ಟೀಮ್ ಇಂಡಿಯಾ ಪಾಲಿಗೆ ನ್ಯೂಝಿಲೆಂಡ್ ಡೇಂಜರಸ್..!

India vs New Zealand: ಟೀಮ್ ಇಂಡಿಯಾ ಅಕ್ಟೋಬರ್ 22 ರಂದು ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಇಲ್ಲಿ ಆಸ್ಟ್ರೇಲಿಯಾಗಿಂತ ಭಾರತದ ಪಾಲಿಗೆ ನ್ಯೂಝಿಲೆಂಡ್ ಡೇಂಜರಸ್ ಎನ್ನಬಹುದು. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಪಡೆ ವಿರುದ್ಧ ಟೀಮ್ ಇಂಡಿಯಾ ಗೆದ್ದು 20 ವರ್ಷಗಳೇ ಕಳೆದಿವೆ.

ಟೀಮ್ ಇಂಡಿಯಾ ಪಾಲಿಗೆ ನ್ಯೂಝಿಲೆಂಡ್ ಡೇಂಜರಸ್..!
India vs New Zealand
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 03, 2023 | 5:01 PM

ಏಕದಿನ ವಿಶ್ವಕಪ್​ ಟೂರ್ನಿ ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಇತ್ತ ಬಹುತೇಕ ತಂಡಗಳು ಸಿದ್ಧೆತಗಳಲ್ಲಿ ತೊಡಗಿಸಿಕೊಂಡಿದ್ದರೆ, ಅತ್ತ ಅಕ್ಟೋಬರ್ 5 ರಂದು ಮೊದಲ ಪಂದ್ಯವಾಡಬೇಕಿರುವ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಅಹಮದಾಬಾದ್​ಗೆ ಬಂದಿಳಿದಿದೆ. ಇನ್ನು ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವಾಡಲಿರುವುದು ಅಕ್ಟೋಬರ್ 8 ರಂದು. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತದ ಎದುರಾಳಿ ಆಸ್ಟ್ರೇಲಿಯಾ. ಅಂದರೆ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾಗೆ ಕಠಿಣ ಸವಾಲು ಎದುರಾಗುವುದು ಖಚಿತ.

ಏಕೆಂದರೆ ಏಕದಿನ ವಿಶ್ವಕಪ್​ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 12 ಪಂದ್ಯಗಳನ್ನಾಡಿದೆ. ಈ ವೇಳೆ 8 ಮ್ಯಾಚ್​ಗಳಲ್ಲಿ ಆಸೀಸ್ ಪಡೆ ಗೆದ್ದಿದೆ. ಇದಾಗ್ಯೂ 2011 ರಲ್ಲಿ, 2019 ರ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾವನ್ನು ಬಗ್ಗು ಬಡಿಯುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಹೀಗಾಗಿ ಭಾರತದ ಗೆಲುವನ್ನು ನಿರೀಕ್ಷಿಸಬಹುದು.

ಆದರೆ ಮತ್ತೊಂದೆಡೆ ಟೀಮ್ ಇಂಡಿಯಾ ಅಕ್ಟೋಬರ್ 22 ರಂದು ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಇಲ್ಲಿ ಆಸ್ಟ್ರೇಲಿಯಾಗಿಂತ ಭಾರತದ ಪಾಲಿಗೆ ನ್ಯೂಝಿಲೆಂಡ್ ಡೇಂಜರಸ್ ಎನ್ನಬಹುದು. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಪಡೆ ವಿರುದ್ಧ ಟೀಮ್ ಇಂಡಿಯಾ ಗೆದ್ದು 20 ವರ್ಷಗಳೇ ಕಳೆದಿವೆ.

ಅಂದರೆ ಭಾರತ ತಂಡ ಕೊನೆಯ ಬಾರಿಗೆ ನ್ಯೂಝಿಲೆಂಡ್ ವಿರುದ್ಧ ಗೆದ್ದಿರುವುದು 2003 ರಲ್ಲಿ. ಇದಾದ ಬಳಿಕ ನಡೆದ ಏಕದಿನ ವಿಶ್ವಕಪ್, ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಭಾರತದ ವಿರುದ್ಧ ನ್ಯೂಝಿಲೆಂಡ್ ಮೇಲುಗೈ ಸಾಧಿಸುತ್ತಾ ಬಂದಿದೆ.

  • 2007 ರ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದರೂ, ಆ ಟೂರ್ನಿಯಲ್ಲಿ ನ್ಯೂಝಿಲೆಂಡ್ ವಿರುದ್ಧ 10 ರನ್​ಗಳಿಂದ ಸೋಲನುಭವಿಸಿತ್ತು.
  • 2016 ರ ಟಿ20 ವಿಶ್ವಕಪ್​ನಲ್ಲೂ ಭಾರತಕ್ಕೆ ಸೋಲುಣಿಸುವಲ್ಲಿ ನ್ಯೂಝಿಲೆಂಡ್ ಯಶಸ್ವಿಯಾಗಿತ್ತು.
  • 2019 ರ ಏಕದಿನ ವಿಶ್ವಕಪ್​ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಭಾರತ 18 ರನ್​ಗಳಿಂದ ಸೋಲೊಪ್ಪಿಕೊಂಡಿತ್ತು.
  • 2021 ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಭಾರತದ ವಿರುದ್ಧ ನ್ಯೂಝಿಲೆಂಡ್ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.
  • 2021 ರ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ನ್ಯೂಝಿಲೆಂಡ್ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತ್ತು.

ಇದೀಗ 2023 ರ ವಿಶ್ವಕಪ್​ನಲ್ಲಿ ಉಭಯ ತಂಡಗಳು ಅಕ್ಟೋಬರ್ 22 ರಂದು ಮುಖಾಮುಖಿಯಾಗಲಿದೆ. ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ದೀರ್ಘಕಾಲದ ತನ್ನ ಸೋಲಿನ ಸರಪಳಿ ಕಳಚಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ಇದನ್ನೂ ಓದಿ: ICC ODI World Cup 2023: 10 ತಂಡಗಳ ಹೊಸ ಜೆರ್ಸಿ ಅನಾವರಣ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ