Team India: ಟೀಮ್ ಇಂಡಿಯಾ ಎ ತಂಡದಿಂದ ಪ್ರಮುಖ ಆಟಗಾರ ಔಟ್..!
India A vs New Zealand A: ನ್ಯೂಜಿಲೆಂಡ್ ಎ ತಂಡದ ವಿರುದ್ಧ ಸೆಪ್ಟೆಂಬರ್ 22 ರಿಂದ ಭಾರತ ಎ ತಂಡವು ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಈ ಸರಣಿಯ ಎಲ್ಲಾ ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ.
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೂ ಮುನ್ನ ಟೀಮ್ ಇಂಡಿಯಾದಿಂದ ಮೊಹಮ್ಮದ್ ಶಮಿ ಹೊರಗುಳಿದಿದ್ದಾರೆ. ಕೊರೋನಾ ಸೋಂಕಿಗೆ ಒಳಗಾಗಿರುವ ಶಮಿ ಅವರನ್ನು ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ಉಮೇಶ್ ಯಾದವ್ಗೆ ಸ್ಥಾನ ನೀಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಟೀಮ್ ಇಂಡಿಯಾ ಎ ತಂಡದಿಂದ ಮತ್ತೋರ್ವ ವೇಗಿ ಕೂಡ ಹೊರಬಿದ್ದಿದ್ದಾರೆ.
ನ್ಯೂಜಿಲೆಂಡ್ ಎ ತಂಡದ ವಿರುದ್ಧ ನಡೆಯಲಿರುವ ಸರಣಿಗೆ ಭಾರತ ಎ ತಂಡದಲ್ಲಿ ಸ್ಥಾನ ಪಡೆದಿದ್ದ ನವದೀಪ್ ಸೈನಿ ಕೂಡ ಇದೀಗ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ. ದುಲೀಪ್ ಟ್ರೋಫಿಯಲ್ಲಿ ದಕ್ಷಿಣ ವಲಯ ಮತ್ತು ಉತ್ತರ ವಲಯ ನಡುವಿನ ಪಂದ್ಯದ ವೇಳೆ ಸೈನಿ ತೊಡೆಸಂದು ಗಾಯದ ಸಮಸ್ಯೆಗೆ ಒಳಗಾಗಿದ್ದರು.
ಇದೀಗ ಗಾಯವು ಗಂಭೀರವಾಗಿರುವ ಕಾರಣ ಭಾರತ ಎ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅದರಂತೆ ನ್ಯೂಜಿಲೆಂಡ್ ಎ ತಂಡದ ವಿರುದ್ಧದ ಸರಣಿಗೆ ನವದೀಪ್ ಸೈನಿ ಅಲಭ್ಯರಾಗಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಇನ್ನು ನವದೀಪ್ ಸೈನಿ ಸ್ಥಾನದಲ್ಲಿ ಟೀಮ್ ಇಂಡಿಯಾ ಎ ಪರ ರಿಷಿ ಧವನ್ ಸ್ಥಾನ ಪಡೆದಿದ್ದಾರೆ.
ನ್ಯೂಜಿಲೆಂಡ್ ಎ ತಂಡದ ವಿರುದ್ಧ ಸೆಪ್ಟೆಂಬರ್ 22 ರಿಂದ ಭಾರತ ಎ ತಂಡವು ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಈ ಸರಣಿಯ ಎಲ್ಲಾ ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ.
ಭಾರತ ಎ ತಂಡ ಹೀಗಿದೆ: ಸಂಜು ಸ್ಯಾಮ್ಸನ್ (ನಾಯಕ), ಪೃಥ್ವಿ ಶಾ, ಅಭಿಮನ್ಯು ಈಶ್ವರನ್, ರುತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಕೆಎಸ್ ಭರತ್ (ವಿಕೆಟ್ ಕೀಪರ್), ಕುಲದೀಪ್ ಯಾದವ್, ಶಹಬಾಜ್ ಅಹ್ಮದ್, ರಾಹುಲ್ ಚಾಹರ್, ತಿಲಕ್ ವರ್ಮಾ, ಕುಲದೀಪ್ ಸೇನ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ರಿಷಿ ಧವನ್ ಮತ್ತು ರಾಜ್ ಬಾವಾ.