Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ನ್ಯೂಝಿಲೆಂಡ್ ತಂಡ ಪ್ರಕಟ

|

Updated on: Jan 12, 2025 | 10:52 AM

Champions Trophy 2025: ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಈ ಟೂರ್ನಿಯ ಮೊದಲ ಮ್ಯಾಚ್​ನಲ್ಲಿ ಆತಿಥೇಯ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಫೆಬ್ರವರಿ 20 ರಂದು ಬಾಂಗ್ಲಾದೇಶ್ ವಿರುದ್ಧದ ಪಂದ್ಯದೊಂದಿಗೆ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ಆಲ್​ರೌಂಡರ್ ಮಿಚೆಲ್ ಸ್ಯಾಂಟ್ನರ್ ಮುನ್ನಡೆಸಲಿದ್ದಾರೆ. ಇನ್ನು ಗಾಯದ ಕಾರಣ ಏಕದಿನ ಸರಣಿಗಳಿಂದ ಹೊರಗುಳಿದಿದ್ದ ಕೇನ್ ವಿಲಿಯಮ್ಸನ್, ಲಾಕಿ ಫರ್ಗುಸನ್ ಹಾಗೂ ಡೆವೊನ್ ಕಾನ್ವೆ ಈ ಟೂರ್ನಿಯ ಮೂಲಕ ತಂಡಕ್ಕೆ ಮರಳಲಿದ್ದಾರೆ.

ಈ ಮೂವರು ಕೊನೆಯ ಬಾರಿ ಏಕದಿನ ಪಂದ್ಯವಾಡಿದ್ದು 2023ರ ಏಕದಿನ ವಿಶ್ವಕಪ್​ನಲ್ಲಿ. ಇದೀಗ ಒಂದು ವರ್ಷದ ಬಳಿಕ ಕೇನ್ ವಿಲಿಯಮ್ಸನ್, ಡೆವೊನ್ ಕಾನ್ವೆ ಹಾಗೂ ಲಾಕಿ ಫರ್ಗುಸನ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಹಾಗೆಯೇ ಹದಿನೈದು ಸದಸ್ಯರ ಈ ತಂಡದಲ್ಲಿ ಯುವ ಆಟಗಾರ ನಾಥನ್ ಸ್ಮಿತ್​ಗೂ ಸ್ಥಾನ ನೀಡಲಾಗಿದೆ. ಇದರ ಜೊತೆ ಅದ್ಭುತ ಬೌಲಿಂಗ್ ಮೂಲಕ ಸೆನ್ಸೇಷನ್ ಸೃಷ್ಟಿಸಿರುವ ವಿಲಿಯಂ ಒರೋಕ್​ ಅವರನ್ನು ಸಹ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡಲಾಗಿದೆ. ಅದರಂತೆ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನ್ಯೂಝಿಲೆಂಡ್ ತಂಡ ಈ ಕೆಳಗಿನಂತಿದೆ…

ನ್ಯೂಝಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಡೆವೊನ್ ಕಾನ್ವೆ, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್, ರಚಿನ್ ರವೀಂದ್ರ, ವಿಲ್ ಯಂಗ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ನಾಥನ್ ಸ್ಮಿತ್, ಲಾಕಿ ಫರ್ಗುಸನ್, ಬೆನ್ ಸೀರ್ಸ್ , ವಿಲಿಯಂ ಒರೋಕ್, ಮ್ಯಾಟ್ ಹೆನ್ರಿ, ಮೈಕೆಲ್ ಬ್ರೇಸ್​​ವೆಲ್.

Published on: Jan 12, 2025 10:30 AM