IND vs SA: ನಾಳೆಯೇ ನಿರ್ಣಾಯಕ ಪಂದ್ಯ; ಭಾರತ ಗೆದ್ದರೆ ಸರಣಿ ಕೈವಶ; ಪಂದ್ಯ ಎಷ್ಟು ಗಂಟೆಗೆ ಆರಂಭ?

India vs South Africa 4th T20 Live streaming: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ2೦ ಸರಣಿಯಲ್ಲಿ ಭಾರತ 2-1 ಮುನ್ನಡೆಯಲ್ಲಿದೆ. ನವೆಂಬರ್ 13 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುವ ನಾಲ್ಕನೇ ಮತ್ತು ಅಂತಿಮ ಪಂದ್ಯವು ಸರಣಿಯ ಫಲಿತಾಂಶ ನಿರ್ಧರಿಸಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾ ಮತ್ತು ಸ್ಪೋರ್ಟ್ಸ್ 18 ಚಾನೆಲ್‌ಗಳಲ್ಲಿ ಲಭ್ಯವಿರುತ್ತದೆ. ಭಾರತ ತಂಡ ಗೆದ್ದರೆ ಸರಣಿ ಗೆಲ್ಲುತ್ತದೆ, ದಕ್ಷಿಣ ಆಫ್ರಿಕಾ ಗೆದ್ದರೆ ಸರಣಿ ಸಮಬಲವಾಗುತ್ತದೆ.

IND vs SA: ನಾಳೆಯೇ ನಿರ್ಣಾಯಕ ಪಂದ್ಯ; ಭಾರತ ಗೆದ್ದರೆ ಸರಣಿ ಕೈವಶ; ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ- ದಕ್ಷಿಣ ಆಫ್ರಿಕಾ
Follow us
ಪೃಥ್ವಿಶಂಕರ
|

Updated on:Nov 14, 2024 | 7:13 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ 4 ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಮೂರು ಪಂದ್ಯಗಳು ಈಗಾಗಲೇ ಮುಗಿದಿದ್ದು, ಎರಡು ಪಂದ್ಯಗಳನ್ನು ಗೆದ್ದಿರುವ ಪ್ರವಾಸಿ ಭಾರತ ತಂಡ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯವನ್ನು ಕೈವಶ ಮಾಡಿಕೊಳ್ಳುವುದರ ಮೇಲೆ ಕಣ್ಣಿಟ್ಟಿದ್ದಾರೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾದ ನಾಯಕ ಏಡೆನ್ ಮಾರ್ಕ್ರಾಮ್ ಮುಂದಿನ ಪಂದ್ಯವನ್ನು ಗೆದ್ದು ಸರಣಿಯನ್ನು 2-2 ರ ಸಮಬಲದೊದಿಗೆ ಕೊನೆಗೊಳಿಸಲು ಪ್ರಯತ್ನಿಸಲಿದ್ದಾರೆ.

ಉಭಯ ತಂಡಗಳ ನಡುವೆ ನಡೆದ ಮೊದಲ ಪಂದ್ಯವನ್ನು ಭಾರತ ತಂಡ 61 ರನ್‌ಗಳಿಂದ ಗೆದ್ದುಕೊಂಡಿತ್ತು. ಇದಾದ ಬಳಿಕ ಎರಡನೇ ಟಿ20ಯಲ್ಲಿ ದಕ್ಷಿಣ ಆಫ್ರಿಕಾ 3 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತು. ಬುಧವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪುನರಾಗಮನ ಮಾಡಿ, ತಿಲಕ್ ವರ್ಮಾ ಅವರ ಶತಕದ ನೆರವಿನಿಂದ 11 ರನ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಹೀಗಿರುವಾಗ ಸರಣಿಯ ನಾಲ್ಕನೇ ಪಂದ್ಯವನ್ನು ಗೆದ್ದರೆ ಭಾರತಕ್ಕೆ ಸರಣಿ ಸಿಗಲಿದೆ. ಹೀಗಾಗಿ ಕೊನೆಯ ಪಂದ್ಯದ ಮೇಲೆ ಎಲ್ಲರ ಗಮನ ನೆಟ್ಟಿದ್ದು, ಈ ಪಂದ್ಯದ ಬಗ್ಗೆಗಿನ ಪೂರ್ಣ ವಿವರ ಹೀಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಾಲ್ಕನೇ ಟಿ20 ಪಂದ್ಯ ಯಾವಾಗ ನಡೆಯಲ್ಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ನವೆಂಬರ್ 13 ರಂದು ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ-ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಭಾರತೀಯ ಕಾಲಮಾನ ರಾತ್ರಿ 8:30ಕ್ಕೆ ಆರಂಭವಾಗಲಿದೆ. ರಾತ್ರಿ 8 ಗಂಟೆಗೆ ಟಾಸ್ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಟಿವಿ ಮತ್ತು ಮೊಬೈಲ್‌ನಲ್ಲಿ ನೋಡುವುದು ಹೇಗೆ?

ಭಾರತ ತಂಡ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಸ್ಪೋರ್ಟ್ಸ್ 18 ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಇದರ ಲೈವ್ ಸ್ಟ್ರೀಮಿಂಗ್ ಅನ್ನು ಜಿಯೋ ಸಿನಿಮಾದಲ್ಲಿ ಉಚಿತವಾಗಿ ನೋಡಬಹುದು.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವೈಶಾಕ್ ವಿಜಯಕುಮಾರ್, ಅವೇಶ್ ಖಾನ್, ಯಶ್ ದಯಾಳ್.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಓಟ್ನಿಯಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಪ್ಯಾಟ್ರಿಕ್ ಕ್ರುಗರ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಮಿಹಲಾಲಿ ಮಾಪೊಂಗ್ವಾನಾ, ನ್ಕಾಬಾ ಪೀಟರ್, ಆಂಡಿಲ್ ಸಿಮೆಲಾಬ್ಸ್, ಆಂಡಿಲೆ ರಿಕೆಲಾಬ್ಲಾಮ್ .

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Thu, 14 November 24

ತಮ್ಮದೇ ಪಕ್ಷದ ಮಂತ್ರಿಯನ್ನು ಮಾತಾಡಲುಮ ಬಿಡದ ನರೇಂದ್ರ ಸ್ವಾಮಿ
ತಮ್ಮದೇ ಪಕ್ಷದ ಮಂತ್ರಿಯನ್ನು ಮಾತಾಡಲುಮ ಬಿಡದ ನರೇಂದ್ರ ಸ್ವಾಮಿ
ಅಲ್ಲು ಅರ್ಜುನ್ ಬಂಧಿಸಿ ಕರೆದೊಯ್ದ ಪೊಲೀಸರು: ವಿಡಿಯೋ ಇಲ್ಲಿದೆ
ಅಲ್ಲು ಅರ್ಜುನ್ ಬಂಧಿಸಿ ಕರೆದೊಯ್ದ ಪೊಲೀಸರು: ವಿಡಿಯೋ ಇಲ್ಲಿದೆ
ಉಡುಪಿ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನಿಗೆ ಥಳಿತ
ಉಡುಪಿ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನಿಗೆ ಥಳಿತ
ಒಂದು ದೇಶ ಒಂದು ಚುನಾವಣೆ ಬಗ್ಗೆ ಬಹಳಷ್ಟು ಚರ್ಚೆ ಆಗಬೇಕಿದೆ: ಪರಮೇಶ್ವರ್
ಒಂದು ದೇಶ ಒಂದು ಚುನಾವಣೆ ಬಗ್ಗೆ ಬಹಳಷ್ಟು ಚರ್ಚೆ ಆಗಬೇಕಿದೆ: ಪರಮೇಶ್ವರ್
ಮೀಸಲಾತಿ ವಿಷಯದಲ್ಲಿ ಯತ್ನಾಳ್ ತಮ್ಮ ಸರ್ಕಾರವನ್ನು ಸಮರ್ಥಿಸಿಕೊಳ್ಳುತ್ತಾರೆ
ಮೀಸಲಾತಿ ವಿಷಯದಲ್ಲಿ ಯತ್ನಾಳ್ ತಮ್ಮ ಸರ್ಕಾರವನ್ನು ಸಮರ್ಥಿಸಿಕೊಳ್ಳುತ್ತಾರೆ
ಕಾಂಗ್ರೆಸ್ ಒಂದು ದೇಶ ಒಂದು ಚುನಾವಣೆ ಮಸೂದೆ ವಿರೋಧಿಸುತ್ತದೆ: ಶಿವಕುಮಾರ್
ಕಾಂಗ್ರೆಸ್ ಒಂದು ದೇಶ ಒಂದು ಚುನಾವಣೆ ಮಸೂದೆ ವಿರೋಧಿಸುತ್ತದೆ: ಶಿವಕುಮಾರ್
ಶ್ರೀಲಂಕಾದ ರೈಲಿನಲ್ಲಿ ರೀಲ್ಸ್​ ಮಾಡಲು ಹೋಗಿ ಚೀನಾ ಯುವತಿಗೆ ಏನಾಯ್ತು ನೋಡಿ
ಶ್ರೀಲಂಕಾದ ರೈಲಿನಲ್ಲಿ ರೀಲ್ಸ್​ ಮಾಡಲು ಹೋಗಿ ಚೀನಾ ಯುವತಿಗೆ ಏನಾಯ್ತು ನೋಡಿ
Live: ಬೆಳಗಾವಿ ಅಧಿವೇಶನದ ಐದನೇ ದಿನದ ಕಲಾಪ ನೇರ ಪ್ರಸಾರ
Live: ಬೆಳಗಾವಿ ಅಧಿವೇಶನದ ಐದನೇ ದಿನದ ಕಲಾಪ ನೇರ ಪ್ರಸಾರ
ಅಂಜನಾದ್ರಿ ಬೆಟ್ಟದಲ್ಲಿ ನೆರೆದಿದ್ದಾರೆ ಮಾಲೆ ಧರಿಸಿರುವ ಸಾವಿರಾರು ಭಕ್ತರು
ಅಂಜನಾದ್ರಿ ಬೆಟ್ಟದಲ್ಲಿ ನೆರೆದಿದ್ದಾರೆ ಮಾಲೆ ಧರಿಸಿರುವ ಸಾವಿರಾರು ಭಕ್ತರು
ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು
ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು