AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NZ vs PAK: ಪಾಕ್ ವಿರುದ್ಧ 61 ಎಸೆತಗಳಲ್ಲಿ ಪಂದ್ಯ ಮುಗಿಸಿದ ನ್ಯೂಝಿಲೆಂಡ್

New Zealand vs Pakistan, 1st T20I: ಪಾಕಿಸ್ತಾನ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ನ್ಯೂಝಿಲೆಂಡ್ ಶುಭಾರಂಭ ಮಾಡಿದೆ. ಕ್ರೈಸ್ಟ್‌ಚರ್ಚ್​ನಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ತಂಡ 91 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ನ್ಯೂಝಿಲೆಂಡ್ ತಂಡ 59 ಎಸೆತಗಳನ್ನು ಬಾಕಿಯಿರಿ ಚೇಸ್ ಮಾಡುವ ಮೂಲಕ ಭರ್ಜರಿ ಗೆಲುವು ದಾಖಲಿಸಿದೆ.

NZ vs PAK: ಪಾಕ್ ವಿರುದ್ಧ 61 ಎಸೆತಗಳಲ್ಲಿ ಪಂದ್ಯ ಮುಗಿಸಿದ ನ್ಯೂಝಿಲೆಂಡ್
Nz Vs PakImage Credit source: AFP
ಝಾಹಿರ್ ಯೂಸುಫ್
|

Updated on: Mar 16, 2025 | 9:54 AM

Share

ಕ್ರೈಸ್ಟ್‌ಚರ್ಚ್​ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ನ್ಯೂಝಿಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡ ನಾಯಕ ಮೈಕೆಲ್ ಬ್ರೇಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಪವರ್​ಪ್ಲೇನಲ್ಲೇ ರನ್​ಗಳಿಸಲು ಪರದಾಡಿದರು. ಪರಿಣಾಮ ಮೊದಲ 6 ಓವರ್​ಗಳಲ್ಲಿ ಮೂಡಿಬಂದ ಸ್ಕೋರ್ ಕೇವಲ 14 ರನ್ ಮಾತ್ರ. ಇತ್ತ 4 ವಿಕೆಟ್ ಕಬಳಿಸಿ ನ್ಯೂಝಿಲೆಂಡ್ ಬೌಲರ್​ಗಳು ಆರಂಭದಲ್ಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದರು.

ಈ ಹಂತದಲ್ಲಿ ಕಣಕ್ಕಿಳಿದ ನಾಯಕ ಸಲ್ಮಾನ್ ಅಲಿ ಅಘಾ 18 ರನ್​ಗಳಿಸಿದರೆ. ಖುಷ್ದಿಲ್ ಶಾ 30 ಎಸೆತಗಳಲ್ಲಿ 32 ರನ್ ಬಾರಿಸಿದರು. ಇನ್ನು 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜಹಂದಾದ್ ಖಾನ್ 17 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಪಾಕಿಸ್ತಾನ್ ತಂಡವು 18.4 ಓವರ್​ಗಳಲ್ಲಿ 91 ರನ್​ಗಳಿಸಿ ಆಲೌಟ್ ಆಯಿತು.

ನ್ಯೂಝಿಲೆಂಡ್ ಪರ ಜೇಕಬ್ ಡಫಿ 3.4 ಓವರ್​ಗಳಲ್ಲಿ 4 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಕೈಲ್ ಜೇಮಿಸನ್ 4 ಓವರ್​ಗಳಲ್ಲಿ 8 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

91 ರನ್​ಗಳ ಸುಲಭ ಗುರಿ:

120 ಎಸೆತಗಳಲ್ಲಿ 91 ರನ್​ಗಳ ಗುರಿ ಪಡೆದ ನ್ಯೂಝಿಲೆಂಡ್ ತಂಡಕ್ಕೆ ಫಿನ್ ಅಲೆನ್ ಹಾಗೂ ಟಿಮ್ ಸೀಫರ್ಟ್ ಸ್ಪೋಟಕ ಆರಂಭ ಒದಗಿಸಿದ್ದರು. ಪರಿಣಾಮ ಮೊದಲ 6 ಓವರ್​ಗಳಲೇ ತಂಡದ ಮೊತ್ತ 53 ಕ್ಕೆ ಬಂದು ನಿಂತಿತು.

ಈ ಹಂತದಲ್ಲಿ 29 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 44 ರನ್ ಬಾರಿಸಿದ್ದ ಸೀಫರ್ಟ್ ಔಟಾದರು. ಆ ಬಳಿಕ ಜೊತೆಗೂಡಿದ ಫಿನ್ ಅಲೆನ್ (29) ಹಾಗೂ ಟಿಮ್ ರಾಬಿನ್ಸನ್ (18) ಅಜೇಯರಾಗುಳಿದು 10.1 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ತಂಡ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಿಮ್ ಸೀಫರ್ಟ್ , ಫಿನ್ ಅಲೆನ್ , ಟಿಮ್ ರಾಬಿನ್ಸನ್ , ಮಾರ್ಕ್ ಚಾಪ್ಮನ್ , ಡೇರಿಲ್ ಮಿಚೆಲ್ , ಮಿಚೆಲ್ ಹೇ (ವಿಕೆಟ್ ಕೀಪರ್) , ಮೈಕೆಲ್ ಬ್ರೇಸ್‌ವೆಲ್ (ನಾಯಕ) , ಝಕಾರಿ ಫೌಲ್ಕ್ಸ್ , ಕೈಲ್ ಜೇಮಿಸನ್ , ಇಶ್ ಸೋಧಿ , ಜೇಕಬ್ ಡಫಿ.

ಇದನ್ನೂ ಓದಿ: Champions Trophy 2025: ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು ಇವರೇ

ಪಾಕಿಸ್ತಾನ್ ಪ್ಲೇಯಿಂಗ್ 11: ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್) , ಹಸನ್ ನವಾಜ್ , ಸಲ್ಮಾನ್ ಅಲಿ ಅಘಾ (ನಾಯಕ) , ಇರ್ಫಾನ್ ಖಾನ್ , ಶಾದಾಬ್ ಖಾನ್ , ಅಬ್ದುಲ್ ಸಮದ್ , ಖುಷ್ದಿಲ್ ಶಾ , ಜಹಂದಾದ್ ಖಾನ್ , ಶಾಹೀನ್ ಅಫ್ರಿದಿ , ಮೊಹಮ್ಮದ್ ಅಲಿ , ಅಬ್ರಾರ್ ಅಹ್ಮದ್.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್