AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ:ಬುಮ್ರಾ, ಅಕ್ಷರ್ ಔಟ್..! ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ

India vs New Zealand T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ರಾಯ್‌ಪುರದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ, ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. 2026ರ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಪಂದ್ಯ ಮಹತ್ವದ್ದಾಗಿದೆ. ಎರಡೂ ತಂಡಗಳಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಭಾರತ ಗೆಲುವಿನ ಓಟ ಮುಂದುವರಿಸಲು ನೋಡಿದರೆ, ನ್ಯೂಜಿಲೆಂಡ್ ಸರಣಿಯಲ್ಲಿ ಪುನರಾಗಮನ ಮಾಡಲು ಯತ್ನಿಸುತ್ತಿದೆ.

IND vs NZ:ಬುಮ್ರಾ, ಅಕ್ಷರ್ ಔಟ್..! ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ
Ind Vs Sa
ಪೃಥ್ವಿಶಂಕರ
|

Updated on:Jan 23, 2026 | 6:44 PM

Share

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪ್ರಸ್ತುತ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಮೊದಲ ಟಿ20ಪಂದ್ಯವನ್ನು 41 ರನ್‌ಗಳಿಂದ ಗೆದ್ದುಕೊಂಡಿತು. ಆದ್ದರಿಂದ, ಟೀಂ ಇಂಡಿಯಾ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ. ಇತ್ತ ನ್ಯೂಜಿಲೆಂಡ್ ಸರಣಿಯಲ್ಲಿ ಪುನರಾಗಮನ ಮಾಡಲು ನೋಡುತ್ತಿದೆ. 2026 ರ ಟಿ20 ವಿಶ್ವಕಪ್ ಅನ್ನು ಪರಿಗಣಿಸಿ ಈ ಸರಣಿ ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ.

ಟಾಸ್ ಗೆದ್ದ ಸೂರ್ಯಕುಮಾರ್

ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವ ಕಾರಣ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿರುವುದಾಗಿ ಸೂರ್ಯ ಹೇಳಿದರು. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಅಕ್ಷರ್ ಪಟೇಲ್ ಈ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ. ಇತ್ತ ನ್ಯೂಜಿಲೆಂಡ್ ತಂಡದಲ್ಲೂ 3 ಬದಲಾವಣೆಗಳಾಗಿವೆ.

ಹೆಡ್ ಟು ಹೆಡ್ ದಾಖಲೆ

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಲ್ಲಿಯವರೆಗೆ ಒಟ್ಟು 26 ಟಿ20 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ, ಟೀಂ ಇಂಡಿಯಾ 15 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 10 ಪಂದ್ಯಗಳನ್ನು ಗೆದ್ದಿದೆ, ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಇನ್ನು ಭಾರತದಲ್ಲಿ ಉಭಯ ತಂಡಗಳ ನಡುವೆ 12 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ ಎಂಟು ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಮತ್ತೊಂದೆಡೆ, ಕಿವೀಸ್ ಭಾರತದಲ್ಲಿ ಕೇವಲ ನಾಲ್ಕು ಟಿ20 ಪಂದ್ಯಗಳನ್ನು ಗೆದ್ದಿದೆ.

ಉಭಯ ತಂಡಗಳು

ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.

ನ್ಯೂಜಿಲೆಂಡ್: ಡೆವೊನ್ ಕಾನ್ವೆ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜಕಾರಿ ಫಾಕ್ಸ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಜಾಕೋಬ್ ಡಫಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Fri, 23 January 26

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?