NZ vs SL: ಟಿ20 ಜೊತೆಗೆ ಏಕದಿನ ಸರಣಿಯನ್ನೂ ತನ್ನದಾಗಿಸಿಕೊಂಡ ನ್ಯೂಜಿಲೆಂಡ್

NZ vs SL: ನ್ಯೂಜಿಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಲ್ಲಿ ಶ್ರೀಲಂಕಾ ತಂಡ ಸೋಲುಂಡಿದೆ. ನ್ಯೂಜಿಲೆಂಡ್ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದಿತ್ತು. ಇದೀಗ ಏಕದಿನ ಸರಣಿಯಲ್ಲೂ ನ್ಯೂಜಿಲೆಂಡ್ ಮೇಲುಗೈ ಸಾಧಿಸಿದೆ. ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ 255 ರನ್​ಗಳ ಗುರಿಯ ಪ್ರತಿಯಾಗಿ ಶ್ರೀಲಂಕಾ 142 ರನ್‌ಗಳಿಗೆ ಆಲೌಟ್ ಆಯಿತು.

NZ vs SL: ಟಿ20 ಜೊತೆಗೆ ಏಕದಿನ ಸರಣಿಯನ್ನೂ ತನ್ನದಾಗಿಸಿಕೊಂಡ ನ್ಯೂಜಿಲೆಂಡ್
ನ್ಯೂಜಿಲೆಂಡ್- ಶ್ರೀಲಂಕಾ
Follow us
ಪೃಥ್ವಿಶಂಕರ
|

Updated on: Jan 08, 2025 | 5:22 PM

ಟಿ20 ಹಾಗೂ ಏಕದಿನ ಸರಣಿಗಾಗಿ ನ್ಯೂಜಿಲೆಂಡ್ ಪ್ರವಾಸ ಮಾಡಿದ್ದ ಶ್ರೀಲಂಕಾ ತಂಡ ಖಾಲಿ ಕೈಯಲ್ಲಿ ತವರಿಗೆ ವಾಪಸ್ಸಾಗಬೇಕಾಗಿದೆ. ಈ ಮೊದಲು ಉಭಯ ತಂಡಗಳ ನಡುವೆ ನಡೆದಿದ್ದ ಟಿ20 ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದ್ದ ನ್ಯೂಜಿಲೆಂಡ್ ತಂಡ, ಇದೀಗ ನಡೆಯುತ್ತಿರುವ ಏಕದಿನ ಸರಣಿಯನ್ನು ಸಹ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 255 ರನ್ ಕಲೆಹಾಕಿದರೆ, ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ 142 ರನ್​ಗಳಿಗೆ ಆಲೌಟ್ ಆಗುವ ಮೂಲಕ 113 ರನ್​ಗಳಿಂದ ಸೋಲೊಪ್ಪಿಕೊಂಡಿದಲ್ಲದೆ ಸರಣಿಯನ್ನು ಕಳೆದುಕೊಂಡಿತು.

ಕಿವೀಸ್​ಗೆ ರಚಿನ್- ಮಾರ್ಕ್​ ಆಸರೆ

ಉಭಯ ತಂಡಗಳ ನಡುವೆ ಇಂದು ನಡೆದ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಹೀಗಾಗಿ ಪಂದ್ಯವನ್ನು ತಲಾ 37 ಓವರ್​ಗಳಿಗೆ ನಿಗದಿಪಡಿಸಲಾಯಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 31 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡರು. ಇದಾದ ನಂತರ ರಚಿನ್ ರವೀಂದ್ರ ಹಾಗೂ ಮಾರ್ಕ್ ಚಾಪ್ಮನ್ ಜೊತೆ 112 ರನ್​ಗಳ ಜೊತೆಯಾಟ ನೀಡಿದರು.

ಈ ವೇಳೆ ರಚಿನ್ 79 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರೆ, ಚಾಪ್ಮನ್ 63 ರನ್​ಗಳ ಕಾಣಿಕೆ ನೀಡಿದರು. ಆದರೆ, ಇದಾದ ಬಳಿಕ ಕಿವೀಸ್ ತಂಡ ಸತತ ಅಂತರದಲ್ಲಿ 3 ವಿಕೆಟ್ ಕಳೆದುಕೊಂಡಿತು.ನಂತರ ಡ್ಯಾರಿಲ್ ಮಿಚೆಲ್ 38 ರನ್, ಗ್ಲೆನ್ ಫಿಲಿಪ್ಸ್ 22 ರನ್ ಮತ್ತು ನಾಯಕ ಮಿಚೆಲ್ ಸ್ಯಾಂಟ್ನರ್ 20 ರನ್ ಗಳಿಸಿ ತಂಡವನ್ನು 255 ರನ್​ಗಳ ಉತ್ತಮ ಮೊತ್ತಕ್ಕೆ ಕೊಂಡೊಯ್ದರು.

ಲಂಕಾ ಪಡೆಗೆ ಆರಂಭಿಕ ಆಘಾತ

ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡದ ಅಗ್ರ ಕ್ರಮಾಂಕವನ್ನು ಕಿವೀಸ್ ವೇಗಿಗಳಾದ ಜಾಕೋಬ್ ಡಫ್ಫಿ, ಮ್ಯಾಚ್ ಹೆನ್ರಿ ಮತ್ತು ವಿಲಿಯಂ ಒ’ರೂರ್ಕ್ ಒಟ್ಟಾಗಿ ಬೇಟೆಯಾಡಿದರು. ಹೀಗಾಗಿ ಶ್ರೀಲಂಕಾ ತಂಡ ಕೇವಲ 22 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿತು. 79 ರನ್‌ಗಳಾಗುವಷ್ಟರಲ್ಲಿ ಅರ್ಧದಷ್ಟು ತಂಡ ಪೆವಿಲಿಯನ್‌ ಸೇರಿಕೊಂಡಿತು. ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಕಮಿಂದು ಮೆಂಡಿಸ್ 64 ರನ್ ಕಲೆಹಾಕಿದರಾದರೂ ತಂಡದ ಸೋಲು ತಪ್ಪಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯಾವುದೇ ಬ್ಯಾಟ್ಸ್‌ಮನ್ ಅವರಿಗೆ ಸಾಥ್ ನೀಡಲಿಲ್ಲ. ಅಂತಿಮವಾಗಿ ಇಡೀ ತಂಡ 142ರನ್​ಗಳಿಗೆ ಆಲೌಟ್ ಆಯಿತು. ಕಿವೀಸ್ ಪರ ಓ’ರೂರ್ಕ್ ಗರಿಷ್ಠ 3 ಮತ್ತು ಡಫಿ 2 ವಿಕೆಟ್ ಪಡೆದರು. ಉಳಿದಂತೆ ಹೆನ್ರಿ, ನಾಥನ್ ಸ್ಮಿತ್ ಮತ್ತು ಸ್ಯಾಂಟ್ನರ್ ತಲಾ 1 ವಿಕೆಟ್ ಪಡೆದರು.

ತೀಕ್ಷಣ ಹ್ಯಾಟ್ರಿಕ್ ಸಾಧನೆ

ಈ ಪಂದ್ಯದಲ್ಲಿ ಮಹಿಷ್ ತೀಕ್ಷಣ 8 ಓವರ್ ಬೌಲ್ ಮಾಡಿ 44 ರನ್ ನೀಡಿ ಒಟ್ಟು 4 ವಿಕೆಟ್ ಪಡೆದರು. ಇದರಲ್ಲಿ ಹ್ಯಾಟ್ರಿಕ್ ಮೂಲಕ 3 ವಿಕೆಟ್ ಪಡೆದರು. ಮಹಿಷ್ ತೀಕ್ಷಣ ಅವರ ಹ್ಯಾಟ್ರಿಕ್‌ಗೆ ಬಲಿಯಾದ ಮೊದಲ ಬ್ಯಾಟ್ಸ್‌ಮನ್ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್. ಅವರು 15 ಎಸೆತಗಳಲ್ಲಿ 20 ರನ್ ಗಳಿಸಿ ಔಟಾದರು. ಆ ನಂತರ, ತೀಕ್ಷಣ ನಾಥನ್ ಸ್ಮಿತ್ ಅವರನ್ನು ಔಟ್ ಮಾಡಿದರು. ಈ ಎರಡು ವಿಕೆಟ್‌ಗಳ ನಂತರ, ಅವರು ಮುಂದಿನ ಓವರ್‌ನ ಮೊದಲ ಎಸೆತದಲ್ಲಿ ಮ್ಯಾಟ್ ಹೆನ್ರಿಯನ್ನು ಔಟ್ ಮಾಡುವ ಮೂಲಕ ತಮ್ಮ ಹ್ಯಾಟ್ರಿಕ್ ಪೂರ್ಣಗೊಳಿಸಿದರು. ಆದರೆ, ಇದು ಅವರ ತಂಡಕ್ಕೆ ಹೆಚ್ಚು ಪ್ರಯೋಜನವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?