IPL 2021: ಐಪಿಎಲ್ಗಾಗಿ 2 ತಂಡ ಕಟ್ಟಿದ್ದ ನ್ಯೂಜಿಲೆಂಡ್..!
TV9 Web | Updated By: ಝಾಹಿರ್ ಯೂಸುಫ್
Updated on:
Aug 10, 2021 | 6:11 PM
New Zealand T20 World Cup Team: ಕೇನ್ ವಿಲಿಯಮ್ಸನ್ (ನಾಯಕ), ಟಾಡ್ ಆಸ್ಟ್ಲೆ, ಟ್ರೆಂಟ್ ಬೋಲ್ಟ್, ಮಾರ್ಕ್ ಚಾಪ್ಮಾನ್, ಡೆವೊನ್ ಕಾನ್ವೇ, ಲುಕಿ ಫರ್ಗುಸನ್, ಮಾರ್ಟಿನ್ ಗಪ್ಟಿಲ್, ಕೈಲ್ ಜೆಮಿಸನ್.
1 / 7
ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತಿಯಾರ್ಧ ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ತಮ್ಮ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ಈ ಪಟ್ಟಿಯ ಮೂಲಕ ವಿದೇಶಿ ಆಟಗಾರರ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳುತ್ತಿದೆ.
2 / 7
ಅತ್ತ ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ತನ್ನ ಆಟಗಾರರನ್ನು ಐಪಿಎಲ್ನ ಉಳಿದ ಪಂದ್ಯಗಳಿಗೆ ಬಿಟ್ಟು ಕೊಡುವುದಾಗಿ ತಿಳಿಸಿದೆ. ಇದರೊಂದಿಗೆ ಕಿವೀಸ್ ಆಟಗಾರರ ಐಪಿಎಲ್ನ ದ್ವಿತಿಯಾರ್ಧದಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ.
3 / 7
ಇದಾಗ್ಯೂ ಸೆಪ್ಟೆಂಬರ್-ಅಕ್ಟೋಬರ್ ಅವಧಿಯಲ್ಲಿ ನ್ಯೂಜಿಲೆಂಡ್ ತಂಡವು ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ವಿರುದ್ದ ಸರಣಿ ಆಡಲಿದೆ. ಇತ್ತ ಐಪಿಎಲ್ ಆಡುವ ಆಟಗಾರರನ್ನು ಹೊರತುಪಡಿಸಿ ಮತ್ತೊಂದು ತಂಡವನ್ನು ಕಟ್ಟುವ ಪ್ರಯತ್ನಕ್ಕೆ ಕೈ ಹಾಕಿದೆ ನ್ಯೂಜಿಲೆಂಡ್.
4 / 7
2021ರ ರನ್ನರ್: ಆಸ್ಟ್ರೇಲಿಯಾ ವಿರುದ್ದದ ಅಂತಿಮ ಪಂದ್ಯದಲ್ಲಿ ಪರಾಜಯಗೊಳ್ಳುವ ಮೂಲಕ ನ್ಯೂಜಿಲೆಂಡ್ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿ ಪಟ್ಟುಕೊಂಡಿತು.
5 / 7
ಇನ್ನು ಟಿ20 ವಿಶ್ವಕಪ್ ನಂತರ ನ್ಯೂಜಿಲೆಂಡ್ ಭಾರತ ಪ್ರವಾಸ ಕೈಗೊಳ್ಳಲಿದ್ದು ಆ ತಂಡವನ್ನು ಕೇನ್ ವಿಲಿಯಮ್ಸನ್ ಮುನ್ನಡೆಸಲಿದ್ದಾರೆ. ಹಾಗೆಯೇ ಈಗ ಆಯ್ಕೆ ಮಾಡಲಾಗುವ ತಂಡಕ್ಕೆ ಟಾಮ್ ಲಾಥಮ್ ನಾಯಕರಾಗಲಿದ್ದಾರೆ. ಹೀಗೆ ಕೊರೋನಾಂತಕದ ನಡುವೆ ಎರಡು ತಂಡಗಳನ್ನು ರೂಪಿಸಿ ಉಳಿದಿರುವ ಸರಣಿಗಳನ್ನು ಮುಗಿಸಲು ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ಪ್ಲ್ಯಾನ್ ರೂಪಿಸಿದೆ.
6 / 7
ಈಗಾಗಲೇ ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ಟಿ20 ವಿಶ್ವಕಪ್ಗಾಗಿ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿರುವ ಐಪಿಎಲ್ ಆಟಗಾರರನ್ನು ರಾಷ್ಟ್ರೀಯ ತಂಡದಿಂದ ಹೊರಗಿಡಲಾಗುತ್ತದೆ. ಅದರಂತೆ ಕೇನ್ ವಿಲಿಯಮ್ಸನ್, ಟ್ರೆಂಟ್ ಬೌಲ್ಟ್, ಕೈಲ್ ಜೇಮಿಸನ್, ಗ್ಲೆನ್ ಫಿಲಿಪ್ಸ್, ಜಿಮ್ಮಿ ನೀಶಮ್, ಲುಕಿ ಫರ್ಗುಸನ್, ಮಿಚೆಲ್ ಸ್ಯಾಂಟ್ನ್ರ್, ಟಿಮ್ ಸೀಫರ್ಟ್, ಇಶ್ ಸೋಧಿ ಸೇರಿದಂತೆ ಹಲವು ಆಟಗಾರರು ಐಪಿಎಲ್ನಲ್ಲಿ ಭಾಗವಹಿಸಲಿದ್ದಾರೆ.
7 / 7
ನ್ಯೂಜಿಲೆಂಡ್ ಟಿ20 ವಿಶ್ವಕಪ್ ತಂಡ ಹೀಗಿದೆ: ಕೇನ್ ವಿಲಿಯಮ್ಸನ್ (ನಾಯಕ), ಟಾಡ್ ಆಸ್ಟ್ಲೆ, ಟ್ರೆಂಟ್ ಬೋಲ್ಟ್, ಮಾರ್ಕ್ ಚಾಪ್ಮಾನ್, ಡೆವೊನ್ ಕಾನ್ವೇ, ಲುಕಿ ಫರ್ಗುಸನ್, ಮಾರ್ಟಿನ್ ಗಪ್ಟಿಲ್, ಕೈಲ್ ಜೆಮಿಸನ್, ಡ್ಯಾರೆಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಇಶ್ ಸೋಧಿ, ಟಿಮ್ ಸೌಥಿ.