AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಧಿಕೃತ ಟೆಸ್ಟ್​ನಲ್ಲಿ ಮಿಂಚಿದ ದೇವದತ್ ಪಡಿಕ್ಕಲ್, ಧ್ರವ್ ಜುರೆಲ್

ಭಾರತ ಎ ಮತ್ತು ನ್ಯೂಝಿಲೆಂಡ್ ಎ ತಂಡಗಳ ನಡುವಣ ಮೂರು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿ ಎರಡನೇ ಮ್ಯಾಚ್ ಶುರುವಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ದೇವದತ್ ಪಡಿಕ್ಕಲ್ ಹಾಗೂ ಧ್ರುವ್ ಜುರೆಲ್ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

ಅನಧಿಕೃತ ಟೆಸ್ಟ್​ನಲ್ಲಿ ಮಿಂಚಿದ ದೇವದತ್ ಪಡಿಕ್ಕಲ್, ಧ್ರವ್ ಜುರೆಲ್
Devdutt Padikkal - Dhruv Jurel
ಝಾಹಿರ್ ಯೂಸುಫ್
|

Updated on: Oct 31, 2026 | 1:42 PM

Share

ಕ್ರೈಸ್ಟ್​ಚರ್ಚ್​ನಲ್ಲಿ ನಡೆಯುತ್ತಿರುವ ಭಾರತ ಎ ಮತ್ತು ನ್ಯೂಝಿಲೆಂಡ್ ಎ ತಂಡಗಳ ನಡುವಣ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ದೇವದತ್ ಪಡಿಕ್ಕಲ್ ಹಾಗೂ ಧ್ರುವ್ ಜುರೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಎ ತಂಡದ ನಾಯಕ ರೈಸ್ ಮಾರಿಯು ಬೌಲಿಂಗ್ ಆಯ್ದುಕೊಂಡರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ (0) ನಾಲ್ಕು ಎಸೆತಗಳಲ್ಲೇ ಸೊನ್ನೆ ಸುತ್ತಿ ನಿರ್ಗಮಿಸಿದರು. ಈ ಹಂತದಲ್ಲಿ ಜೊತೆಗೂಡಿದ ಸಾಯಿ ಸುದರ್ಶನ್ ಹಾಗೂ ದೇವದತ್ ಪಡಿಕ್ಕಲ್ 91 ರನ್​ಗಳ ಜೊತೆಯಾಟದೊಂದಿಗೆ ಟೀಮ್ ಇಂಡಿಯಾವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಇದರ ನಡುವೆ 41 ರನ್ ಬಾರಿಸಿದ ಸಾಯಿ ಸುದರ್ಶನ್ ಜೆರ್ರೊಡ್ ಮೆಕೆ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಆ ಬಳಿಕ ಬಂದ ಯಶ್ ರಾಥೋಡ್ ಕೇವಲ 13 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಪಡಿಕ್ಕಲ್ ಜೊತೆಗೂಡಿದ  ನಾಯಕ ಧ್ರುವ್ ಜುರೆಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

ಇತ್ತ 140 ಎಸೆತಗಳಲ್ಲಿ 80 ರನ್ ಬಾರಿಸಿ ಶತಕದತ್ತ ಹೆಜ್ಜೆ ಹಾಕಿದ್ದ ದೇವದತ್ ಪಡಿಕ್ಕಲ್ ಅವರನ್ನು ಕೊನೆಗೂ ಔಟ್ ಮಾಡುವಲ್ಲಿ ಫ್ರೇಸರ್ ಶೀಟ್ ಯಶಸ್ವಿಯಾದರು. ಪಡಿಕ್ಕಲ್ ಔಟಾದ ಬಳಿಕ ಬಂದ ಸ್ಮರಣ್ ರವಿಚಂದ್ರನ್ (0) ಮೊದಲ ಎಸೆತದಲ್ಲೇ ಡಕ್ ಔಟ್ ಆದರು.

ಇದಾಗ್ಯೂ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ಧ್ರುವ್ ಜುರೆಲ್ ಅರ್ಧಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾ ಮೊತ್ತವನ್ನು 250ರ ಗಡಿದಾಟಿಸಿದರು. ಅದರಂತೆ ಮೊದಲ ದಿನದಾಟದ ಅಂತ್ಯಕ್ಕೆ ಭಾರತ ಎ ತಂಡವು 7 ವಿಕೆಟ್ ಕಳೆದುಕೊಂಡು 291 ರನ್ ಕಲೆಹಾಕಿದೆ.

ಸದ್ಯ ಕ್ರೀಸ್​ನಲ್ಲಿ ಧ್ರುವ್ ಜುರೆಲ್ (99) ಹಾಗೂ ಆಕಾಶ್ ದೀಪ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ದ್ವಿತೀಯ ದಿನದಾಟದಲ್ಲಿ ಇನಿಂಗ್ಸ್ ಮುಂದುವರೆಸಲಿದ್ದಾರೆ.

ನ್ಯೂಝಿಲೆಂಡ್ ಎ ಪ್ಲೇಯಿಂಗ್ 11: ರೈಸ್ ಮಾರಿಯು (ನಾಯಕ) , ಕರ್ಟಿಸ್ ಹೀಫಿ , ಟಿಮ್ ರಾಬಿನ್ಸನ್ , ಮ್ಯಾಥ್ಯೂ ಬಾಯ್ಲ್ , ಡೀನ್ ಫಾಕ್ಸ್‌ಕ್ರಾಫ್ಟ್ , ಮಿಚೆಲ್ ಹೇ (ವಿಕೆಟ್ ಕೀಪರ್ ), ಕ್ರಿಶ್ಚಿಯನ್ ಕ್ಲಾರ್ಕ್ , ಬ್ರೆಟ್ ರಾಂಡೆಲ್ , ಫ್ರೇಸರ್ ಶೀಟ್ , ಜೇಡೆನ್ ಲೆನಾಕ್ಸ್.

ಇದನ್ನೂ ಓದಿ: 6,6,6,6,6,6,6: ರಾಹುಲ್ ಸಿಡಿಲಬ್ಬರ, ಸ್ಫೋಟಕ ಅರ್ಧಶತಕ

ಭಾರತ ಎ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಸಾಯಿ ಸುದರ್ಶನ್ , ದೇವದತ್ ಪಡಿಕ್ಕಲ್ , ಯಶ್ ರಾಥೋಡ್ , ಧ್ರುವ್ ಜುರೆಲ್ (ನಾಯಕ) , ಸ್ಮರಣ್ ರವಿಚಂದ್ರನ್ , ವಾಷಿಂಗ್ಟನ್ ಸುಂದರ್ , ಮಾನವ್ ಸುತಾರ್ , ಆಕಾಶ್ ದೀಪ್ , ಮೊಹಮ್ಮದ್ ಸಿರಾಜ್ , ಮುಖೇಶ್ ಕುಮಾರ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ತಾರಕ್ಕೇರಿದ ಮಾಜಿ ಸಿಎಂ ಜಗನ್-ಸಹೋದರಿ ನಡುವಿನ ಆಸ್ತಿ ವಿವಾದ
ತಾರಕ್ಕೇರಿದ ಮಾಜಿ ಸಿಎಂ ಜಗನ್-ಸಹೋದರಿ ನಡುವಿನ ಆಸ್ತಿ ವಿವಾದ
ನಾವು ಶಿವಭಕ್ತರು, ಶಿವ ದೇವಾಲಯದಲ್ಲಿ ಮದುವೆ: ಐಶ್ವರ್ಯಾ-ಶಿಶಿರ್
ನಾವು ಶಿವಭಕ್ತರು, ಶಿವ ದೇವಾಲಯದಲ್ಲಿ ಮದುವೆ: ಐಶ್ವರ್ಯಾ-ಶಿಶಿರ್
‘ಬಸವ ಮಂಟಪ’ವಿವಾದ: ಲೇಖಕ ರವಿ ಹಂಜ್​​ಗೆ ಶಾಕ್ ಕೊಟ್ಟ ಬೆಳಗಾವಿ ಪೊಲೀಸ್ರು
‘ಬಸವ ಮಂಟಪ’ವಿವಾದ: ಲೇಖಕ ರವಿ ಹಂಜ್​​ಗೆ ಶಾಕ್ ಕೊಟ್ಟ ಬೆಳಗಾವಿ ಪೊಲೀಸ್ರು
ಸರ್ಕಾರಿ ಶಾಲೆಗೆ ಬಿಸಿಯೂಟ ಅಕ್ಕಿ ಪೂರೈಸದ ಪ್ರಕರಣದಲ್ಲಿ ಇಬ್ಬರು ಸಸ್ಪೆಂಡ್
ಸರ್ಕಾರಿ ಶಾಲೆಗೆ ಬಿಸಿಯೂಟ ಅಕ್ಕಿ ಪೂರೈಸದ ಪ್ರಕರಣದಲ್ಲಿ ಇಬ್ಬರು ಸಸ್ಪೆಂಡ್
ಮನವಿ ನೀಡಿದವರ ಬಳಿ ಸಚಿವ ಮಧು ಬಂಗಾರಪ್ಪ ದರ್ಪ: ವಿಡಿಯೋ ವೈರಲ್
ಮನವಿ ನೀಡಿದವರ ಬಳಿ ಸಚಿವ ಮಧು ಬಂಗಾರಪ್ಪ ದರ್ಪ: ವಿಡಿಯೋ ವೈರಲ್
ಬೆಂಗಳೂರು ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಬೆಂಗಳೂರು ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಚಿನ್ನ ಖರೀದಿಸಬೇಡಿ ಎಂಬ ಕರೆಯನ್ನು ಪಾಲಿಸಿದ ಭಾರತೀಯರಿಗೆ ಮೋದಿ ಮೆಚ್ಚುಗೆ
ಚಿನ್ನ ಖರೀದಿಸಬೇಡಿ ಎಂಬ ಕರೆಯನ್ನು ಪಾಲಿಸಿದ ಭಾರತೀಯರಿಗೆ ಮೋದಿ ಮೆಚ್ಚುಗೆ
ಕೊಚ್ಚಿನ್ ಏರ್​ಪೋರ್ಟ್​ನಲ್ಲಿ ಲೇಖಕ ರವಿ ಹಂಜ್ ವಿಚಾರಣೆ
ಕೊಚ್ಚಿನ್ ಏರ್​ಪೋರ್ಟ್​ನಲ್ಲಿ ಲೇಖಕ ರವಿ ಹಂಜ್ ವಿಚಾರಣೆ
ಬರದಿಂದ ರೈತರು ಸಂಕಷ್ಟದಲ್ಲಿರುವಾಗ ಗದಗ ಡಿಸಿ ನಿವಾಸದಲ್ಲಿ ಮೋಜು-ಮಸ್ತಿ
ಬರದಿಂದ ರೈತರು ಸಂಕಷ್ಟದಲ್ಲಿರುವಾಗ ಗದಗ ಡಿಸಿ ನಿವಾಸದಲ್ಲಿ ಮೋಜು-ಮಸ್ತಿ
ನವೆಂಬರ್ 23ರಿಂದ 29ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 23ರಿಂದ 29ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ