AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2027 ರ ಏಷ್ಯಾಕಪ್‌ಗೆ 6 ತಂಡಗಳು ಫೈನಲ್; ಕೊನೆಯ ತಂಡವಾಗಿ ನೇಪಾಳ ಎಂಟ್ರಿ

ನೇಪಾಳ ಕ್ರಿಕೆಟ್ ತಂಡ ಎಸಿಸಿ ಪ್ರೀಮಿಯರ್ ಕಪ್ ಗೆದ್ದು 2027ರ ಏಷ್ಯಾಕಪ್‌ಗೆ ಅರ್ಹತೆ ಪಡೆದಿದೆ. ಮಲೇಷ್ಯಾದಲ್ಲಿ ನಡೆದ ಈ ಪಂದ್ಯದಲ್ಲಿ ನೇಪಾಳ, ಯುಎಇ ವಿರುದ್ಧ 44 ರನ್‌ಗಳ ಜಯ ಸಾಧಿಸಿತು. ಆಸಿಫ್ ಶೇಖ್ ಅವರ ಶತಕ ಈ ಐತಿಹಾಸಿಕ ಗೆಲುವಿಗೆ ಪ್ರಮುಖ ಕಾರಣವಾಯಿತು. ಸಂದೀಪ್ ಲಮಿಚಾನೆ ನೇತೃತ್ವದ ನೇಪಾಳ, ಮುಂದಿನ ಏಷ್ಯಾಕಪ್‌ಗೆ ಅರ್ಹತೆ ಪಡೆದ 6ನೇ ತಂಡವಾಗಿದೆ.

2027 ರ ಏಷ್ಯಾಕಪ್‌ಗೆ 6 ತಂಡಗಳು ಫೈನಲ್; ಕೊನೆಯ ತಂಡವಾಗಿ ನೇಪಾಳ ಎಂಟ್ರಿ
ಏಷ್ಯಾಕಪ್ 2027
ಪೃಥ್ವಿಶಂಕರ
|

Updated on: Sep 12, 2026 | 6:49 PM

Share

ಮಲೇಷ್ಯಾದ ಬಯುಮಾಸ್ ಓವಲ್‌ನಲ್ಲಿ ನಡೆದ ಎಸಿಸಿ ಪುರುಷರ ಪ್ರೀಮಿಯರ್ ಕಪ್ 2026 ರ ಫೈನಲ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ತಂಡವನ್ನು 44 ರನ್‌ಗಳಿಂದ ಸೋಲಿಸುವ ಮೂಲಕ ನೇಪಾಳ ಕ್ರಿಕೆಟ್ ತಂಡ ಮುಂದಿನ ವರ್ಷ ಅಂದರೆ 2027 ರಲ್ಲಿ ನಡೆಯಲಿರುವ ಏಷ್ಯಾಕಪ್​ಗೆ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದೆ. ನೇಪಾಳದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆರಂಭಿಕ ಆಟಗಾರ ಆಸಿಫ್ ಶೇಖ್ ಅದ್ಭುತ ಶತಕ ಬಾರಿಸುವ ಮೂಲಕ ತಂಡದ ಗೆಲುವಿಗೆ ಮುನ್ನುಡಿ ಬರೆದರು. ಈ ಗೆಲುವಿನೊಂದಿಗೆ, ಸಂದೀಪ್ ಲಾಮಿಚಾನೆ ನಾಯಕತ್ವದ ನೇಪಾಳ ತಂಡವು ಮುಂದಿನ ವರ್ಷ ಬಾಂಗ್ಲಾದೇಶದಲ್ಲಿ ನಡೆಯಲಿರುವ ಏಷ್ಯಾಕಪ್​ನಲ್ಲಿ 6ನೇ ತಂಡವಾಗಿ ಕಣಕ್ಕಿಳಿಯಲಿದೆ.

2027 ರ ಏಷ್ಯಾಕಪ್‌ಗೆ 6 ತಂಡಗಳು

ಮೇಲೆ ಹೇಳಿದಂತೆ ಎಸಿಸಿ ಪ್ರೀಮಿಯರ್ ಕಪ್ ಗೆದ್ದುಕೊಂಡ ನೇಪಾಳ ಆರನೇ ಮತ್ತು ಅಂತಿಮ ತಂಡವಾಗಿ ಏಷ್ಯಾಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಬಾರಿಯ ಏಷ್ಯಾಕಪ್ ಅನ್ನು ಏಕದಿನ ಸ್ವರೂಪದಲ್ಲಿ ಆಡಲಾಗುತ್ತಿದ್ದು, ಪರಿಣಾಮವಾಗಿ ಕೇವಲ ಆರು ತಂಡಗಳು ಮಾತ್ರ ಭಾಗವಹಿಸುತ್ತವೆ. ಕಳೆದ ಏಷ್ಯಾಕಪ್‌ನಲ್ಲಿ ಎಂಟು ತಂಡಗಳು ಭಾಗವಹಿಸಿದ್ದವು. ಆದರೆ ಕಳೆದ ಆವೃತ್ತಿಯನ್ನು ಟಿ20 ಸ್ವರೂಪದಲ್ಲಿ ಆಡಲಾಗಿತ್ತು. ಹಾಲಿ ಚಾಂಪಿಯನ್ ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಆತಿಥೇಯ ಬಾಂಗ್ಲಾದೇಶಗಳು ಪಂದ್ಯಾವಳಿಗೆ ನೇರ ಪ್ರವೇಶವನ್ನು ಪಡೆದಿದ್ದು, 6ನೇ ತಂಡವಾಗಿ ನೇಪಾಳವೂ ಎಂಟ್ರಿಕೊಟ್ಟಿದೆ.

2023 ರ ನಂತರ ಅರ್ಹತೆ ಪಡೆದ ನೇಪಾಳ

ನೇಪಾಳ ಕ್ರಿಕೆಟ್ ಇತಿಹಾಸದಲ್ಲಿ ತಂಡವು ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವುದು ಇದು ಕೇವಲ ಎರಡನೇ ಬಾರಿ. ನೇಪಾಳವು 2023 ರಲ್ಲಿ ಏಷ್ಯಾಕಪ್‌ಗೆ ಪಾದಾರ್ಪಣೆ ಮಾಡಿತ್ತು. ಆ ಆವೃತ್ತಿಯಲ್ಲಿ ಭಾರತ ಮತ್ತು ಪಾಕಿಸ್ತಾನದೊಂದಿಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದ ನೇಪಾಳ ಒಂದು ಪಂದ್ಯವನ್ನು ಗೆದ್ದಿರಲಿಲ್ಲ. ಆದರೀಗ, 2027 ರಲ್ಲಿ ಪ್ರಮುಖ ತಂಡಗಳಿಗೆ ಕಠಿಣ ಸ್ಪರ್ಧೆಯನ್ನು ನೀಡುವ ಉದ್ದೇಶದಿಂದ ನೇಪಾಳ ಮೈದಾನಕ್ಕೆ ಇಳಿಯಲಿದೆ.

ಅಜೇಯ ತಂಡವಾಗಿ ಏಷ್ಯಾಕಪ್ ಫೈನಲ್​ಗೇರಿದ ಟೀಂ ಇಂಡಿಯಾ

10 ತಂಡಗಳನ್ನು ಸೋಲಿಸಿ ಚಾಂಪಿಯನ್

ಈ ಪಂದ್ಯಾವಳಿಯನ್ನು ಆಗಸ್ಟ್ 30 ರಿಂದ ಸೆಪ್ಟೆಂಬರ್ 12 ರವರೆಗೆ 10 ಸಹವರ್ತಿ ರಾಷ್ಟ್ರಗಳಾದ ನೇಪಾಳ, ಯುಎಇ, ಮಲೇಷ್ಯಾ, ಕುವೈತ್, ಹಾಂಗ್ ಕಾಂಗ್, ಬಹ್ರೇನ್, ಓಮನ್, ಕತಾರ್, ಸೌದಿ ಅರೇಬಿಯಾ ಮತ್ತು ಸಿಂಗಾಪುರ ನಡುವೆ ನಡೆಸಲಾಯಿತು. ಅಂತಿಮವಾಗಿ ನೇಪಾಳ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ