IND vs ENG: ಟಿ20 ಸರಣಿಯ ನಡುವೆ ಇಂಗ್ಲೆಂಡ್ಗೆ ಆಘಾತ; 3ನೇ ಪಂದ್ಯದಿಂದ ಕ್ಯಾಪ್ಟನ್ ಔಟ್
Nat Sciver-Brunt Injury: ಭಾರತ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಆದರೆ, ಇಂಗ್ಲೆಂಡ್ ನಾಯಕಿ ನಟ್ ಸಿವರ್-ಬ್ರಂಟ್ ಗಾಯಗೊಂಡಿದ್ದಾರೆ. ಇದರಿಂದಾಗಿ ಅವರು ಮೂರನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಈ ಗಾಯದಿಂದ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಟ್ಯಾಮಿ ಬ್ಯೂಮಾಂಟ್ ಅವರು ತಂಡದ ಹೊಸ ನಾಯಕಿಯಾಗಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ (India vs England) ನಡುವೆ ರೋಮಾಂಚಕಾರಿ ಕ್ರಿಕೆಟ್ ನಡೆಯುತ್ತಿದೆ. ಒಂದೆಡೆ, ಶುಭ್ಮನ್ ಗಿಲ್ ನಾಯಕತ್ವದ ಭಾರತದ ಪುರುಷರ ತಂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರತವಾಗಿದೆ. ಮತ್ತೊಂದೆಡೆ, ಹರ್ಮನ್‌ಪ್ರೀತ್ ಕೌರ್ (Harmanpreet Kaur) ನಾಯಕತ್ವದ ಭಾರತ ಮಹಿಳಾ ತಂಡ, ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ 2-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಇದೀಗ ಉಭಯ ತಂಡಗಳ ಮೂರನೇ ಟಿ20 ಪಂದ್ಯ ಜುಲೈ 4 ರಂದು ನಡೆಯಲಿದೆ. ಈ ನಡುವೆ ತಂಡದ ನಾಯಕಿ ನ್ಯಾಟ್ ಸಿವರ್-ಬ್ರಂಟ್ (Nat Sciver-Brunt) ಗಾಯದ ಕಾರಣದಿಂದಾಗಿ ಪಂದ್ಯದಿಂದ ಹೊರಗುಳಿದಿರುವುದರಿಂದ ಆತಿಥೇಯ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಹೊಡೆತ ನೀಡಿದೆ.
ನ್ಯಾಟ್ ಸಿವರ್-ಬ್ರಂಟ್ಗೆ ಗಾಯ
ಕಳೆದ ಕೆಲವು ದಿನಗಳಿಂದ ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವೆ ಟಿ20 ಸರಣಿ ನಡೆಯುತ್ತಿದೆ. ಈ ಸರಣಿಯಲ್ಲಿ, ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡುವ ಮೂಲಕ ಇಂಗ್ಲೆಂಡ್ ತಂಡವನ್ನು ಅಚ್ಚರಿಗೊಳಿಸಿದ್ದು ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದಿತು. ಇಂತಹ ಪರಿಸ್ಥಿತಿಯಲ್ಲಿ, ಆತಿಥೇಯ ಇಂಗ್ಲೆಂಡ್ ಈ ಸರಣಿಯಲ್ಲಿ ಹಿಂದುಳಿದಿದ್ದು, ಸರಣಿಯನ್ನು ಕಳೆದುಕೊಳ್ಳುವ ಅಪಾಯದಲ್ಲಿದೆ. ಇಂತಹ ಸಮಯದಲ್ಲಿ, ನಾಯಕಿ ಸಿವರ್-ಬ್ರಂಟ್ ಗಾಯದ ಕಾರಣದಿಂದಾಗಿ ಈ ಟಿ20 ಸರಣಿಯ ಮೂರನೇ ಪಂದ್ಯದಿಂದ ಹೊರಗುಳಿದಿರುವುದರಿಂದ ಇಂಗ್ಲೆಂಡ್ ತಂಡ ಯೋಚಿಸುವಂತೆ ಮಾಡಿದೆ.
ಜುಲೈ 3, ಗುರುವಾರ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ನಾಯಕಿಯ ಗಾಯದ ಬಗ್ಗೆ ಮಾಹಿತಿ ನೀಡಿದ್ದು, ಎಡ ತೊಡೆಸಂದಿಯಲ್ಲಿ ಗಾಯದಿಂದಾಗಿ, ಜುಲೈ 4 ರಂದು ನಡೆಯಲಿರುವ ಮೂರನೇ ಟಿ20 ಪಂದ್ಯದಲ್ಲಿ ನ್ಯಾಟ್ ಸಿವರ್-ಬ್ರಂಟ್ ಅವರು ಭಾಗವಹಿಸಲು ಸಾಧ್ಯವಾಗುವುದಿಲ್ಲ. ಗಾಯದ ಸ್ಕ್ಯಾನ್ ನಂತರವೇ ಕೊನೆಯ ಎರಡು ಪಂದ್ಯಗಳಲ್ಲಿ ಅವರು ಆಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಂಡಳಿ ತಿಳಿಸಿದೆ. ಸರಣಿಯ ನಾಲ್ಕನೇ ಪಂದ್ಯ ಜುಲೈ 9 ರಂದು ನಡೆಯಲಿದೆ. ಸಿವರ್-ಬ್ರಂಟ್ ಅನುಪಸ್ಥಿತಿಯಲ್ಲಿ, ಅನುಭವಿ ಬ್ಯಾಟರ್ ಟ್ಯಾಮಿ ಬ್ಯೂಮಾಂಟ್ ಅವರಿಗೆ ತಂಡದ ನಾಯಕತ್ವ ವಹಿಸಲಾಗಿದೆ. ಅದೇ ಸಮಯದಲ್ಲಿ, ಮಾಯಾ ಬ್ಯೂಸಿ ಅವರನ್ನು ನ್ಯಾಟ್ ಸಿವರ್-ಬ್ರಂಟ್ ಅವರ ಸ್ಥಾನದಲ್ಲಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಎಲ್ಲರೂ ಮಲಗಿದ ನಂತರ ಆರಂಭವಾಗಲಿದೆ ಭಾರತ- ಇಂಗ್ಲೆಂಡ್ ನಡುವಿನ 2ನೇ ಟಿ20 ಪಂದ್ಯ
ಸರಣಿಯಲ್ಲಿ ಟೀಂ ಇಂಡಿಯಾ 2-0 ಮುನ್ನಡೆ
ಈ ಸರಣಿಯ ವಿಚಾರಕ್ಕೆ ಬಂದರೆ, ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ 97 ರನ್‌ಗಳ ದೊಡ್ಡ ಗೆಲುವು ಸಾಧಿಸುವ ಮೂಲಕ ಮುನ್ನಡೆ ಸಾಧಿಸಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ 210 ರನ್‌ಗಳ ದೊಡ್ಡ ಸ್ಕೋರ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಕೇವಲ 113 ರನ್‌ಗಳಿಗೆ ಆಲೌಟ್ ಆಯಿತು. ಆ ಪಂದ್ಯದಲ್ಲಿ ಸಿವರ್-ಬ್ರಂಟ್ ತಂಡದ ಪರ ಅತ್ಯಧಿಕ 63 ರನ್ ಗಳಿಸಿದ್ದರು. ನಂತರ ಎರಡನೇ ಪಂದ್ಯದಲ್ಲಿ, ಟೀಂ ಇಂಡಿಯಾ 181 ರನ್ ಗಳಿಸಿದರೆ, ಇಂಗ್ಲೆಂಡ್ 157 ರನ್ ಬಾರಿಸಿ ಪಂದ್ಯವನ್ನು 24 ರನ್‌ಗಳಿಂದ ಸೋತಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
