AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಪಡೆಗೆ ಆಘಾತದ ಮೇಲೆ ಆಘಾತ: ಪ್ರಮುಖ ಬೌಲರ್ ವಿಶ್ವಕಪ್​ನಿಂದ ಔಟ್

ODI World Cup 2023: ಅಕ್ಟೋಬರ್ 6 ರಂದು ನೆದರ್​ಲೆಂಡ್ಸ್​ ವಿರುದ್ಧದ ಪಂದ್ಯದ ಮೂಲಕ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಅಕ್ಟೋಬರ್ 14 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

ಪಾಕ್ ಪಡೆಗೆ ಆಘಾತದ ಮೇಲೆ ಆಘಾತ: ಪ್ರಮುಖ ಬೌಲರ್ ವಿಶ್ವಕಪ್​ನಿಂದ ಔಟ್
Pakistan Team
TV9 Web
| Updated By: ಝಾಹಿರ್ ಯೂಸುಫ್|

Updated on: Sep 16, 2023 | 5:59 PM

Share

ಏಷ್ಯಾಕಪ್​ನಲ್ಲಿನ ಹೀನಾಯ ಸೋಲಿನಿಂದ ಚೇತರಿಸಿಕೊಳ್ಳುವ ಮುನ್ನವೇ ಪಾಕಿಸ್ತಾನ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಅದು ಕೂಡ ತಂಡದ ಪ್ರಮುಖ ಬೌಲರ್ ನಸೀಮ್ ಶಾ ಏಕದಿನ ವಿಶ್ವಕಪ್​ ಟೂರ್ನಿಯಿಂದ ಹೊರಬೀಳುವ ಶಾಕಿಂಗ್ ಸುದ್ದಿಯೊಂದಿಗೆ. ಸೋಮವಾರ ಭಾರತದ ವಿರುದ್ಧ ನಡೆದ ಸೂಪರ್-4 ಹಂತದ ಪಂದ್ಯದ ವೇಳೆ ನಸೀಮ್ ಶಾ ಅವರು ಭುಜಕ್ಕೆ ಗಾಯವಾಗಿತ್ತು. ಹೀಗಾಗಿ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು.

ಇದೇ ಕಾರಣದಿಂದಾಗಿ ಶ್ರೀಲಂಕಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲೂ ಯುವ ವೇಗಿ ಕಾಣಿಸಿಕೊಂಡಿರಲಿಲ್ಲ. ಇದೀಗ ನಸೀಮ್ ಶಾ ಅವರ ಸ್ಕ್ಯಾನಿಂಗ್ ರಿಪೋರ್ಟ್ ಬಂದಿದ್ದು, ಭುಜದ ಗಾಯವು ನಿರೀಕ್ಷಿಸಿದ್ದಕ್ಕಿಂತ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಅವರು ಹೆಚ್ಚಿನ ವಿಶ್ರಾಂತಿ ಪಡೆದುಕೊಳ್ಳಬೇಕಾಗಿ ಬರಬಹುದು ಎಂದು ಪ್ರಾಥಮಿಕ ವೈದ್ಯಕೀಯ ರಿಪೋರ್ಟ್ ತಿಳಿಸಿದೆ.

ಅಂದರೆ ಕನಿಷ್ಠ 2 ತಿಂಗಳುಗಳ ಕಾಲವಾದರೂ ಅವರು ಮೈದಾನದಿಂದ ಹೊರಗುಳಿಯಬೇಕಾಗಿ ಬರಬಹುದು. ಇತ್ತ ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಶುರುವಾಗಲಿದ್ದು, ಈ ವೇಳೆಗೆ ಅವರು ಚೇತರಿಸಿಕೊಳ್ಳುವುದು ಅನುಮಾನ. ಹೀಗಾಗಿ ನಸೀಮ್ ಶಾ ಇಡೀ ಟೂರ್ನಿಯಿಂದ ಹೊರಗುಳಿಯುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.

ಏಕದಿನ ವಿಶ್ವಕಪ್​ ಮೂಲಕ ಭಾರತದ ವಿರುದ್ಧದ ಏಷ್ಯಾಕಪ್​ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದ್ದ ಪಾಕ್ ಪಡೆಗೆ ಇದೀಗ ನಸೀಮ್ ಶಾ ಅಲಭ್ಯತೆಯು ದೊಡ್ಡ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

ಝಮಾನ್ ಖಾನ್​ಗೆ ಅವಕಾಶ:

ನಸೀಮ್ ಶಾ ಏಕದಿನ ವಿಶ್ವಕಪ್​ನಿಂದ ಹೊರಗುಳಿದರೆ, ಝಮಾನ್​ ಖಾನ್​ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಏಕೆಂದರೆ ಶ್ರೀಲಂಕಾ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿರುವ ಝಮಾನ್ ಅದ್ಭುತ ದಾಳಿ ಸಂಘಟಿಸಿದ್ದರು. ಅಲ್ಲದೆ ಶ್ರೀಲಂಕಾ ವಿರುದ್ಧ 8 ರನ್​ಗಳ ಗುರಿಯನ್ನು ಕೊನೆಯ ಎಸೆತದವರೆಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಚೊಚ್ಚಲ ಪಂದ್ಯದಲ್ಲೇ ಪ್ರಭಾವ ಬೀರಿರುವ ಝಮಾನ್​ ಖಾನ್​ಗೆ ಏಕದಿನ ವಿಶ್ವಕಪ್​ ತಂಡದಲ್ಲಿ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!

ಪಾಕ್ ವಿಶ್ವಕಪ್ ಅಭಿಯಾನ:

ಅಕ್ಟೋಬರ್ 6 ರಂದು ನೆದರ್​ಲೆಂಡ್ಸ್​ ವಿರುದ್ಧದ ಪಂದ್ಯದ ಮೂಲಕ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಅಕ್ಟೋಬರ್ 14 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್