T20 World Cup 2024: ಟಿ20 ವಿಶ್ವಕಪ್​ನ 2 ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 World Cup 2024: ಈ ಬಾರಿಯ ವಿಶ್ವಕಪ್​ ಅನ್ನು ವೆಸ್ಟ್ ಇಂಡೀಸ್ ಹಾಗೂ ಯುಎಸ್​ಎ ಜಂಟಿಯಾಗಿ ಆಯೋಜಿಸಲಿದೆ. ಜೂನ್ 1 ರಿಂದ ಶುರುವಾಗಲಿರುವ ಟೂರ್ನಿಯ ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

T20 World Cup 2024: ಟಿ20 ವಿಶ್ವಕಪ್​ನ 2 ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
Nandini - T20 World Cup 2024
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 21, 2024 | 12:27 PM

ಟಿ20 ವಿಶ್ವಕಪ್​ನಲ್ಲಿ (T20 World Cup 2024) ಕಣಕ್ಕಿಳಿಯಲಿರುವ ಐರ್ಲೆಂಡ್​ ಹಾಗೂ ಸ್ಕಾಟ್ಲೆಂಡ್ ತಂಡಗಳಿಗೆ ಕರ್ನಾಟಕ ಹಾಲು ಒಕ್ಕೂಟ (KMF) ಪ್ರಾಯೋಕತ್ವವಹಿಸಿಕೊಂಡಿದೆ. ಈ ಮೂಲಕ ಕೆಎಂಎಫ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ರಾಂಡ್‌ ವ್ಯಾಲ್ಯೂ ಹೆಚ್ಚಿಸಲು ಮುಂದಾಗಿದೆ. ಯುಎಸ್​ಎ ಹಾಗೂ ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಜೂನ್ 1 ರಿಂದ ಶುರುವಾಗಲಿದ್ದು, ಈ ವೇಳೆ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಜೆರ್ಸಿ ಮೇಲೆ ಪ್ರಾಯೋಜಕರಾಗಿ ನಂದಿನಿ ಹೆಸರು ಕಾಣಿಸಿಕೊಳ್ಳಲಿದೆ.

ಈ ಬಗ್ಗೆ ಮನಿ ಕಂಟ್ರೊಲ್ ಜೊತೆ ಮಾತನಾಡಿರುವ KMF ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಎಂಬ ಎರಡು ತಂಡಗಳನ್ನು ಪ್ರಾಯೋಜಿಸಲು ನಾವು ITW ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ಗೆ ಏಪ್ರಿಲ್ 20 ರಂದು ಆದೇಶವನ್ನು ನೀಡಿದ್ದೇವೆ. ಅದರಂತೆ ನಂದಿನಿ ಲೋಗೋ ಲೀಡ್ ಆರ್ಮ್ ಜೆರ್ಸಿಯಲ್ಲಿ ಕಂಡು ಬರುಲಿದೆ. ಅಂದರೆ, ಎಡಗೈ ಬ್ಯಾಟ್ಸ್‌ಮನ್‌ಗಳ ಬಲ ಮತ್ತು ಬಲ ಬ್ಯಾಟ್ಸ್‌ಮನ್‌ಗಳ ಎಡ ಭಾಗದಲ್ಲಿ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಇದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಅವರು ಹೇಳಿದ್ದಾರೆ.

ಮಿಡಲ್ ಈಸ್ಟ್, ಸಿಂಗಾಪುರ, ಭೂತಾನ್ ಮತ್ತು ಮ್ಯಾನ್ಮಾರ್ ಸೇರಿದಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕೆಎಂಎಫ್ ಈಗಾಗಲೇ ಮಾರುಕಟ್ಟೆಯನ್ನು ಹೊಂದಿದೆ. ಇದೀಗ ಟಿ20 ವಿಶ್ವಕಪ್​ನಲ್ಲಿ ಎರಡು ತಂಡಗಳಿಗೆ ಪ್ರಾಯೋಜಕತ್ವವನ್ನು ವಹಿಸಿಕೊಂಡಿದ್ದೇವೆ. ಈ ಮೂಲಕ ಫ್ರೋಝನ್ ಸಿಹಿತಿಂಡಿಗಳು ಯುಎಸ್‌ಗೆ ಮಾರುಕಟ್ಟೆಯಲ್ಲಿ ಅಸ್ತಿತ್ವವನ್ನು ಸೃಷ್ಟಿಸಿಕೊಳ್ಳುವ ವಿಶ್ವಾಸವಿದೆ ಎಂದು ಜಗದೀಶ್ ತಿಳಿಸಿದ್ದಾರೆ.

ಅಲ್ಲದೆ ಈ ಬಾರಿ ಟಿ20 ವಿಶ್ವಕಪ್ ಸಂದರ್ಭದಲ್ಲಿ ಅಮೆರಿಕದಲ್ಲಿ ಹಾಲಿನಿಂದ ಕೂಡಿದ ಎನರ್ಜಿ ಡ್ರಿಂಕ್ ನಂದಿನಿ ಸ್ಪ್ಲಾಶ್​ ಅನ್ನು ಸಹ ಕೆಎಂಎಫ್ ಬಿಡುಗಡೆ ಮಾಡಲಿದೆ. ಈ ಮೂಲಕ ಟಿ20 ವಿಶ್ವಕಪ್​ ವೇಳೆ ಅಮೆರಿಕನ್ ಮಾರುಕಟ್ಟೆಯಲ್ಲಿ ಹೊಸ ಉತ್ಪನ್ನವನ್ನು ಪರಿಚಯಿಸಲು ಕರ್ನಾಟಕ ಹಾಲು ಒಕ್ಕೂಟ ನಿರ್ಧರಿಸಿದೆ.

ಇದನ್ನೂ ಓದಿ: IPL 2024: ಕುಚಿಕು ಕುಚಿಕು ಕುಚಿಕು… ಕೊಹ್ಲಿ-ಗಂಭೀರ್ ಕುಚಿಕು: ವಿಡಿಯೋ ವೈರಲ್

ಟಿ20 ವಿಶ್ವಕಪ್ 2024:

ಈ ಬಾರಿಯ ವಿಶ್ವಕಪ್​ ಅನ್ನು ವೆಸ್ಟ್ ಇಂಡೀಸ್ ಹಾಗೂ ಯುಎಸ್​ಎ ಜಂಟಿಯಾಗಿ ಆಯೋಜಿಸಲಿದೆ. ಜೂನ್ 1 ರಿಂದ ಶುರುವಾಗಲಿರುವ ಟೂರ್ನಿಯ ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ನ್ಯೂಯಾರ್ಕ್​ನ ಹೊಸ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು