
ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಸತತ ಎರಡು ಟಿ20 ಸರಣಿಗಳನ್ನು ಸೋತ ಟೀಂ ಇಂಡಯಾ ಇದೀಗ ಮತ್ತೊಮ್ಮೆ ಮೈದಾನಕ್ಕಿಳಿದಿದೆ. ಈ ಬಾರಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಜಿಂಬಾಬ್ವೆ (India vs Zimbabwe ) ತಂಡವನ್ನು ಎದುರಿಸುತ್ತಿರುವ ಶ್ರೇಯಸ್ ಅಯ್ಯರ್ ಪಡೆ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಶ್ರೇಯಸ್ ಅಯ್ಯರ್ (Shreyas Iyer) ತಂಡದ ನಾಯಕನಾದ ಬಳಿಕ ಇದುವರೆಗೆ 7 ಪಂದ್ಯಗಳನ್ನು ಆಡಲಾಗಿದೆ. ಆದರೆ ಈ 7 ಪಂದ್ಯಗಳಲ್ಲಿ ಒಂದರಲ್ಲೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಇದೀಗ ಕಳೆದ ಸರಣಿಗಳಲ್ಲಿ ಮಾಡಿದ್ದ ತಪ್ಪುಗಳನ್ನು ತಿದ್ದಿಕೊಂಡು ಅಖಾಡಕ್ಕಿಳಿದಿರುವ ಯುವ ಟೀಂ ಇಂಡಿಯಾ, ಜಿಂಬಾಬ್ವೆ ಸವಾಲನ್ನು ಯಾವ ರೀತಿಯಾಗಿ ಎದುರಿಸುತ್ತದೆ ಎಂಬುದು ಕುತೂಹಲಕಾರಿಯಾಗಿದೆ.
ಹರಾರೆಯಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಲ್ಲಿ ಕಳವಳಕರವಾದ ಸಂಗತಿಯೆಂದರೆ ಶ್ರೇಯಸ್ ಅಯ್ಯರ್ ನಾಯಕನಾಗಿ ಆಡಿದ ಎಲ್ಲಾ ಪಂದ್ಯಗಳಲ್ಲೂ ಟಾಸ್ ಗೆದ್ದಿದ್ದಾರೆ. ಆದರೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಅವರಿಗೆ ಸಾಧ್ಯವಾಗಿಲ್ಲ. ಹೀಗಾಗಿ ಈ ಪಂದ್ಯದಲ್ಲೂ ಟಾಸ್ ಗೆದ್ದಿರುವ ಅಯ್ಯರ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯುತ್ತಾರಾ ಕಾದು ನೋಡಬೇಕಿದೆ.
A special moment ahead of the series opener in Harare!
Congratulations to Ashok Sharma, who is all set to make his #TeamIndia Debut 👏👏
Follow the match ▶️ https://t.co/NKa0znQQ3H#ZIMvIND pic.twitter.com/veS4gEKdom
— BCCI (@BCCI) July 23, 2026
ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಎರಡೂ ತಂಡಗಳ ಪರ ಯುವ ಆಟಗಾರರಿಗೆ ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯವನ್ನಾಡುವ ಅವಕಾಶ ಸಿಕ್ಕಿದೆ. ಅದರಂತೆ ಟೀಂ ಇಂಡಿಯಾ ಪರ ವೇಗದ ಬೌಲರ್ ಅಶೋಕ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇತ್ತ ಆರಂಭಿಕರಾದ ಬೆನ್ ಕರನ್ ಮತ್ತು ನ್ಯೂಮನ್ ನ್ಯಾಮುರಿ ಜಿಂಬಾಬ್ವೆ ಪರ ಚೊಚ್ಚಲ ಪಂದ್ಯವಾಡುತ್ತಿದ್ದಾರೆ.
Zimbabwe vs India T20, Live Score: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ
ಭಾರತ ತಂಡ: ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್, ಅಶೋಕ್ ಶರ್ಮಾ ( ಚೊಚ್ಚಲ ಪಂದ್ಯ) ಮತ್ತು ಮಯಾಂಕ್ ಯಾದವ್.
🚨 Toss and Team Update 🚨#TeamIndia elect to bowl in the 1st T20I against Zimbabwe
A look at our Playing XI 💪
Follow the match ▶️ https://t.co/NKa0znQQ3H#ZIMvIND pic.twitter.com/w5wD1vCpV8
— BCCI (@BCCI) July 23, 2026
ಜಿಂಬಾಬ್ವೆ ತಂಡ: ಬ್ರಿಯಾನ್ ಬೆನೆಟ್, ಬೆನ್ ಕರ್ರನ್ (ಚೊಚ್ಚಲ ಪಂದ್ಯ), ಡಿಯೋನ್ ಮೈಯರ್ಸ್, ಸಿಕಂದರ್ ರಝಾ (ನಾಯಕ), ರಿಯಾನ್ ಬರ್ಲ್, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಾನಿ (ವಿಕೆಟ್ ಕೀಪರ್), ಬ್ರಾಡ್ ಇವಾನ್ಸ್, ನ್ಯೂಮನ್ ನ್ಯಾಮ್ಹುರಿ (ಚೊಚ್ಚಲ ಪಂದ್ಯ), ರಿಚರ್ಡ್ ನಾಗರವಾ ಮತ್ತು ಬ್ಲೆಸ್ಸಿಂಗ್ ಮುಜರಬಾನಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:23 pm, Thu, 23 July 26