CPL 2023: 9 ಸಿಕ್ಸರ್ ಸಹಿತ ಶತಕ ಸಿಡಿಸಿದ ಕಿವೀಸ್ ಬ್ಯಾಟರ್; ಎದುರಾಳಿ 61 ರನ್​ಗಳಿಗೆ ಆಲೌಟ್

CPL 2023: ಆರಂಭಿಕ ಗಪ್ಟಿಲ್ 58 ಎಸೆತಗಳಲ್ಲಿ 1 ಬೌಂಡರಿ ಹಾಗೂ 9 ಸಿಕ್ಸರ್​ಗಳ ನೆರವಿನಿಂದ ಅಜೇಯ 100 ರನ್ ಸಿಡಿಸಿದರು. ಈ ಪಂದ್ಯದಲ್ಲಿ 172ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಗಪ್ಟಿಲ್ ತಮ್ಮ ಟಿ20 ವೃತ್ತಿಜೀವನದ ಆರನೇ ಶತಕ ಸಿಡಿಸಿ ಮಿಂಚಿದರು. ಇನ್ನು ಗಪ್ಟಿಲ್​ಗೆ ಸಾಥ್ ನೀಡಿದ ನಾಯಕ ಪೊಲಾರ್ಡ್ ಕೇವಲ 32 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 46 ರನ್ ಸಿಡಿಸಿದರು. ಅಂತಿಮವಾಗಿ ನೈಟ್ ರೈಡರ್ಸ್ ತಂಡ 5 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿತು.

CPL 2023: 9 ಸಿಕ್ಸರ್ ಸಹಿತ ಶತಕ ಸಿಡಿಸಿದ ಕಿವೀಸ್ ಬ್ಯಾಟರ್; ಎದುರಾಳಿ 61 ರನ್​ಗಳಿಗೆ ಆಲೌಟ್
ಮಾರ್ಟಿನ್ ಗಪ್ಟಿಲ್
Follow us
ಪೃಥ್ವಿಶಂಕರ
|

Updated on: Aug 31, 2023 | 12:00 PM

ಪ್ರಸ್ತುತ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ (CPL 2023) ನ್ಯೂಜಿಲೆಂಡ್ ತಂಡದ ಮಾಜಿ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ (Martin Guptill) ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಟ್ರಿನ್‌ಬಾಗೊ ನೈಟ್ ರೈಡರ್ಸ್ ಹಾಗೂ ಬಾರ್ಬಡೋಸ್ ರಾಯಲ್ಸ್ (Trinbago Knight Riders vs Barbados Royals ) ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡ ಗಪ್ಟಿಲ್ ಅವರ ಅಜೇಯ ಶತಕದ ನೆರವಿನಿಂದಾಗಿ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬಾರ್ಬಡೋಸ್ ರಾಯಲ್ಸ್ ತಂಡ ಕೇವಲ 61 ರನ್​ಗಳಿಗೆ ಆಲೌಟ್ ಆಗುವ ಮೂಲಕ 133 ರನ್​ಗಳ ಹೀನಾಯ ಸೋಲು ಅನುಭವಿಸಿತು.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನೈಟ್ ರೈಡರ್ಸ್ ತಂಡಕ್ಕೆ ಆರಂಭಿಕರಿಬ್ಬರು 41 ರನ್​ಗಳ ಜೊತೆಯಾಟ ನೀಡಿದರು. ಆದರೆ ಮೊದಲ ವಿಕೆಟ್ ಪತನದ ಬಳಿಕ ಮೂರನೇ ಕ್ರಮಾಂಕದಲ್ಲಿ ಬಂದ ನಿಕೋಲಸ್ ಪೂರನ್ ಕೇವಲ ಒಂದಂಕಿಗೆ ಪೆವಿಲಿಯನ್ ಸೇರಿಕೊಂಡರು. ಆದರೆ ಮೂರನೇ ವಿಕೆಟ್​ಗೆ ಜೊತೆಯಾದ ನಾಯಕ ಪೊಲಾರ್ಡ್​ ಹಾಗೂ ಆರಂಭಿಕ ಗಪ್ಟಿಲ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು.

9 ಸಿಕ್ಸರ್​ಗಳ ನೆರವಿನಿಂದ ಅಜೇಯ 100 ರನ್

ಈ ನಡುವೆ ಆರಂಭಿಕ ಗಪ್ಟಿಲ್ 58 ಎಸೆತಗಳಲ್ಲಿ 1 ಬೌಂಡರಿ ಹಾಗೂ 9 ಸಿಕ್ಸರ್​ಗಳ ನೆರವಿನಿಂದ ಅಜೇಯ 100 ರನ್ ಸಿಡಿಸಿದರು. ಈ ಪಂದ್ಯದಲ್ಲಿ 172ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಗಪ್ಟಿಲ್ ತಮ್ಮ ಟಿ20 ವೃತ್ತಿಜೀವನದ ಆರನೇ ಶತಕ ಸಿಡಿಸಿ ಮಿಂಚಿದರು. ಇನ್ನು ಗಪ್ಟಿಲ್​ಗೆ ಸಾಥ್ ನೀಡಿದ ನಾಯಕ ಪೊಲಾರ್ಡ್ ಕೇವಲ 32 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 46 ರನ್ ಸಿಡಿಸಿದರು. ಅಂತಿಮವಾಗಿ ನೈಟ್ ರೈಡರ್ಸ್ ತಂಡ 5 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿತು.

View this post on Instagram

A post shared by CPL T20 (@cplt20)

61 ರನ್​ಗಳಿಗೆ ಆಲೌಟ್

ಈ ಗುರಿ ಬೆನ್ನಟ್ಟಿದ ಬಾರ್ಬಡೋಸ್ ತಂಡದ ಆರಂಭ ಅತ್ಯಂತ ಕಳಪೆಯಾಗಿತ್ತು. ಆರಂಭಿಕರಿಬ್ಬರು ಮೊದಲ ಎಸೆತದಲ್ಲಿಯೇ ವಿಕೆಟ್ ಒಪ್ಪಿಸಿ ಶೂನ್ಯಕ್ಕೆ ಪೆವಿಲಿಯನ್ ಸೇರಿಕೊಂಡರು. ತಂಡದ ಯಾವೊಬ್ಬ ಬ್ಯಾಟರ್​ಗೂ 14 ರನ್​ಗಳ ಗಡಿ ದಾಟಿ ರನ್ ಬಾರಿಸಲು ಸಾಧ್ಯವಾಗಲಿಲ್ಲ. ತಂಡದ ಪರ ಜೇಸಲ್ ಹೊಲ್ಡರ್ ಬಾರಿಸಿದ 14 ರನ್​ಗಳೇ ಅತ್ಯಧಿಕ ರನ್ ಆಯಿತು. ಅಂತಿಮವಾಗಿ ನೈಟ್ ರೈಡರ್ಸ್​ ದಾಳಿಗೆ ನಲುಗಿದ ಬಾರ್ಬಡೋಸ್ ತಂಡ ಪೂರ್ಣ 20ಓವರ್​ಗಳನ್ನು ಆಡಲು ಸಾಧ್ಯವಾಗದೆ ಕೇವಲ 12.1 ಓವರ್​ಗಳಲ್ಲಿ 61 ರನ್​ಗಳಿಗೆ ಆಲೌಟ್ ಆಯಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ