Hardik Pandya: ಕಳೆದ ಬಾರಿ ಮಿಸ್ ಆಯ್ತು, ಈ ಸಲ ವಿಶ್ವಕಪ್ ನಮ್ದೆ: ಹಾರ್ದಿಕ್ ಪಾಂಡ್ಯ
India vs Sri Lanka 1st T20: ಜನವರಿ 3 ರಿಂದ ಟೀಮ್ ಇಂಡಿಯಾ ಹೊಸ ವರ್ಷದಲ್ಲಿ ಕ್ರಿಕೆಟ್ ಅಭಿಯಾನವನ್ನು ಆರಂಭಿಸುತ್ತಿದೆ. ವಿಶೇಷ ಎಂದರೆ 2023ರ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿದೆ.
ದೇಶಕ್ಕಾಗಿ ಈ ಬಾರಿ ವಿಶ್ವಕಪ್ (World Cup 2023) ಗೆಲ್ಲುವುದು ನನ್ನ ಹೊಸ ವರ್ಷದ ಸಂಕಲ್ಪವಾಗಿದೆ ಎಂದು ಟೀಮ್ ಇಂಡಿಯಾ (Team India) ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಗೂ ಮುನ್ನದಿನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಂಡ್ಯ, ಕಳೆದ ವರ್ಷ ಟಿ20 ವಿಶ್ವಕಪ್ ನಮ್ಮಿಂದ ಕೈ ತಪ್ಪಿ ಹೋಯ್ತು. ಆದರೆ 2023 ರಲ್ಲಿ ನಡೆಯುವ ವಿಶ್ವಕಪ್ ಗೆಲ್ಲುವ ಗುರಿ ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.
ನಿಸ್ಸಂಶಯವಾಗಿ, ಒಂದು ವರ್ಷದ ಹಿಂದೆ ಎಲ್ಲವೂ ಭಿನ್ನವಾಗಿತ್ತು. ನಾವು ಟಿ20 ವಿಶ್ವಕಪ್ ಗೆಲ್ಲಲು ಬಯಸುತ್ತಿದ್ದೆವು. ಆದರೆ ಅದು ಸಾಧ್ಯವಾಗಲಿಲ್ಲ. ಇದೀಗ ಹೊಸ ವರ್ಷದಲ್ಲಿ ಹೊಸ ಸಂಕಲ್ಪವನ್ನು ಹೊಂದಿದ್ದೇವೆ. ನನ್ನ ವೃತ್ತಿ ಜೀವನದಲ್ಲಿ ನಾನು ಏನನ್ನೂ ಸಾಧಿಸಿಲ್ಲ. ಆದ್ದರಿಂದ, ಭವಿಷ್ಯಕ್ಕಾಗಿ ಎದುರು ನೋಡುತ್ತಿದ್ದೇನೆ. ಅದರಂತೆ ಈ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆಲ್ಲುವ ಗುರಿ ಹೊಂದಿದ್ದೇನೆ. ಇದುವೇ ನನ್ನ ಹೊಸ ವರ್ಷದ ಸಂಕಲ್ಪ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ನನಗೆ ಕಠಿಣ ಪರಿಶ್ರಮದ ಭಾಷೆ ಗೊತ್ತು. ಇದರ ಹೊರತಾಗಿ ನನ್ನ ವೃತ್ತಿಜೀವನದಲ್ಲಿ ನನಗೆ ಬೇರೆ ಭಾಷೆ ತಿಳಿದಿಲ್ಲ ಎಂದು ನಾನು ಭಾವಿಸುತ್ತೇನೆ. ಎಷ್ಟೇ ಕುಗ್ಗಿದರೂ ಮರಳಿ ಬರುವಂತೆ ಮಾಡುವ ಏಕೈಕ ವಿಷಯವೆಂದರೆ ನನ್ನ ಕಠಿಣ ಪರಿಶ್ರಮ. ಇದಾಗ್ಯೂ ಗಾಯಗಳು ಆಟದ ಒಂದು ಭಾಗವಾಗಿದೆ. ನಾನು ಅದರಿಂದ ಹೊರಗುಳಿಯಲು ಸಾಧ್ಯವಿಲ್ಲ.
ನಾನು ಏನು ಮಾಡಿದ್ದೇನೆ. ಯಾವುದು ನನ್ನನ್ನು ಇಲ್ಲಿಗೆ ತಂದು ನಿಲ್ಲಿಸಿದೆ ಎಂಬ ಪ್ರಕ್ರಿಯೆಯಲ್ಲಿ ನಾನು ನಂಬಿಕೆ ಹೊಂದಿದ್ದೇನೆ. ಮುಂದಿನ ದಿನಗಳಲ್ಲಿ ಅತ್ಯುತ್ತವಾಗಿ ಆಡಲು ಬಯಸುತ್ತೇನೆ. ಈ ಮೂಲಕ ಭಾರತಕ್ಕೆ ಏಕದಿನ ವಿಶ್ವಕಪ್ ಗೆದ್ದುಕೊಡುವ ವಿಶ್ವಾಸವಿದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ಇದನ್ನೂ ಓದಿ: Team India New Jersey 2023: ಟೀಮ್ ಇಂಡಿಯಾದ ಹೊಸ ಜೆರ್ಸಿ ಅನಾವರಣ
ಜನವರಿ 3 ರಿಂದ ಟೀಮ್ ಇಂಡಿಯಾ ಹೊಸ ವರ್ಷದಲ್ಲಿ ಕ್ರಿಕೆಟ್ ಅಭಿಯಾನವನ್ನು ಆರಂಭಿಸುತ್ತಿದೆ. ವಿಶೇಷ ಎಂದರೆ 2023ರ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿದೆ. ಅಂದರೆ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದು, ಹೀಗಾಗಿ ತಂಡವನ್ನು ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ಭವಿಷ್ಯದ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾಗೆ ವಿಶ್ವಕಪ್ ಗೆಲ್ಲಿಸುವ ಕೊಡುವ ವಿಶ್ವಾಸದಲ್ಲಿದ್ದಾರೆ ಕುಂಗ್ಫು ಪಾಂಡ್ಯ.
ಭಾರತ-ಶ್ರೀಲಂಕಾ ಟಿ20 ಸರಣಿ ವೇಳಾಪಟ್ಟಿ:-
- ಜನವರಿ 3: ಮೊದಲ ಟಿ20 ಪಂದ್ಯ (ಸ್ಥಳ-ವಾಂಖೆಡೆ ಸ್ಟೇಡಿಯಂ)
- ಜನವರಿ 5: ಎರಡನೇ ಟಿ20 ಪಂದ್ಯ (ಸ್ಥಳ- ಪುಣೆ ಕ್ರಿಕೆಟ್ ಸ್ಟೇಡಿಯಂ)
- ಜನವರಿ 7: ಮೂರನೇ ಟಿ20 ಪಂದ್ಯ (ಸ್ಥಳ- ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂ- ರಾಜ್ಕೋಟ್)
ಇದನ್ನೂ ಓದಿ: RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
ಟೀಮ್ ಇಂಡಿಯಾ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.