
ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಾಫಿಜುರ್ ರೆಹಮಾನ್ (Mustafizur Rahman ) ಅವರನ್ನು ಐಪಿಎಲ್‌ನಲ್ಲಿ (IPL) ಆಡಲು ಅನುಮತಿ ನೀಡಿರುವುದಕ್ಕೆ ಭಾರತದಲ್ಲಿ ಅಸಾಮಾಧಾನ ಸ್ಫೋಟಗೊಂಡಿದೆ. ಬಾಂಗ್ಲಾ ಆಟಗಾರನನ್ನು 9 ಕೋಟಿ ರೂ,ಗೆ ಖರೀದಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೂ ಜನ ಛೀಮಾರಿ ಹಾಕುತ್ತಿದ್ದಾರೆ. ಇದೆಲ್ಲದರ ನಡುವೆ ಬಿಸಿಸಿಐ (BCCI) ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಅದೆನೆಂದರೆ, ಏಕದಿನ ಹಾಗೂ ಟಿ20 ಸರಣಿಗಾಗಿ ಟೀಂ ಇಂಡಿಯಾ, ಬಾಂಗ್ಲಾದೇಶ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಇಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದೆ.
ವಾಸ್ತವವಾಗಿ ಬಾಂಗ್ಲಾದೇಶದಲ್ಲಿನ ರಾಜಕೀಯ ಅಸ್ಥಿರತೆ ಮತ್ತು ಹಿಂಸಾಚಾರದಿಂದಾಗಿ ಬಿಸಿಸಿಐ, ಈ ಪ್ರವಾಸವನ್ನು ಮುಂದೂಡಿತ್ತು. ಇದೀಗ ಈ ಪ್ರವಾಸದ ಬಗ್ಗೆ ಖಚಿತ ಮಾಹಿತಿ ನೀಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಒಟ್ಟು 6 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಭಾರತದ ಬಾಂಗ್ಲಾದೇಶ ಪ್ರವಾಸ ಏಕದಿನ ಸರಣಿಯೊಂದಿಗೆ ಆರಂಭವಾಗಲಿದೆ. ಹಾಗೆಯೇ ಟಿ20 ಸರಣಿಯೊಂದಿಗೆ ಅಂತ್ಯವಾಗಲಿದೆ.
The Bangladesh Cricket Board has announced the itinerary for the white-ball series against India
ODIs: September 1, 3, 6
T20Is: September 9, 12, 13 #2026CricketCalendar pic.twitter.com/CIDvTZo5eC— Cricbuzz (@cricbuzz) January 2, 2026
ಆದಾಗ್ಯೂ ಟೀಂ ಇಂಡಿಯಾದ ಈ ಪ್ರವಾಸಕ್ಕೆ ಇನ್ನು ಸಾಕಷ್ಟು ಸಮಯ ಉಳಿದಿದೆ. ಉಭಯ ತಂಡಗಳು ಸೆಪ್ಟೆಂಬರ್ ತಿಂಗಳಲ್ಲಿ ಮುಖಾಮುಖಿಯಾಗಲಿವೆ. ವೇಳಾಪಟ್ಟಿಯ ಪ್ರಕಾರ ಎರಡು ತಂಡಗಳ ನಡುವೆ ಮೊದಲು ಏಕದಿನ ಸರಣಿ ನಡೆಯಲಿದ್ದು, ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 1 ರಂದು ನಡೆಯಲಿದೆ. ಆ ಬಳಿಕ ಎರಡನೇ ಪಂದ್ಯ ಸೆಪ್ಟೆಂಬರ್ 3 ಹಾಗೂ ಮೂರನೇ ಪಂದ್ಯ ಸೆಪ್ಟೆಂಬರ್ 6 ರಂದು ನಡೆಯಲಿದೆ. ಏಕದಿನ ಸರಣಿಯ ಬಳಿಕ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಪಂದ್ಯಗಳು ಸೆಪ್ಟೆಂಬರ್ 9, 12 ಮತ್ತು 13 ರಂದು ನಡೆಯಲಿವೆ.
ಭಾರತ ತಂಡವು ಕೊನೆಯ ಬಾರಿಗೆ 2022-23 ರಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಿತ್ತು, ಅಲ್ಲಿ ಏಕದಿನ ಸರಣಿಯನ್ನು ಸೋತಿತ್ತು. ಬಾಂಗ್ಲಾದೇಶ 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿತು. ಆದಾಗ್ಯೂ, ಬಾಂಗ್ಲಾದೇಶ ನೆಲದಲ್ಲಿ ಭಾರತ ಉತ್ತಮ ದಾಖಲೆಯನ್ನು ಹೊಂದಿದೆ. ಬಾಂಗ್ಲಾದೇಶದಲ್ಲಿ ಭಾರತ ಆಡಿರುವ 25 ಪಂದ್ಯಗಳಲ್ಲಿ 18 ರಲ್ಲಿ ಗೆದ್ದಿದ್ದು, 6 ರಲ್ಲಿ ಸೋತಿದೆ ಮತ್ತು ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:03 pm, Fri, 2 January 26