
ಭಾರತದ ವಿರುದ್ಧದ ಏಕದಿನ ಸರಣಿಗೆ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಒಟ್ಟು ಐದು ಪಂದ್ಯಗಳ ಈ ಸರಣಿಯ ಮೊದಲ ಮೂರು ಪಂದ್ಯಗಳ ಮುಕ್ತಾಯದ ನಂತರ ಕಿವೀಸ್ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಭಾರತದ ವಿರುದ್ಧದ ಮುಂಬರುವ ಟೆಸ್ಟ್ ಸರಣಿಗೆ ಸಿದ್ಧರಾಗಲು ಹಿರಿಯ ಆಟಗಾರರು ಕೊನೆಯ ಎರಡು ಏಕದಿನ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಹೀಗಾಗಿ, ಮೊದಲ ಮೂರು ಪಂದ್ಯಗಳಿಗೆ ಅಲಭ್ಯರಾಗಿರುವ ಫಿನ್ ಅಲೆನ್, ಲಾಕಿ ಫರ್ಗುಸನ್ ಮತ್ತು ಟಿಮ್ ಸೈಫರ್ಟ್ ಸೇರಿದಂತೆ ಒಟ್ಟು ಏಳು ಜನ ಆಟಗಾರರು ನಾಲ್ಕನೇ ಮತ್ತು ಐದನೇ ಪಂದ್ಯಗಳಿಗಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಭಾರತ ಹಾಗೂ ನ್ಯೂಝಿಲೆಂಡ್ ನಡುವಿನ ಐದು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 4, 2026 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ನ್ಯೂಝಿಲೆಂಡ್ ಮುಖ್ಯ ತರಬೇತುದಾರ ರಾಬ್ ವಾಲ್ಟರ್ 21 ಆಟಗಾರರ ತಂಡವನ್ನು ಪ್ರಕಟಿಸಿದ್ದಾರೆ. ಟೆಸ್ಟ್ ಸರಣಿಗೆ ಸಿದ್ಧರಾಗಲು ಹಿರಿಯ ಆಟಗಾರರು 3ನೇ ಏಕದಿನ ಪಂದ್ಯದ ಬಳಿಕ ತಂಡದಿಂದ ಹೊರಹೋಗಲಿದ್ದು, ಅವರ ಸ್ಥಾನಕ್ಕೆ 4 ಮತ್ತು 5 ನೇ ಪಂದ್ಯಗಳಿಗೆ ಈ ಮೂವರು ತಾರೆಯರು ಎಂಟ್ರಿ ಕೊಡಲಿದ್ದಾರೆ.
ನ್ಯೂಝಿಲೆಂಡ್ ಏಕದಿನ ತಂಡ (ಮೊದಲ 3 ಪಂದ್ಯಗಳಿಗೆ): ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಜೇಕಬ್ ಡಫಿ, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಬ್ಲೇರ್ ಟಿಕ್ನರ್, ವಿಲ್ ಯಂಗ್.
ಇದನ್ನೂ ಓದಿ: ರಾಬಿನ್ ಉತ್ತಪ್ಪ ಸಿಡಿಲಬ್ಬರ… ಆದರೂ ಸೋತ ‘ಇಂಡಿಯಾ’
ನ್ಯೂಝಿಲೆಂಡ್ ಏಕದಿನ ತಂಡ (ಕೊನೆಯ 2 ಪಂದ್ಯಗಳಿಗೆ): ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಕ್ರಿಸ್ಟಿಯನ್ ಕ್ಲಾರ್ಕ್, ಜೇಕಬ್ ಡಫಿ, ಮ್ಯಾಟ್ ಫಿಶರ್, ಮಿಚ್ ಹೇ (ವಿಕೆಟ್ ಕೀಪರ್), ಟಿಮ್ ಸೈಫರ್ಟ್ (ವಿಕೆಟ್ ಕೀಪರ್), ನಿಕ್ ಕೆಲ್ಲಿ, ಬ್ಲೇರ್ ಟಿಕ್ನರ್, ವಿಲ್ ಯಂಗ್.