AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: 6 ಪಂದ್ಯಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಭಾರತ; ವೇಳಾಪಟ್ಟಿ ಪ್ರಕಟ

India vs Bangladesh Cricket Tour Schedule Released: ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಮುಸ್ತಾಫಿಜುರ್ ಐಪಿಎಲ್ ಭಾಗವಹಿಸುವಿಕೆಯ ವಿವಾದದ ನಡುವೆಯೂ, ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶ ಪ್ರವಾಸಕ್ಕೆ ಸಜ್ಜಾಗಿದೆ.ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಏಕದಿನ ಮತ್ತು ಟಿ20 ಸರಣಿಗಳ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರವಾಸವು ಆರು ಪಂದ್ಯಗಳನ್ನು ಒಳಗೊಂಡಿರಲಿದೆ.

IND vs BAN: 6 ಪಂದ್ಯಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಭಾರತ; ವೇಳಾಪಟ್ಟಿ ಪ್ರಕಟ
Ind Vs Ban
ಪೃಥ್ವಿಶಂಕರ
|

Updated on:Jan 02, 2026 | 4:10 PM

Share

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಾಫಿಜುರ್ ರೆಹಮಾನ್ (Mustafizur Rahman ) ಅವರನ್ನು ಐಪಿಎಲ್‌ನಲ್ಲಿ (IPL) ಆಡಲು ಅನುಮತಿ ನೀಡಿರುವುದಕ್ಕೆ ಭಾರತದಲ್ಲಿ ಅಸಾಮಾಧಾನ ಸ್ಫೋಟಗೊಂಡಿದೆ. ಬಾಂಗ್ಲಾ ಆಟಗಾರನನ್ನು 9 ಕೋಟಿ ರೂ,ಗೆ ಖರೀದಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೂ ಜನ ಛೀಮಾರಿ ಹಾಕುತ್ತಿದ್ದಾರೆ. ಇದೆಲ್ಲದರ ನಡುವೆ ಬಿಸಿಸಿಐ (BCCI) ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಅದೆನೆಂದರೆ, ಏಕದಿನ ಹಾಗೂ ಟಿ20 ಸರಣಿಗಾಗಿ ಟೀಂ ಇಂಡಿಯಾ, ಬಾಂಗ್ಲಾದೇಶ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಇಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದೆ.

ವಾಸ್ತವವಾಗಿ ಬಾಂಗ್ಲಾದೇಶದಲ್ಲಿನ ರಾಜಕೀಯ ಅಸ್ಥಿರತೆ ಮತ್ತು ಹಿಂಸಾಚಾರದಿಂದಾಗಿ ಬಿಸಿಸಿಐ, ಈ ಪ್ರವಾಸವನ್ನು ಮುಂದೂಡಿತ್ತು. ಇದೀಗ ಈ ಪ್ರವಾಸದ ಬಗ್ಗೆ ಖಚಿತ ಮಾಹಿತಿ ನೀಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಒಟ್ಟು 6 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಭಾರತದ ಬಾಂಗ್ಲಾದೇಶ ಪ್ರವಾಸ ಏಕದಿನ ಸರಣಿಯೊಂದಿಗೆ ಆರಂಭವಾಗಲಿದೆ. ಹಾಗೆಯೇ ಟಿ20 ಸರಣಿಯೊಂದಿಗೆ ಅಂತ್ಯವಾಗಲಿದೆ.

ಪ್ರವಾಸದ ವಿವರ ಹೀಗಿದೆ

ಆದಾಗ್ಯೂ ಟೀಂ ಇಂಡಿಯಾದ ಈ ಪ್ರವಾಸಕ್ಕೆ ಇನ್ನು ಸಾಕಷ್ಟು ಸಮಯ ಉಳಿದಿದೆ. ಉಭಯ ತಂಡಗಳು ಸೆಪ್ಟೆಂಬರ್ ತಿಂಗಳಲ್ಲಿ ಮುಖಾಮುಖಿಯಾಗಲಿವೆ. ವೇಳಾಪಟ್ಟಿಯ ಪ್ರಕಾರ ಎರಡು ತಂಡಗಳ ನಡುವೆ ಮೊದಲು ಏಕದಿನ ಸರಣಿ ನಡೆಯಲಿದ್ದು, ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 1 ರಂದು ನಡೆಯಲಿದೆ. ಆ ಬಳಿಕ ಎರಡನೇ ಪಂದ್ಯ ಸೆಪ್ಟೆಂಬರ್ 3 ಹಾಗೂ ಮೂರನೇ ಪಂದ್ಯ ಸೆಪ್ಟೆಂಬರ್ 6 ರಂದು ನಡೆಯಲಿದೆ. ಏಕದಿನ ಸರಣಿಯ ಬಳಿಕ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಪಂದ್ಯಗಳು ಸೆಪ್ಟೆಂಬರ್ 9, 12 ಮತ್ತು 13 ರಂದು ನಡೆಯಲಿವೆ.

ಸರಣಿ ಸೋತಿದ್ದ ಟೀಂ ಇಂಡಿಯಾ

ಭಾರತ ತಂಡವು ಕೊನೆಯ ಬಾರಿಗೆ 2022-23 ರಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಿತ್ತು, ಅಲ್ಲಿ ಏಕದಿನ ಸರಣಿಯನ್ನು ಸೋತಿತ್ತು. ಬಾಂಗ್ಲಾದೇಶ 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿತು. ಆದಾಗ್ಯೂ, ಬಾಂಗ್ಲಾದೇಶ ನೆಲದಲ್ಲಿ ಭಾರತ ಉತ್ತಮ ದಾಖಲೆಯನ್ನು ಹೊಂದಿದೆ. ಬಾಂಗ್ಲಾದೇಶದಲ್ಲಿ ಭಾರತ ಆಡಿರುವ 25 ಪಂದ್ಯಗಳಲ್ಲಿ 18 ರಲ್ಲಿ ಗೆದ್ದಿದ್ದು, 6 ರಲ್ಲಿ ಸೋತಿದೆ ಮತ್ತು ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Fri, 2 January 26

ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ