AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NZ vs ENG: 42 ವರ್ಷಗಳ ನಂತರ ನ್ಯೂಜಿಲೆಂಡ್ ವಿರುದ್ಧ ಅವಮಾನಕರ ಸೋಲಿಗೆ ಕೊರಳೊಡ್ಡಿದ ಇಂಗ್ಲೆಂಡ್

New Zealand vs England ODI series: ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ನ್ಯೂಜಿಲೆಂಡ್ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಮೂಲಕ ಇತಿಹಾಸ ನಿರ್ಮಿಸಿದೆ. 42 ವರ್ಷಗಳ ನಂತರ ಇಂಗ್ಲೆಂಡ್ ತಂಡವನ್ನು ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದ ಕಿವೀಸ್, ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 222 ರನ್ ಗಳ ಗುರಿ ಬೆನ್ನತ್ತಿ 8 ವಿಕೆಟ್ ನಷ್ಟಕ್ಕೆ ಜಯ ಸಾಧಿಸಿತು. ಬೌಲರ್​ಗಳ ಮಿಂಚಿನ ಪ್ರದರ್ಶನ ಮತ್ತು ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಜವಾಬ್ದಾರಿಯುತ ಆಟ ಈ ಜಯಕ್ಕೆ ಕಾರಣವಾಯಿತು.

NZ vs ENG: 42 ವರ್ಷಗಳ ನಂತರ ನ್ಯೂಜಿಲೆಂಡ್ ವಿರುದ್ಧ ಅವಮಾನಕರ ಸೋಲಿಗೆ ಕೊರಳೊಡ್ಡಿದ ಇಂಗ್ಲೆಂಡ್
Nz Vs Eng
ಪೃಥ್ವಿಶಂಕರ
|

Updated on:Nov 01, 2025 | 3:51 PM

Share

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ (New Zealand vs England) ನಡುವೆ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆತಿಥೇಯ ನ್ಯೂಜಿಲೆಂಡ್ 3-0 ಅಂತರದಿಂದ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ವೆಲ್ಲಿಂಗ್ಟನ್‌ನ ಸ್ಕೈ ಕ್ರೀಡಾಂಗಣದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 222 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಕೂಡ ಗೆಲುವಿಗಾಗಿ ಸಾಕಷ್ಟು ಶ್ರಮಿಸಬೇಕಾಯಿತು. ಅಂತಿಮವಾಗಿ ಕಿವೀಸ್ ತಂಡ 8 ವಿಕೆಟ್‌ಗಳನ್ನು ಕಳೆದುಕೊಂಡು 45ನೇ ಓವರ್​ನಲ್ಲಿ ಜಯದ ನಗೆ ಬೀರಿತು. ಇದರೊಂದಿಗೆ, ಕಿವೀಸ್ ತಂಡವು ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು 3-0 ಅಂತರದಿಂದ ಸೋಲಿಸಿ ಕ್ಲೀನ್ ಸ್ವೀಪ್ ಸಾಧಿಸಿತು. ಗಮನಾರ್ಹವಾಗಿ, ನ್ಯೂಜಿಲೆಂಡ್ 42 ವರ್ಷಗಳ ನಂತರ ಏಕದಿನ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡವನ್ನು ಕ್ಲೀನ್ ಸ್ವೀಪ್ ಮಾಡಿದ ದಾಖಲೆ ನಿರ್ಮಿಸಿದೆ. ಈ ಹಿಂದೆ 1983 ರಲ್ಲಿ ಇಂಗ್ಲೆಂಡ್ ತಂಡವನ್ನು ನ್ಯೂಜಿಲೆಂಡ್ ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿತ್ತು.

ಇಂಗ್ಲೆಂಡ್ ಕೈಹಿಡಿಯದ ಬ್ಯಾಟಿಂಗ್ ವಿಭಾಗ

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲೆಂಡ್, ಇಂಗ್ಲೆಂಡ್ ತಂಡವನ್ನು ಆರಂಭದಲ್ಲೇ ಕಟ್ಟಿಹಾಕಿತು. ಇಂಗ್ಲೆಂಡ್ ತಂಡದ ಅಗ್ರ ನಾಲ್ವರು ಬ್ಯಾಟ್ಸ್‌ಮನ್‌ಗಳು ಕೇವಲ 31 ರನ್‌ಗಳಿಗೆ ಪೆವಿಲಿಯನ್ ಸೇರಿಕೊಂಡರು. ಆ ನಂತರ 102 ರನ್‌ ತಲುಪುವಷ್ಟರಲ್ಲಿ ತಂಡದ ಏಳು ವಿಕೆಟ್‌ಗಳು ಪತನಗೊಂಡವು. ಆದಾಗ್ಯೂ, ಜೇಮೀ ಓವರ್ಟನ್ 68 ರನ್‌ಗಳ ನಿರ್ಣಾಯಕ ಇನ್ನಿಂಗ್ಸ್ ಆಡುವ ಮೂಲಕ ತಂಡವು 200 ರನ್‌ಗಳ ಗಡಿ ದಾಟಲು ಸಹಾಯ ಮಾಡಿದರು. ಉಳಿದಂತೆ ಬ್ರೈಡನ್ ಕಾರ್ಸ್ 36 ರನ್​ ಮತ್ತು ಜೋಸ್ ಬಟ್ಲರ್ 38 ರನ್‌ಗಳ ಕೊಡುಗೆ ನೀಡಿದರು. ಅಂತಿಮವಾಗಿ ಇಂಗ್ಲೆಂಡ್ 40.2 ಓವರ್‌ಗಳಲ್ಲಿ 222 ರನ್‌ಗಳಿಗೆ ಆಲೌಟ್ ಆಯಿತು.

ಮತ್ತೊಂದೆಡೆ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ನ್ಯೂಜಿಲೆಂಡ್‌ನ ವೇಗಿಗಳಾದ ಬ್ಲೇರ್ ಟಿಕ್ನರ್ 10 ಓವರ್‌ಗಳಲ್ಲಿ 64 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದರೆ, ಜಾಕೋಬ್ ಡಫಿ 3 ವಿಕೆಟ್‌ಗಳನ್ನು ಪಡೆದರು. ಜ್ಯಾಕ್ ಫೌಲ್ಕ್ಸ್ ಕೂಡ ಎರಡು ವಿಕೆಟ್ ಉರುಳಿಸಿದರೆ ಮಿಚೆಲ್ ಸ್ಯಾಂಟ್ನರ್ 1 ವಿಕೆಟ್ ಪಡೆದರು.

ನ್ಯೂಜಿಲೆಂಡ್​ಗೆ 3-0 ಅಂತರದ ಜಯ

223 ರನ್​ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಉತ್ತಮ ಆರಂಭವನ್ನು ಪಡೆದುಕೊಂಡಿತು. ಮೊದಲ ವಿಕೆಟ್​ಗೆ 78 ರನ್​ಗಳ ಜೊತೆಯಾಟ ಸಿಕ್ಕಿತು. ಆದರೆ, ಆ ನಂತರ ತಂಡದ ಇನ್ನಿಂಗ್ಸ್ ಕುಸಿಯಿತು. ವಿಕೆಟ್​ಗಳು ಒಂದರ ನಂತರ ಒಂದರಂತೆ ಬಿದ್ದವು. ಹೀಗಾಗಿ ನ್ಯೂಜಿಲೆಂಡ್ 196 ರನ್​ಗಳಿಗೆ 8 ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಅವಧಿಯಲ್ಲಿ ತಂಡಕ್ಕೆ ಗೆಲ್ಲಲು ಇನ್ನೂ 27 ರನ್​ಗಳು ಬೇಕಾಗಿದ್ದವು. ಆದಾಗ್ಯೂ, ಜ್ಯಾಕ್ ಫೌಲ್ಕ್ಸ್ ಮತ್ತು ಬ್ಲೇರ್ ಟಿಕ್ನರ್ ಉತ್ತಮ ಜೊತೆಯಾಟವನ್ನಾಡಿ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಜ್ಯಾಕ್ ಫೌಲ್ಕ್ಸ್ 14 ರನ್ ಮತ್ತು ಬ್ಲೇರ್ ಟಿಕ್ನರ್ 18 ರನ್ ಬಾರಿಸಿ ಅಜೇಯರಾಗಿ ಉಳಿದರು. ಇವರಿಗೂ ಮೊದಲು, ರಚಿನ್ ರವೀಂದ್ರ 46 ಮತ್ತು ಡ್ಯಾರಿಲ್ ಮಿಚೆಲ್ 44 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Sat, 1 November 25

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ