AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂದ್ಯ ನಡೆಯುವಾಗಲೇ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ..!

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ U19 ಪಂದ್ಯದ ವೇಳೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡರು. ಯಾವುದೇ ಅಡೆತಡೆಯಿಲ್ಲದೆ ಪಂದ್ಯ ಸುಖಾಂತ್ಯಗೊಂಡಿತು, ಭಾರತ U19 ತಂಡ 10 ವಿಕೆಟ್‌ಗಳಿಂದ ಜಯಗಳಿಸಿತು. ಅಹಮದಾಬಾದ್ ಹೈಕೋರ್ಟ್ ಮತ್ತು ಶಾಲೆಗಳಿಗೂ ಬೆದರಿಕೆ ಬಂದಿದ್ದು, ಇದು ಕ್ರೀಡಾಂಗಣಕ್ಕೆ ಮೊದಲ ಬಾರಿಯ ಬೆದರಿಕೆಯಲ್ಲ.

ಪಂದ್ಯ ನಡೆಯುವಾಗಲೇ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ..!
ನರೇಂದ್ರ ಮೋದಿ ಮೈದಾನImage Credit source: PTI
ಪೃಥ್ವಿಶಂಕರ
|

Updated on:Oct 07, 2026 | 6:00 PM

Share

ಭಾರತದಲ್ಲಿ ಹುಸಿ ಬಾಂಬ್ ಬೆದರಿಕೆಗಳಂತಹ ಪ್ರಕರಣಗಳು ಆಗಾಗ್ಗೆ ನಡೆಯುತ್ತಲ್ಲಿರುತ್ತವೆ. ಈ ಮೂಲಕ ಸಾರ್ವಜನಿಕರನ್ನು ಭಯ ಭೀತರನ್ನಾಗಿಸುವುದು ಕಿಡಿಗೇಡಿಗಳ ಹುನ್ನಾರವಾಗಿರುತ್ತದೆ. ಇದೀಗ ಅಂತಹದ್ದೇ ಹುಸಿ ಬಾಂಬ್ ಬೆದರಿಕೆಯ ಇಮೇಲ್ ಗುಜರಾತ್ ಕ್ರಿಕೆಟ್ ಅಸೋಸಿಯೇಷನ್‌ಗೆ ಬಂದಿದೆ. ಕೂಡಲೇ ಎಚ್ಚೆತ್ತುಕೊಂಡ ಗುಜರಾತ್ ಕ್ರಿಕೆಟ್ ಅಸೋಸಿಯೇಷನ್, ಇಮೇಲ್ ಬಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದೆ. ಕಾರ್ಯಪ್ರವೃತ್ತರಾದ ಪೊಲೀಸರು ಮುಂಜಾಗೃತ ಕ್ರಮಗಳನ್ನು ಕೈಗೊಂಡು ಇಡೀ ಕ್ರೀಡಾಂಗಣವನ್ನು ಖಾಲಿ ಮಾಡಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಗುಜರಾತ್ ಕ್ರಿಕೆಟ್ ಅಸೋಸಿಯೇಷನ್‌ಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಾಗ ಭಾರತ ಹಾಗೂ ಆಸ್ಟ್ರೇಲಿಯಾ ಅಂಡರ್ 19 ತಂಡಗಳ ನಡುವೆ ಅನಧಿಕೃತ ಟೆಸ್ಟ್ ಪಂದ್ಯ ನಡೆಯುತ್ತಿತ್ತು. ಆದಾಗ್ಯೂ ಯಾವುದೇ ಅಡೆತಡೆಗಳಿಲ್ಲದೆ ಈ ಪಂದ್ಯ ಬಾಂಬ್ ಬೆದರಿಕೆಯ ಇಮೇಲ್ ಬಂದ 15 ನಿಮಿಷದೊಳಗೆ ಸುಖಾಂತ್ಯಗೊಂಡಿತು. ಈ ಪಂದ್ಯವನ್ನು ಭಾರತ ಯುವ ಪಡೆ 10 ವಿಕೆಟ್​ಗಳಿಂದ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು.

ಹೈಕೋರ್ಟ್, ಶಾಲೆಗಳಿಗೂ ಇಮೇಲ್

ಬಾಂಬ್ ಬೆದರಿಕೆಯ ಇಮೇಲ್ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಮಾತ್ರವಲ್ಲದೆ ಅಹಮದಾಬಾದ್ ಹೈಕೋರ್ಟ್ ಮತ್ತು ಶಾಲೆಗಳಿಗೂ ಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಗುಜರಾತ್ ಕ್ರಿಕೆಟ್ ಅಸೋಸಿಯೇಷನ್‌, ‘ಇಮೇಲ್ ಬಂದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದೆವು. ಕೂಡಲೇ ಪೊಲೀಸ್ ಸೈಬರ್ ಸೆಲ್ ಕ್ರೀಡಾಂಗಣಕ್ಕೆ ಬಂದು ತಪಾಸಣೆ ನಡೆಸಿತು. ಅಷ್ಟಕ್ಕೂ ಈ ರೀತಿಯ ಬಾಂಬ್ ಬೆದರಿಕೆಗಳು ಇದೇ ಮೊದಲಲ್ಲ. 2023 ರ ವಿಶ್ವಕಪ್ ಮತ್ತು ಐಪಿಎಲ್ ಸೇರಿದಂತೆ ಹಲವಾರು ಬಾರಿ ಬಂದಿವೆ. ಹೀಗಾಗಿ ನಾವು ಪಂದ್ಯಕ್ಕೆ ಅಡಚಣೆಯಾಗದಂತೆ ಎರಡೂ ತಂಡಗಳಿಗೆ ಈ ಬೆದರಿಕೆ ಬಗ್ಗೆ ಬಹಳ ತಡವಾಗಿ ತಿಳಿಸಲಾಯಿತು. ಇದರಿಂದಾಗಿ ಪಂದ್ಯ ಮುಗಿದ ಬಳಿಕ ಎರಡೂ ತಂಡಗಳು ಮಧ್ಯಾಹ್ನ 1 ಗಂಟೆಗೆ ತಮ್ಮ ಹೋಟೆಲ್‌ಗಳಿಗೆ ತೆರಳಿದವು’ ಎಂದಿದೆ.

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುಪಡೆಯಿಂದ ಭೀಕರ ಬಾಂಬ್ ದಾಳಿ: ಮಹಿಳೆಯರು, ಮಕ್ಕಳು ಸೇರಿ 9 ನಾಗರಿಕರು ಸಾವು

ಭಾರತಕ್ಕೆ 10 ವಿಕೆಟ್ ಜಯ

ಇನ್ನು ಈ ಪಂದ್ಯದ ಬಗ್ಗೆ ಹೇಳುವುದಾದರೆ, ಭಾರತ ಅಂಡರ್-19 ತಂಡವು, ಆಸ್ಟ್ರೇಲಿಯಾ ಅಂಡರ್-19 ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 174 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ 315 ರನ್‌ ಕಲೆಹಾಕಿ 141 ರನ್‌ಗಳ ಮುನ್ನಡೆ ಪಡೆಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ, ಆಸ್ಟ್ರೇಲಿಯಾ ತಂಡ ಕೇವಲ 151 ರನ್‌ಗಳಿಸಲಷ್ಟೇ ಶಕ್ತವಾಗಿ ಭಾರತ ಅಂಡರ್-19 ತಂಡಕ್ಕೆ 11 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಆತಿಥೇಯ ತಂಡ ಯಾವುದೇ ವಿಕೆಟ್ ಕಳೆದುಕೊಳ್ಳದೆ ಪಂದ್ಯವನ್ನು ಗೆದ್ದುಕೊಂಡಿತು. ಭಾರತದ ಪರ ಎಡಗೈ ಸ್ಪಿನ್ನರ್ ತನ್ಮಯ್ ಬಲೋಡಾ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗಳು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 8 ವಿಕೆಟ್‌ಗಳನ್ನು ಕಬಳಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Wed, 7 October 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್