
ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪ್ರಸ್ತುತ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಮೊದಲ ಟಿ20ಪಂದ್ಯವನ್ನು 41 ರನ್‌ಗಳಿಂದ ಗೆದ್ದುಕೊಂಡಿತು. ಆದ್ದರಿಂದ, ಟೀಂ ಇಂಡಿಯಾ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ. ಇತ್ತ ನ್ಯೂಜಿಲೆಂಡ್ ಸರಣಿಯಲ್ಲಿ ಪುನರಾಗಮನ ಮಾಡಲು ನೋಡುತ್ತಿದೆ. 2026 ರ ಟಿ20 ವಿಶ್ವಕಪ್ ಅನ್ನು ಪರಿಗಣಿಸಿ ಈ ಸರಣಿ ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ.
ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವ ಕಾರಣ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿರುವುದಾಗಿ ಸೂರ್ಯ ಹೇಳಿದರು. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಅಕ್ಷರ್ ಪಟೇಲ್ ಈ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ. ಇತ್ತ ನ್ಯೂಜಿಲೆಂಡ್ ತಂಡದಲ್ಲೂ 3 ಬದಲಾವಣೆಗಳಾಗಿವೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಲ್ಲಿಯವರೆಗೆ ಒಟ್ಟು 26 ಟಿ20 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ, ಟೀಂ ಇಂಡಿಯಾ 15 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 10 ಪಂದ್ಯಗಳನ್ನು ಗೆದ್ದಿದೆ, ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಇನ್ನು ಭಾರತದಲ್ಲಿ ಉಭಯ ತಂಡಗಳ ನಡುವೆ 12 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ ಎಂಟು ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಮತ್ತೊಂದೆಡೆ, ಕಿವೀಸ್ ಭಾರತದಲ್ಲಿ ಕೇವಲ ನಾಲ್ಕು ಟಿ20 ಪಂದ್ಯಗಳನ್ನು ಗೆದ್ದಿದೆ.
🚨 Toss 🚨#TeamIndia have won the toss and elected to bowl first in the 2⃣nd T20I.
Updates ▶️ https://t.co/8G8p1tq1RC#INDvNZ | @IDFCFIRSTBank pic.twitter.com/AcBcPlcKFZ
— BCCI (@BCCI) January 23, 2026
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.
ನ್ಯೂಜಿಲೆಂಡ್: ಡೆವೊನ್ ಕಾನ್ವೆ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜಕಾರಿ ಫಾಕ್ಸ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಜಾಕೋಬ್ ಡಫಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:41 pm, Fri, 23 January 26