ನ್ಯೂಝಿಲೆಂಡ್ ಸೆಮಿಫೈನಲ್​ನಲ್ಲಿ ಗೆದ್ದಿದ್ದು ಕೇವಲ 3 ಬಾರಿ ಮಾತ್ರ..ಆದರೆ

India vs New Zealand: ಕಳೆದ ಬಾರಿಯ ರನ್ನರ್ ನ್ಯೂಝಿಲೆಂಡ್ ಕೂಡ ಮತ್ತೊಮ್ಮೆ ಫೈನಲ್​ಗೇರುವ ತುಟಿತದಲ್ಲಿದೆ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ, ನ್ಯೂಝಿಲೆಂಡ್ ತಂಡವು ಸೆಮಿಫೈನಲ್​ನಲ್ಲಿ ಮುಗ್ಗರಿಸುವ ಹಣೆಪಟ್ಟಿ ಹೊಂದಿರುವುದು.

ನ್ಯೂಝಿಲೆಂಡ್ ಸೆಮಿಫೈನಲ್​ನಲ್ಲಿ ಗೆದ್ದಿದ್ದು ಕೇವಲ 3 ಬಾರಿ ಮಾತ್ರ..ಆದರೆ
New Zealand
Follow us
TV9 Web
| Updated By: ಝಾಹಿರ್ ಯೂಸುಫ್

Updated on:Nov 13, 2023 | 10:30 PM

ಏಕದಿನ ವಿಶ್ವಕಪ್​ನ ರಣರೋಚಕ ನಾಕೌಟ್ ಪಂದ್ಯಕ್ಕಾಗಿ ಕ್ಷಣಗಣನೆ ಶುರುವಾಗಿದೆ. ನವೆಂಬರ್​ 15 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇತ್ತ 2011 ರ ಬಳಿಕ ಫೈನಲ್​ಗೇರದ ಟೀಮ್ ಇಂಡಿಯಾ ಅಂತಿಮ ಘಟ್ಟಕ್ಕೆ ತಲುಪುವ ವಿಶ್ವಾಸದಲ್ಲಿದೆ.

ಅತ್ತ ಕಳೆದ ಬಾರಿಯ ರನ್ನರ್ ನ್ಯೂಝಿಲೆಂಡ್ ಕೂಡ ಮತ್ತೊಮ್ಮೆ ಫೈನಲ್​ಗೇರುವ ತುಟಿತದಲ್ಲಿದೆ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ, ನ್ಯೂಝಿಲೆಂಡ್ ತಂಡವು ಸೆಮಿಫೈನಲ್​ನಲ್ಲಿ ಮುಗ್ಗರಿಸುವ ಹಣೆಪಟ್ಟಿ ಹೊಂದಿರುವುದು.

ಅಂದರೆ ಐಸಿಸಿ ಟೂರ್ನಿಗಳಲ್ಲಿ 12 ಬಾರಿ ಸೆಮಿಫೈನಲ್​ಗೇರಿರುವ ಕಿವೀಸ್ ಪಡೆ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಇನ್ನುಳಿದ 9 ನಾಕೌಟ್ ಪಂದ್ಯಗಳಲ್ಲಿ ಮಕಾಡೆ ಮಲಗಿದೆ. ಆದರೆ ಟೀಮ್ ಇಂಡಿಯಾ ವಿರುದ್ಧ ಆಡಿದ ಏಕದಿನ ವಿಶ್ವಕಪ್ ಸೆಮಿಫೈನಲ್​ನಲ್ಲಿ ಜಯ ಸಾಧಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. 2019 ರಲ್ಲಿ ವಿಶ್ವಕಪ್​ ವಿಜೇತರಾಗುವ ಫೇವರೇಟ್ ಎನಿಸಿಕೊಂಡಿದ್ದ ಟೀಮ್ ಇಂಡಿಯಾವನ್ನು ಸೆಮಿಫೈನಲ್​ನಲ್ಲಿ ಕಿವೀಸ್ ಪಡೆ ಸೋಲಿಸಿತ್ತು. ಅಷ್ಟೇ ಅಲ್ಲದೆ ಐಸಿಸಿ ಟೂರ್ನಿಗಳಲ್ಲಿ ಭಾರತದ ವಿರುದ್ಧ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ.

ಇದೀಗ 4 ವರ್ಷಗಳ ಬಳಿಕ ಮತ್ತೆ ಉಭಯ ತಂಡಗಳು ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗುತ್ತಿದೆ. ಅತ್ತ ಕಳೆದ ಬಾರಿ ಭಾರತಕ್ಕೆ ಸೋಲುಣಿಸಿದ ಆತ್ಮ ವಿಶ್ವಾಸದಲ್ಲಿ ನ್ಯೂಝಿಲೆಂಡ್ ಕಣಕ್ಕಿಳಿಯಲಿದೆ. ಇತ್ತ ಕಳೆದ ಬಾರಿಯ ಸೆಮಿಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಅದರಂತೆ 4 ವರ್ಷಗಳ ಹಳೆಯ ಸೋಲಿನ ಸೇಡನ್ನು ತೀರಿಸಿ ಭಾರತ ಲೆಕ್ಕ ಚುಕ್ತಾ ಮಾಡಲಿದೆಯಾ ಕಾದು ನೋಡಬೇಕಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: ದಾಖಲೆಗಳ ಸರದಾರ ಕಿಂಗ್ ಕೊಹ್ಲಿ ಮುಂದಿದೆ ಮೂರು ವಿಶ್ವ ದಾಖಲೆಗಳು

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

Published On - 10:29 pm, Mon, 13 November 23

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ