AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಸತತ 19ನೇ ಟಿ20 ಸರಣಿ ಗೆದ್ದು 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ

India vs South Africa T20: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಅಂತಿಮ T20 ಪಂದ್ಯದಲ್ಲಿ ಭಾರತ 30 ರನ್‌ಗಳಿಂದ ಭರ್ಜರಿ ಜಯಗಳಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ T20 ಸರಣಿಯನ್ನು ಟೀಂ ಇಂಡಿಯಾ 3-1 ಅಂತರದಿಂದ ವಶಪಡಿಸಿಕೊಂಡಿತು. ಹಾರ್ದಿಕ್ ಮತ್ತು ತಿಲಕ್ ಅವರ ಸ್ಫೋಟಕ ಅರ್ಧಶತಕಗಳು ಭಾರತ 231 ರನ್ ಗಳಿಸಲು ನೆರವಾಗಿತ್ತು. ದಕ್ಷಿಣ ಆಫ್ರಿಕಾ 201 ರನ್ ಗಳಿಸಿ ಸೋಲೊಪ್ಪಿಕೊಂಡಿತು.

IND vs SA: ಸತತ 19ನೇ ಟಿ20 ಸರಣಿ ಗೆದ್ದು 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ
Ind Vs Sa
ಪೃಥ್ವಿಶಂಕರ
|

Updated on:Dec 19, 2025 | 11:37 PM

Share

ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಅಂತಿಮ ಟಿ20 ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ 30 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಈ ಐದು ಪಂದ್ಯಗಳ ಟಿ20 ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಹಾರ್ದಿಕ್ (Hardik Pandya) ಹಾಗೂ ತಿಲಕ್ (Tilak Varma) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 231 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್​ಗಳ ಅಂತ್ಯಕ್ಕೆ ರನ್ 201 ಕಲೆಹಾಕಲಷ್ಟೇ ಶಕ್ತವಾಯಿತು. ಇದರೊಂದಿಗೆ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಭಾರತ ಪ್ರವಾಸವನ್ನು ಆರಂಭಿಸಿದ್ದ ಆಫ್ರಿಕಾ ತಂಡ, ಟಿ20 ಸರಣಿ ಸೋಲಿನೊಂದಿಗೆ ತನ್ನ ಪ್ರವಾಸವನ್ನು ಅಂತ್ಯಗೊಳಿಸಿದೆ. ಇದು ಟಿ20 ಮಾದರಿಯಲ್ಲಿ ಟೀಂ ಇಂಡಿಯಾದ ಸತತ 19ನೇ ಸರಣಿ ಗೆಲುವಾಗಿದ್ದು, ಸೂರ್ಯಕುಮಾರ್ ಪಡೆ ಈ ಮಾದರಿಯಲ್ಲಿ ತನ್ನ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಭೀತುಪಡಿಸಿದೆ.

ಭಾರತಕ್ಕೆ ಹಾರ್ದಿಕ್- ತಿಲಕ್ ಆಸರೆ

ಸರಣಿಯ ಕೊನೆಯ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದ ಸಂಜು ಸ್ಯಾಮ್ಸನ್ (37 ರನ್) ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡರು. ಮಾತ್ರವಲ್ಲದೆ ಆರಂಭಿಕ ಅಭಿಷೇಕ್ ಶರ್ಮಾ (34) ಅವರೊಂದಿಗೆ ಉತ್ತಮ ಆರಂಭವನ್ನು ನೀಡಿದರು. ನಾಯಕ ಸೂರ್ಯಕುಮಾರ್ ಯಾದವ್ (5) ಮತ್ತೆ ವಿಫಲರಾದರು. ಆದರೆ ನಂತರ ಜೊತೆಯಾದ ತಿಲಕ್ ವರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಬಿರುಗಾಳಿ ಇನ್ನಿಂಗ್ಸ್ ಆಡಿ ಒಟ್ಟಾಗಿ ನಾಲ್ಕನೇ ವಿಕೆಟ್‌ಗೆ 105 ರನ್‌ಗಳ ಭರ್ಜರಿ ಪಾಲುದಾರಿಕೆಯನ್ನು ನೀಡಿದರು. ಹಾರ್ದಿಕ್ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಗಳಿಸಿದರೆ, ತಿಲಕ್ ಸರಣಿಯ ತಮ್ಮ ಎರಡನೇ ಅರ್ಧಶತಕವನ್ನು ಪೂರೈಸಿದರು. ಅಂತಿಮವಾಗಿ ಹಾರ್ದಿಕ್ 25 ಎಸೆತಗಳಲ್ಲಿ 63 ರನ್ ಬಾರಿಸಿದರೆ, ತಿಲಕ್ ವರ್ಮಾ 42 ಎಸೆತಗಳಲ್ಲಿ 73 ರನ್ ಸಿಡಿಸಿದರು.

ಆಫ್ರಿಕಾಗೆ ಸ್ಫೋಟಕ ಆರಂಭ

ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು ಅಷ್ಟೇ ಸ್ಫೋಟಕ ಆರಂಭ ಪಡೆದುಕೊಂಡಿತು. ವಿಶೇಷವಾಗಿ ಕ್ವಿಂಟನ್ ಡಿ ಕಾಕ್ ಮತ್ತೊಂದು ಅದ್ಭುತ ಅರ್ಧಶತಕ ಸಿಡಿಸಿ 10 ನೇ ಓವರ್‌ನಲ್ಲಿ ತಂಡವನ್ನು 100 ಗಡಿ ದಾಟಿಸಿದರು. ಡಿ ಕಾಕ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯುತ್ತಾರೆ ಎಂದು ತೋರುತ್ತಿತ್ತು. ಆದರೆ ಈ ವೇಳೆ ದಾಳಿಗಿಳಿದ ಜಸ್ಪ್ರೀತ್ ಬುಮ್ರಾ, ಡಿ ಕಾಕ್​ರನ್ನು ಪೆವಿಲಿಯನ್​ಗಟ್ಟಿದರು. ನಂತರ ಹಾರ್ದಿಕ್, ಸ್ಫೋಟಕ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ಅವರನ್ನು ಔಟ್ ಮಾಡುವ ಮೂಲಕ ಆಫ್ರಿಕಾ ವೇಗಕ್ಕೆ ಕಡಿವಾಣ ಹಾಕಿದರು.

IND vs SA: ಯುವಿ ದಾಖಲೆ ಜಸ್ಟ್ ಮಿಸ್; ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ

4 ವಿಕೆಟ್ ಕಬಳಿಸಿದ ವರುಣ್

ನಂತರ ವರುಣ್ ಚಕ್ರವರ್ತಿ 13 ನೇ ಓವರ್‌ನಲ್ಲಿ ಸತತ ಎಸೆತಗಳಲ್ಲಿ ಐಡೆನ್ ಮಾರ್ಕ್ರಾಮ್ ಮತ್ತು ಡೊನೊವನ್ ಫೆರೇರಾ ಅವರನ್ನು ಔಟ್ ಮಾಡುವ ಮೂಲಕ ಭಾರತದ ಗೆಲುವನ್ನು ಖಚಿತಪಡಿಸಿದರು. ಅಲ್ಲಿಂದ ದಕ್ಷಿಣ ಆಫ್ರಿಕಾದ ವಿಕೆಟ್‌ಗಳು ಪತನವಾಗುತ್ತಲೇ ಸಾಗಿದವು. ಅಂತಿಮವಾಗಿ, ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ ಕೇವಲ 201 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ವರುಣ್ ಚಕ್ರವರ್ತಿ 4 ವಿಕೆಟ್‌ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 pm, Fri, 19 December 25

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ