
ಜುಲೈ 5 ರಂದು ಬೆಂಗಳೂರಿನಲ್ಲಿ ನೀರಜ್ ಚೋಪ್ರಾ ಕ್ಲಾಸಿಕ್ (Neeraj Chopra Classic 2025) ಅಂತರರಾಷ್ಟ್ರೀಯ ಜಾವೆಲಿನ್ ಥ್ರೋ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣವು ಈ ಸ್ಪರ್ಧೆಗೆ ಸಜ್ಜಾಗಿದೆ. ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ಎಎಫ್‌ಐ) ಅನುಮೋದಿಸಿರುವ ಈ ಸ್ಪರ್ಧೆಯನ್ನು ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಮತ್ತು ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಜಂಟಿಯಾಗಿ ಆಯೋಜಿಸಿದ್ದು, ವಿಶ್ವದ ಅಗ್ರ ಜಾವೆಲಿನ್ ಆಟಗಾರರು ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರಮುಖ ಸ್ಪರ್ಧಿಗಳಲ್ಲಿ ಸ್ವತಃ ನೀರಜ್ ಚೋಪ್ರಾ ಮತ್ತು 2016 ರ ರಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ ಥಾಮಸ್ ರೋಹ್ಲರ್ ಹಾಗೂ ಅಂತರರಾಷ್ಟ್ರೀಯ ಸ್ಪರ್ಧಿಗಳ ಪ್ರಬಲ ಗುಂಪು ಸೇರಿದೆ.
ಇನ್ನು ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ, ಎರಡು ಬಾರಿಯ ವಿಶ್ವ ಚಾಂಪಿಯನ್ ಗ್ರೆನಡಾದ ಆಂಡರ್ಸನ್ ಪೀಟರ್ಸ್, 2016 ರ ಒಲಿಂಪಿಕ್ ಚಿನ್ನದ ಪದಕ ವಿಜೇತ ಜರ್ಮನಿಯ ಥಾಮಸ್ ರೋಹ್ಲರ್, 2015 ರ ವಿಶ್ವ ಚಾಂಪಿಯನ್ ಕೀನ್ಯಾದ ಜೂಲಿಯಸ್ ಯೆಗೊ, ಅಮೆರಿಕದ ಕರ್ಟಿಸ್ ಥಾಂಪ್ಸನ್, ಏಷ್ಯನ್ ಗೇಮ್ಸ್ ಕಂಚಿನ ಪದಕ ವಿಜೇತ ಜಪಾನ್‌ನ ಜೆಂಕಿ ಡೀನ್, ಶ್ರೀಲಂಕಾದ ರುಮೇಶ್ ಪತಿರಾಜ್ ಮತ್ತು ಬ್ರೆಜಿಲ್‌ನ ಲೂಯಿಜ್ ಮೌರಿಸಿಯೊ ಡಾ ಸಿಲ್ವಾ ಭಾಗವಹಿಸುತ್ತಿದ್ದಾರೆ. ನೀರಜ್ ಚೋಪ್ರಾ ಅವರಲ್ಲದೆ, ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಚಿನ್ ಯಾದವ್, ಕಿಶೋರ್ ಜೆನಾ, ರೋಹಿತ್ ಯಾದವ್ ಮತ್ತು ಸಾಹಿಲ್ ಸಿಲ್ವಾಲ್ ಭಾರತದಿಂದ ಭಾಗವಹಿಸುತ್ತಿದ್ದಾರೆ.
ನೀರಜ್ ಚೋಪ್ರಾ ಕ್ಲಾಸಿಕ್ 2025 ಜುಲೈ 5 ರಂದು ನಡೆಯಲಿದೆ.
ನೀರಜ್ ಚೋಪ್ರಾ ಕ್ಲಾಸಿಕ್ 2025 ಜುಲೈ 5 ರ ಸಂಜೆ 7 ಗಂಟೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ.
ನೀರಜ್ ಚೋಪ್ರಾ ಕ್ಲಾಸಿಕ್ 2025 ಅನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್-2 ಮತ್ತು ಸ್ಟಾರ್ ಸ್ಪೋರ್ಟ್ಸ್ ಹಿಂದಿ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು.
ನೀರಜ್ ಚೋಪ್ರಾ ಕ್ಲಾಸಿಕ್ 2025 ಅನ್ನು ಭಾರತದಲ್ಲಿ ಜಿಯೋಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ