AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮೀಬಿಯಾ ವಿರುದ್ಧ ‘ಸೋತ’ ಆಫ್ರಿಕಾ

Namibia vs South Africa, 1st Match: ನಮೀಬಿಯಾ ನೆಲದಲ್ಲಿ ನಡೆಯುತ್ತಿರುವ ಟಿ20 ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲೇ ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ರಸದೌತಣ ಸಿಕ್ಕಿದೆ. ಆತಿಥೇಯ ನಮೀಬಿಯಾ ತಂಡವು ಕರಾರುವಾಕ್ ಬೌಲಿಂಗ್ ಪ್ರದರ್ಶನದ ಮೂಲಕ ಪ್ರವಾಸಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿದೆ.

ನಮೀಬಿಯಾ ವಿರುದ್ಧ 'ಸೋತ' ಆಫ್ರಿಕಾ
NAM vs SAImage Credit source: cricinfo
ಝಾಹಿರ್ ಯೂಸುಫ್
|

Updated on: Aug 29, 2026 | 8:39 AM

Share

ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ನಡುವಣ ಟಿ20 ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲೇ ಅಚ್ಚರಿಯ ಫಲಿತಾಂಶ ಮೂಡಿ ಬಂದಿದೆ. ಬಲಿಷ್ಠ ಸೌತ್ ಆಫ್ರಿಕಾ ತಂಡಕ್ಕೆ ಶಾಕ್ ನೀಡಿರುವ ಆತಿಥೇಯ ನಮೀಬಿಯಾ, ರೋಚಕ ಜಯ ಸಾಧಿಸಿ ಸರಣಿಯಲ್ಲಿ ಭರ್ಜರಿ ಶುಭಾರಂಭ ಮಾಡಿದೆ.

ವಿಂಡ್‌ಹೋಕ್‌ನ ನಮೀಬಿಯಾ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನಮೀಬಿಯಾ 9 ವಿಕೆಟ್ ನಷ್ಟಕ್ಕೆ 163 ರನ್‌ ಗಳಿಸಿತು. ಈ ಸವಾಲಿನ ಗುರಿಯನ್ನು ಬೆನ್ನಟ್ಟಿದ ಸೌತ್ ಆಫ್ರಿಕಾ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 145 ರನ್‌ಗಳಷ್ಟೇ ಗಳಿಸಲು ಶಕ್ತವಾಗಿ ಶರಣಾಯಿತು.

ಆರಂಭಿಕ ದಾಂಡಿಗರ ಆರ್ಭಟ:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನಮೀಬಿಯಾ ತಂಡಕ್ಕೆ ಆರಂಭಿಕ ಆಟಗಾರರಾದ ಜಾನ್ ಫ್ರೈಲಿಂಕ್ (60 ರನ್, 38 ಎಸೆತ) ಮತ್ತು ಲೌರೆನ್ ಸ್ಟೀನ್‌ಕಾಂಪ್ (41 ರನ್, 29 ಎಸೆತ) ಮೊದಲ ವಿಕೆಟ್‌ಗೆ 84 ರನ್‌ಗಳ  ಜೊತೆಯಾಟದೊಂದಿಗೆ ಸ್ಪೋಟಕ ಆರಂಭ ಒದಗಿಸಿದ್ದರು.

ಈ ಭರ್ಜರಿ ಆರಂಭದೊಂದಿಗೆ ಒಂದು ಹಂತದಲ್ಲಿ ನಮೀಬಿಯಾ ಬೃಹತ್ ಮೊತ್ತದತ್ತ ಮುನ್ನಡೆಯುತ್ತಿತ್ತಾದರೂ, ಸೌತ್ ಆಫ್ರಿಕಾದ ಸ್ಪಿನ್ನರ್ ಪ್ರೆನೆಲನ್ ಸುಬ್ರಾಯನ್ (3/32) ಮತ್ತು ನಾಯಕ ಜಾರ್ನ್ ಫಾರ್ಟುಯಿನ್ (2/17) ಮಧ್ಯಮ ಕ್ರಮಾಂಕದ ವಿಕೆಟ್​ಗಳನ್ನು ಉರುಳಿಸುವ ಮೂಲಕ ರನ್ ವೇಗಕ್ಕೆ ಬ್ರೇಕ್ ಹಾಕಿದರು. ಅಂತಿಮವಾಗಿ ನಮೀಬಿಯಾ 20 ಓವರ್‌ಗಳಲ್ಲಿ 163 ರನ್‌ಗಳ ಗೌರವಯುತ ಮೊತ್ತ ಕಲೆಹಾಕಿತು.

ಬ್ರೆವಿಸ್ ಹೋರಾಟ ವ್ಯರ್ಥ:

164 ರನ್‌ಗಳ ಗುರಿ ಬೆನ್ನಟ್ಟಿದ ಸೌತ್ ಆಫ್ರಿಕಾ ತಂಡದ ಆರಂಭ ಆಘಾತಕಾರಿಯಾಗಿತ್ತು. ಪವರ್‌ಪ್ಲೇ ಅವಧಿಯಲ್ಲೇ ಇಬ್ಬರೂ ಓಪನರ್‌ಗಳು ಪೆವಿಲಿಯನ್ ಸೇರಿದರು. ಆದರೆ, ಮಧ್ಯಮ ಕ್ರಮಾಂಕದಲ್ಲಿ ಯುವ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ (75 ರನ್, 50 ಎಸೆತ, 5 ಸಿಕ್ಸರ್) ಏಕಾಂಗಿ ಹೋರಾಟ ನಡೆಸಿ ಸೌತ್ ಆಫ್ರಿಕಾ ತಂಡಕ್ಕೆ ಗೆಲುವಿನ ಆಸೆ ಜೀವಂತವಾಗಿರಿಸಿದ್ದರು.

ಆದರೆ 17ನೇ ಓವರ್‌ನ ಕೊನೆಯ ಎಸೆತದಲ್ಲಿ ಬ್ರೆವಿಸ್ ಔಟಾಗುತ್ತಿದ್ದಂತೆ ಸೌತ್ ಆಫ್ರಿಕಾದ ಗೆಲುವಿನ ಕನಸು ಭಗ್ನಗೊಂಡಿತು. ನಮೀಬಿಯಾ ಪರ ಮಾರಕ ಬೌಲಿಂಗ್ ಪ್ರದರ್ಶಿಸಿದ ರುಬೆನ್ ಟ್ರಂಪಲ್‌ಮನ್ (3/24) ಮತ್ತು ಆಲ್‌ರೌಂಡರ್ ಜೆಜೆ ಸ್ಮಿತ್ (3/31) ಗೆಲುವಿನ ರೂವಾರಿಗಳೆನಿಸಿಕೊಂಡರು.

ಪಂದ್ಯದ ಸಂಕ್ಷಿಪ್ತ ಸ್ಕೋರ್:

  • ನಮೀಬಿಯಾ: 20 ಓವರ್‌ಗಳಲ್ಲಿ 163/9 (ಜಾನ್ ಫ್ರೈಲಿಂಕ್ 60, ಲೌರೆನ್ ಸ್ಟೀನ್‌ಕಾಂಪ್ 41; ಪ್ರೆನೆಲನ್ ಸುಬ್ರಾಯನ್ 3/32)
  • ಸೌತ್ ಆಫ್ರಿಕಾ: 20 ಓವರ್‌ಗಳಲ್ಲಿ 145/9 (ಡೆವಾಲ್ಡ್ ಬ್ರೆವಿಸ್ 75; ರುಬೆನ್ ಟ್ರಂಪಲ್‌ಮನ್ 3/24, ಜೆಜೆ ಸ್ಮಿತ್ 3/31)
  • ಫಲಿತಾಂಶ: ನಮೀಬಿಯಾಗೆ 18 ರನ್‌ಗಳ ಜಯ.

ಈ ಐತಿಹಾಸಿಕ ಗೆಲುವಿನೊಂದಿಗೆ ನಮೀಬಿಯಾ ತಂಡವು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಸೌತ್ ಆಫ್ರಿಕಾ ವಿರುದ್ಧ ತನ್ನ ಅಜೇಯ ದಾಖಲೆಯನ್ನು (2-0) ಕಾಯ್ದುಕೊಂಡಿದೆ. ಅಂದರೆ ಸೌತ್ ಆಫ್ರಿಕಾ ವಿರುದ್ಧ ಆಡಿದ 2 ಟಿ20 ಮ್ಯಾಚ್​ಗಳಲ್ಲೂ ನಮೀಬಿಯಾ ತಂಡ ಜಯ ಸಾಧಿಸಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ