AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ಗಾಗಿ ಬೆಂಗಳೂರಿನಲ್ಲಿ ನೆದರ್​ಲೆಂಡ್ಸ್​ ತಂಡದ ಮಾಸ್ಟರ್​ ಪ್ಲ್ಯಾನ್

ODI World Cup 2023: ಈ ಬಾರಿಯ ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಏಕದಿನ ವಿಶ್ವಕಪ್​ಗಾಗಿ ಬೆಂಗಳೂರಿನಲ್ಲಿ ನೆದರ್​ಲೆಂಡ್ಸ್​ ತಂಡದ ಮಾಸ್ಟರ್​ ಪ್ಲ್ಯಾನ್
Netherlands
TV9 Web
| Edited By: |

Updated on: Aug 08, 2023 | 5:27 PM

Share

ಏಕದಿನ ವಿಶ್ವಕಪ್ (ODI World Cup 2023) ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಕ್ರಿಕೆಟ್ ಮಹಾಸಮರಕ್ಕಾಗಿ ನೆದರ್​ಲೆಂಡ್ಸ್ (Netherlands) ತಂಡವು ಮಾಸ್ಟರ್​ ಪ್ಲ್ಯಾನ್ ರೂಪಿಸಲು ಮುಂದಾಗಿದೆ. ಇದಕ್ಕಾಗಿ ಸೆಪ್ಟೆಂಬರ್ 19 ರಂದೇ ಬೆಂಗಳೂರಿಗೆ ಆಗಮಿಸಿದೆ. ಅಂದರೆ ಏಕದಿನ ವಿಶ್ವಕಪ್​ಗೂ ಮುಂಚಿತವಾಗಿ ನೆದರ್​ಲೆಂಡ್ಸ್ ತಂಡವು ಬೆಂಗಳೂರಿನಲ್ಲಿ ವಿಶೇಷ ಅಭ್ಯಾಸ ಶಿಬಿರ ಏರ್ಪಡಿಸಲಿದೆ.

ಈ ಬಗ್ಗೆ ಈಗಾಗಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ಜೊತೆ ಚರ್ಚಿಸಿದ್ದು, ಅದರಂತೆ ಏಕದಿನ ವಿಶ್ವಕಪ್ ಆರಂಭಕ್ಕೂ 12 ದಿನಗಳು ಮುಂಚಿತವಾಗಿ ಆಲೂರಿನ ಕೆಎಸ್​ಸಿಎ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಲಿದೆ ಎಂದು ಕ್ರಿಕ್​ಬಝ್ ವರದಿ ಮಾಡಿದೆ.

ಅರ್ಹತಾ ಸುತ್ತಿನ ಮೂಲಕ ಎಂಟ್ರಿ: ಈ ಬಾರಿಯ ಏಕದಿನ ವಿಶ್ವಕಪ್​ಗೆ ನೆದರ್​ಲೆಂಡ್ಸ್ ತಂಡವು ಅರ್ಹತಾ ಸುತ್ತಿನ ಮೂಲಕ ಎಂಟ್ರಿ ಕೊಟ್ಟಿದೆ. ಅದು ಕೂಡ ವೆಸ್ಟ್ ಇಂಡೀಸ್ (West Indies) ಹಾಗೂ ಝಿಂಬಾಬ್ವೆ (Zimbabwe) ತಂಡಗಳನ್ನು ಬಗ್ಗು ಬಡಿಯುವ ಮೂಲಕ ಎಂಬುದು ವಿಶೇಷ.

ಮೊದಲ ಪಂದ್ಯ: ನೆದರ್​ಲೆಂಡ್ಸ್​ ತಂಡವು ತನ್ನ ವಿಶ್ವಕಪ್ 2023 ಅಭಿಯಾನವನ್ನು ಪಾಕಿಸ್ತಾನದ ವಿರುದ್ಧ ಆರಂಭಿಸಲಿದೆ. ಈ ಪಂದ್ಯವು ಅಕ್ಟೋಬರ್ 6 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ.

ಟೀಮ್ ಇಂಡಿಯಾ ವಿರುದ್ಧದ ಪಂದ್ಯ: ನವೆಂಬರ್ 11 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆದರ್​ಲೆಂಡ್ಸ್ ಹಾಗೂ ಭಾರತ ತಂಡಗಳು ಮುಖಾಮುಖಿಯಾಗಲಿದೆ.

ವಿಶ್ವಕಪ್​ ಕನಸು: ನೆದರ್​ಲೆಂಡ್ಸ್​ ತಂಡವು ಏಕದಿನ ವಿಶ್ವಕಪ್​ನಲ್ಲಿ ಕೇವಲ 4 ಬಾರಿ ಮಾತ್ರ ಕಾಣಿಸಿಕೊಂಡಿತ್ತು. 1996 ರಲ್ಲಿ ಚೊಚ್ಚಲ ವಿಶ್ವಕಪ್ ಆಡಿದ್ದ ಡಚ್ಚರು, ಆ ಬಳಿಕ 2003, 2007 ಮತ್ತು 2011 ರ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದರು. ಇದೀಗ ಐದನೇ ಬಾರಿ ವಿಶ್ವಕಪ್​ ಕನಸಿನೊಂದಿಗೆ ಭಾರತಕ್ಕೆ ಬರಲಿದೆ.

ನೆದರ್​ಲೆಂಡ್ಸ್ ತಂಡದ ಏಕದಿನ ವಿಶ್ವಕಪ್ ವೇಳಾಪಟ್ಟಿ:

  1. ಅಕ್ಟೋಬರ್ 6- ನೆದರ್​ಲೆಂಡ್ಸ್ vs ಪಾಕಿಸ್ತಾನ್ (ಹೈದರಾಬಾದ್)
  2. ಅಕ್ಟೋಬರ್ 9- ನೆದರ್​ಲೆಂಡ್ಸ್ vs  ನ್ಯೂಝಿಲೆಂಡ್ (ಹೈದರಾಬಾದ್)
  3. ಅಕ್ಟೋಬರ್ 17- ನೆದರ್​ಲೆಂಡ್ಸ್ vs  ಸೌತ್ ಆಫ್ರಿಕಾ (ಧರ್ಮಶಾಲಾ)
  4. ಅಕ್ಟೋಬರ್ 21- ನೆದರ್​ಲೆಂಡ್ಸ್ vs  ಶ್ರೀಲಂಕಾ (ಲಕ್ನೋ)
  5. ಅಕ್ಟೋಬರ್ 25- ನೆದರ್​ಲೆಂಡ್ಸ್ vs ಆಸ್ಟ್ರೇಲಿಯಾ (ದೆಹಲಿ)
  6. ಅಕ್ಟೋಬರ್ 28- ನೆದರ್​ಲೆಂಡ್ಸ್ vs  ಬಾಂಗ್ಲಾದೇಶ್ (ಕೊಲ್ಕತ್ತಾ)
  7. ನವೆಂಬರ್ 3- ನೆದರ್​ಲೆಂಡ್ಸ್ vs ಅಫ್ಘಾನಿಸ್ತಾನ್ (ಲಕ್ನೋ)
  8. ನವೆಂಬರ್ 8- ನೆದರ್​ಲೆಂಡ್ಸ್ vs ಇಂಗ್ಲೆಂಡ್ (ಪುಣೆ)
  9. ನವೆಂಬರ್ 11- ನೆದರ್​ಲೆಂಡ್ಸ್ vs ಭಾರತ (ಬೆಂಗಳೂರು).

ಏಕದಿನ ವಿಶ್ವಕಪ್​ ವೇಳಾಪಟ್ಟಿ:

ಈ ಬಾರಿಯ ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ. ಇನ್ನು ಟೀಮ್ ಇಂಡಿಯಾ ತನ್ನ ವಿಶ್ವಕಪ್ ಅಭಿಯಾನವನ್ನು ಅಕ್ಟೋಬರ್ 8 ರಂದು ಆರಂಭಿಸಲಿದ್ದು, ಚೆನ್ನೈನಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲಿದೆ.

ಭಾರತ-ಪಾಕ್ (India vs Pakistan) ಮುಖಾಮುಖಿ ಯಾವಾಗ?

ಈ ಹಿಂದಿನ ವೇಳಾಪಟ್ಟಿಯಲ್ಲಿ ಅಕ್ಟೋಬರ್ 15 ರಂದು ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಇದೇ ದಿನದಂದು ನವರಾತ್ರಿ ಹಬ್ಬ ಕೂಡ ಶುರುವಾಗುತ್ತಿದೆ. ಅತ್ತ ಗುಜರಾತ್​​ನಾದ್ಯಂತ ಅಕ್ಟೋಬರ್ 15 ರಂದು ಗರ್ಬಾ ಕಾರ್ಯಕ್ರಮಗಳು ನಡೆಯಲಿದ್ದು, ಹೀಗಾಗಿ ಈ  ಪಂದ್ಯಕ್ಕೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುವುದಿಲ್ಲ ಎಂದು ಅಹಮದಾಬಾದ್​ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಅಕ್ಟೋಬರ್ 14 ರಂದು ಭಾರತ-ಪಾಕಿಸ್ತಾನ್ ಪಂದ್ಯ ನಡೆಸಲು ಬಿಸಿಸಿಐ ನಿರ್ಧರಿಸಿದ್ದು, ಹೊಸ ವೇಳಾಪಟ್ಟಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ