದ ಭಾರತೀಯ ಯಾರು ಗೊತ್ತಾ?
ಅಮೆರಿಕ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ, ನೆದರ್ಲ್ಯಾಂಡ್ಸ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಐರ್ಲೆಂಡ್, ಸ್ಕಾಟ್ಲೆಂಡ್, ಪಪುವಾ ನ್ಯೂಗಿನಿಯಾ, ಕೆನಡಾ, ನೇಪಾಳ, ಒಮನ್ ಮತ್ತು ನಮೀಬಿಯಾ ತಂಡಗಳು ಇಲ್ಲಿಯವರೆಗೆ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದಿದೆ. ಈ ಬಾರಿಯ ಟೂರ್ನಿಯ ಆರಂಭದಲ್ಲಿ ತಲಾ ಐದು ತಂಡಗಳ ನಾಲ್ಕು ಗುಂಪುಗಳು ಮೊದಲ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ 8 ಗೆ ಮುನ್ನಡೆಯುತ್ತವೆ. ಅಲ್ಲಿಂದ ಮತ್ತೆ ಸೂಪರ್ 8 ರ ಕೊನೆಯಲ್ಲಿ ಅಗ್ರ ನಾಲ್ಕು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ.
ತನ್ನ ಐದನೇ ಪಂದ್ಯದಲ್ಲಿ ತಾಂಜಾನಿಯಾ ತಂಡವನ್ನು 58 ರನ್‌ಗಳಿಂದ ಸೋಲಿಸಿದ ನಮೀಬಿಯಾ ಸತತ ಐದನೇ ಗೆಲುವಿನೊಂದಿಗೆ ಮುಂದಿನ ವರ್ಷದ ವಿಶ್ವಕಪ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನಮೀಬಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಕಲೆಹಾಕಿತು. ಪ್ರತ್ಯುತ್ತರವಾಗಿ ತಾಂಜಾನಿಯಾ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 99 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.