AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಝಿಲೆಂಡ್ ರಣತಂತ್ರ: ಭಾರತದ ವಿರುದ್ಧದ ಸರಣಿಗೆ 2 ವಿಭಿನ್ನ ತಂಡ ಪ್ರಕಟ

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಅಕ್ಟೋಬರ್ 22 ರಿಂದ ಶುರುವಾಗಲಿದೆ. ಕಿವೀಸ್ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ 5 ಟಿ20, 5 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳು ಜರುಗಲಿವೆ. ಇದಕ್ಕಾಗಿ ಇದೀಗ ನ್ಯೂಝಿಲೆಂಡ್ ಕ್ರಿಕೆಟ್​ ಬೋರ್ಡ್​ ಏಕದಿನ ತಂಡವನ್ನು ಪ್ರಕಟಿಸಿದೆ.

ನ್ಯೂಝಿಲೆಂಡ್ ರಣತಂತ್ರ: ಭಾರತದ ವಿರುದ್ಧದ ಸರಣಿಗೆ 2 ವಿಭಿನ್ನ ತಂಡ ಪ್ರಕಟ
New Zealand Image Credit source: NCB
ಝಾಹಿರ್ ಯೂಸುಫ್
|

Updated on: Oct 11, 2026 | 9:35 AM

Share

ಭಾರತದ ವಿರುದ್ಧದ ಏಕದಿನ ಸರಣಿಗೆ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಒಟ್ಟು ಐದು ಪಂದ್ಯಗಳ ಈ ಸರಣಿಯ ಮೊದಲ ಮೂರು ಪಂದ್ಯಗಳ ಮುಕ್ತಾಯದ ನಂತರ ಕಿವೀಸ್ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಭಾರತದ ವಿರುದ್ಧದ ಮುಂಬರುವ ಟೆಸ್ಟ್ ಸರಣಿಗೆ ಸಿದ್ಧರಾಗಲು ಹಿರಿಯ ಆಟಗಾರರು ಕೊನೆಯ ಎರಡು ಏಕದಿನ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಹೀಗಾಗಿ, ಮೊದಲ ಮೂರು ಪಂದ್ಯಗಳಿಗೆ ಅಲಭ್ಯರಾಗಿರುವ ಫಿನ್ ಅಲೆನ್, ಲಾಕಿ ಫರ್ಗುಸನ್ ಮತ್ತು ಟಿಮ್ ಸೈಫರ್ಟ್​ ಸೇರಿದಂತೆ ಒಟ್ಟು ಏಳು ಜನ ಆಟಗಾರರು ನಾಲ್ಕನೇ ಮತ್ತು ಐದನೇ ಪಂದ್ಯಗಳಿಗಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಕಿವೀಸ್ ರಣತಂತ್ರ:

ಭಾರತ ಹಾಗೂ ನ್ಯೂಝಿಲೆಂಡ್ ನಡುವಿನ ಐದು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 4, 2026 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ನ್ಯೂಝಿಲೆಂಡ್ ಮುಖ್ಯ ತರಬೇತುದಾರ ರಾಬ್ ವಾಲ್ಟರ್ 21 ಆಟಗಾರರ ತಂಡವನ್ನು ಪ್ರಕಟಿಸಿದ್ದಾರೆ. ಟೆಸ್ಟ್ ಸರಣಿಗೆ ಸಿದ್ಧರಾಗಲು ಹಿರಿಯ ಆಟಗಾರರು 3ನೇ ಏಕದಿನ ಪಂದ್ಯದ ಬಳಿಕ ತಂಡದಿಂದ ಹೊರಹೋಗಲಿದ್ದು, ಅವರ ಸ್ಥಾನಕ್ಕೆ 4 ಮತ್ತು 5 ನೇ ಪಂದ್ಯಗಳಿಗೆ ಈ ಮೂವರು ತಾರೆಯರು ಎಂಟ್ರಿ ಕೊಡಲಿದ್ದಾರೆ.

ಪ್ರಮುಖ ಆಟಗಾರರ ವಾಪಸಾತಿ:

  • ಫಿನ್ ಅಲೆನ್ ಮತ್ತು ಲಾಕಿ ಫರ್ಗುಸನ್: ಫ್ರಾಂಚೈಸಿ ಕ್ರಿಕೆಟ್‌ಗೆ ಆದ್ಯತೆ ನೀಡಿ ನ್ಯೂಝಿಲೆಂಡ್ ಕೇಂದ್ರೀಯ ಒಪ್ಪಂದದಿಂದ ಹೊರಗುಳಿದಿದ್ದ ಫಿನ್ ಅಲೆನ್ ಹಾಗೂ ಲಾಕಿ ಫರ್ಗುಸನ್ 2023 ರ ನಂತರ ಮೊದಲ ಬಾರಿಗೆ ಏಕದಿನ ತಂಡವನ್ನು ಸೇರಿಕೊಳ್ಳುತ್ತಿದ್ದಾರೆ.
  • ಟಿಮ್ ಸೈಫರ್ಟ್​: ಕಳೆದ 18 ತಿಂಗಳುಗಳಿಂದ ಏಕದಿನ ಕ್ರಿಕೆಟ್‌ನಿಂದ ದೂರವಿದ್ದ ವಿಕೆಟ್ ಕೀಪರ್ ಬ್ಯಾಟರ್ ಟಿಮ್ ಸೈಫರ್ಟ್​ ಈಗ ಮತ್ತೊಮ್ಮೆ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.
  • ರಚಿನ್ ರವೀಂದ್ರ: ಹೆಗಲ ಗಾಯದಿಂದಾಗಿ ಟಿ20 ಸರಣಿಯಿಂದ ಹೊರಗುಳಿದಿದ್ದ ಸ್ಟಾರ್ ಆಲ್ ರೌಂಡರ್ ರಚಿನ್ ರವೀಂದ್ರ ಅವರು ಏಕದಿನ ಸರಣಿಯ ಮೊದಲ 3 ಪಂದ್ಯಗಳಿಗೆ ಲಭ್ಯವಿರಲಿದ್ದಾರೆ.

ನ್ಯೂಝಿಲೆಂಡ್​ ಏಕದಿನ ತಂಡದ ವಿಭಜನೆ ಹೀಗಿದೆ:

  • ಸರಣಿಯ ಎಲ್ಲಾ 5 ಪಂದ್ಯಗಳಿಗೂ ಲಭ್ಯವಿರುವವರು: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಜೇಕಬ್ ಡಫಿ, ವಿಲ್ ಯಂಗ್, ಬ್ಲೇರ್ ಟಿಕ್ನರ್.
  • ಮೊದಲ 3 ಪಂದ್ಯಗಳಿಗೆ ಮಾತ್ರ: ಡೆವೊನ್ ಕಾನ್ವೆ, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್, ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್.
  • ಕೊನೆಯ 2 ಪಂದ್ಯಗಳಿಗೆ ಮಾತ್ರ: ಫಿನ್ ಅಲೆನ್, ಲಾಕಿ ಫರ್ಗುಸನ್, ಟಿಮ್ ಸೈಫರ್ಟ್​, ಕ್ರಿಸ್ಟಿಯನ್ ಕ್ಲಾರ್ಕ್, ಮ್ಯಾಟ್ ಫಿಶರ್, ಮಿಚ್ ಹೇ, ನಿಕ್ ಕೆಲ್ಲಿ.

ನ್ಯೂಝಿಲೆಂಡ್ ಏಕದಿನ ತಂಡ (ಮೊದಲ 3 ಪಂದ್ಯಗಳಿಗೆ): ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಜೇಕಬ್ ಡಫಿ, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಬ್ಲೇರ್ ಟಿಕ್ನರ್, ವಿಲ್ ಯಂಗ್.

ಇದನ್ನೂ ಓದಿ: ರಾಬಿನ್ ಉತ್ತಪ್ಪ ಸಿಡಿಲಬ್ಬರ… ಆದರೂ ಸೋತ ‘ಇಂಡಿಯಾ’

ನ್ಯೂಝಿಲೆಂಡ್ ಏಕದಿನ ತಂಡ (ಕೊನೆಯ 2 ಪಂದ್ಯಗಳಿಗೆ): ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಕ್ರಿಸ್ಟಿಯನ್ ಕ್ಲಾರ್ಕ್, ಜೇಕಬ್ ಡಫಿ, ಮ್ಯಾಟ್ ಫಿಶರ್, ಮಿಚ್ ಹೇ (ವಿಕೆಟ್ ಕೀಪರ್), ಟಿಮ್ ಸೈಫರ್ಟ್ (ವಿಕೆಟ್ ಕೀಪರ್), ನಿಕ್ ಕೆಲ್ಲಿ, ಬ್ಲೇರ್ ಟಿಕ್ನರ್, ವಿಲ್ ಯಂಗ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’