AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಮಳೆಯಿಂದ 3 ಪಂದ್ಯಗಳು ರದ್ದು; ಭಾರತ- ಕಿವೀಸ್ ಪಂದ್ಯಕ್ಕೂ ಇದೆಯಾ ಮಳೆಯ ಆತಂಕ?

Champions Trophy 2025: ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮಾರ್ಚ್ 2 ರಂದು ದುಬೈನಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾಮುಖಿಯಾಗಲಿವೆ. ದುಬೈ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಸವಾಲಾಗಿದ್ದು, ಆರಂಭದಲ್ಲಿ ವೇಗದ ಬೌಲರ್‌ಗಳು, ನಂತರ ಸ್ಪಿನ್ನರ್‌ಗಳು ಮೇಲುಗೈ ಸಾಧಿಸಬಹುದು. ಅದರಲ್ಲೂ ಗುರಿ ಬೆನ್ನಟ್ಟುವ ತಂಡಕ್ಕೆ ಬ್ಯಾಟಿಂಗ್ ಕಷ್ಟಕರವಾಗಲಿದೆ. ಹವಾಮಾನವು ಅನುಕೂಲಕರವಾಗಿದ್ದು, ಮಳೆಯಾಗುವ ಸಾಧ್ಯತೆಗಳಿಲ್ಲ.

IND vs NZ: ಮಳೆಯಿಂದ 3 ಪಂದ್ಯಗಳು ರದ್ದು; ಭಾರತ- ಕಿವೀಸ್ ಪಂದ್ಯಕ್ಕೂ ಇದೆಯಾ ಮಳೆಯ ಆತಂಕ?
Dubai Weather
ಪೃಥ್ವಿಶಂಕರ
|

Updated on:Mar 02, 2025 | 2:09 PM

Share

ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಮಾರ್ಚ್ 2 ರಂದು ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಲೀಗ್ ಹಂತದಲ್ಲಿ ಉಭಯ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದು, ಆಡಿದ ಎರಡು ಪಂದ್ಯಗಳನ್ನು ಗೆದ್ದುಕೊಂಡಿವೆ. ಹೀಗಾಗಿ ನಾಳಿನ ಪಂದ್ಯವನ್ನು ಗೆಲ್ಲುವ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ದುಬೈ ಪಿಚ್ ಹೇಗಿರುತ್ತದೆ? ಪಂದ್ಯಕ್ಕೆ ಮಳೆ ಅಡ್ಡಿಪಡಿಸುತ್ತಾ ಎಂಬ ವಿವರವನ್ನು ನಾವು ನಿಮಗೆ ಹೇಳಲಿದ್ದೇವೆ.

ಪಿಚ್ ಯಾರಿಗೆ ಸಹಕಾರಿ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ ದುಬೈನಲ್ಲಿ ನಡೆಯಲಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದ ಪಿಚ್​ನಲ್ಲಿ ಈಗಾಗಲೇ ನಡೆದಿರುವ ಎರಡು ಪಂದ್ಯಗಳನ್ನು ಗಮನಿಸಿದರೆ, ಇಲ್ಲಿ ಬ್ಯಾಟರ್​ಗಳಿಗೆ ಕಠಿಣ ಸವಾಲು ಎದುರಾಗಲಿದೆ. ಆರಂಭದಲ್ಲಿ ವೇಗದ ಬೌಲರ್​ಗಳು ಸಹಾಯ ಪಡೆದರೆ, ಪಂದ್ಯ ಕಳೆದಂತೆ ಸ್ಪಿನ್ನರ್‌ಗಳು ಮೇಲುಗೈ ಸಾಧಿಸಬಹುದು. ಅಲ್ಲದೆ ಗುರಿಯನ್ನು ಬೆನ್ನಟ್ಟುವ ತಂಡಕ್ಕೆ ಕೊಂಚ ಕಷ್ಟಕರವಾಗಬಹುದು.

ಹವಾಮಾನ ವರದಿ

ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಇದುವರೆಗೆ 3 ಲೀಗ್ ಪಂದ್ಯಗಳು ಮಳೆಯಿಂದ ರದ್ದಾಗಿವೆ. ಮಳೆಯಿಂದಾಗಿ ಸೆಮಿಫೈನಲ್ ಲೆಕ್ಕಾಚಾರವೇ ಬುಡಮೇಲಾಗಿದೆ. ಆದರೆ ಈ ಪಂದ್ಯಗಳು ನಡೆದಿರುವ ಪಾಕಿಸ್ತಾನದಲ್ಲಿ. ಭಾರತದ ಪಂದ್ಯಗಳು ದುಬೈನಲ್ಲಿ ನಡೆಯುತ್ತಿರುವುದರಿಂದ ಮಳೆಬೀಳುವ ಸಾಧ್ಯತೆಗಳಿಲ್ಲ. ಹೀಗಾಗಿ ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ಪಂದ್ಯವನ್ನು ಆನಂದಿಸಬಹುದಾಗಿದೆ.

ದುಬೈ ಏಕದಿನ ಅಂಕಿಅಂಶಗಳು

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಒಟ್ಟು 8 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 7 ಪಂದ್ಯಗಳನ್ನು ಗೆದ್ದರೆ, ಒಂದು ಪಂದ್ಯ ಟೈ ಆಗಿದೆ. ದುಬೈ ಕ್ರೀಡಾಂಗಣದಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಇತ್ತ ನ್ಯೂಜಿಲೆಂಡ್ ತಂಡ ಈ ಮೈದಾನದಲ್ಲಿ ಎರಡು ಪಂದ್ಯಗಳನ್ನು ಆಡಿದ್ದು, ಒಂದರಲ್ಲಿ ಸೋಲನುಭವಿಸಿದ್ದರೆ, ಇನ್ನೊಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿತು.

ಭಾರತ ಮತ್ತು ನ್ಯೂಜಿಲೆಂಡ್ ಹೆಡ್-ಟು-ಹೆಡ್ ದಾಖಲೆ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಹೆಡ್-ಟು-ಹೆಡ್ ದಾಖಲೆಯ ಬಗ್ಗೆ ಹೇಳುವುದಾದರೆ.. ಉಭಯ ತಂಡಗಳು 1975 ರಿಂದ 118 ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಟೀಂ ಇಂಡಿಯಾ 60 ಪಂದ್ಯಗಳನ್ನು ಗೆದ್ದಿದ್ದರೆ, 50 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಒಂದು ಪಂದ್ಯ ಟೈ ಆಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 pm, Sat, 1 March 25

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು