IPL ಆಡಲು ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದ 6 ಆಟಗಾರರು..!

New Zealand vs Pakistan: ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ್ ತಂಡಗಳು ಟಿ20 ಸರಣಿಗಾಗಿ ಸಜ್ಜಾಗಿದೆ. ಮಾರ್ಚ್ 16 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಒಟ್ಟು 5 ಟಿ20 ಪಂದ್ಯಗಳನ್ನು ಆಡಲಾಗುತ್ತದೆ. ಆದರೆ ಈ ಸರಣಿಯಿಂದ ನ್ಯೂಝಿಲೆಂಡ್ ತಂಡದ 6 ಪ್ರಮುಖ ಆಟಗಾರರು ಹಿಂದೆ ಸರಿದಿದ್ದಾರೆ. ಅದು ಕೂಡ ಐಪಿಎಲ್ ಆಡಲು ಎಂಬುದು ವಿಶೇಷ.

IPL ಆಡಲು ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದ 6 ಆಟಗಾರರು..!
Pakistan - Ipl

Updated on: Mar 13, 2025 | 7:54 AM

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಎಲ್ಲಾ ಫ್ರಾಂಚೈಸಿಗಳು ಅಭ್ಯಾಸ ಕ್ಯಾಂಪ್​ಗಳನ್ನು ಆರಂಭಿಸಿದೆ. ಆದರೆ ಇತ್ತ ಐಪಿಎಲ್ ಶುರುವಾಗುವ ಹೊತ್ತಿನಲ್ಲೇ ಪಾಕಿಸ್ತಾನ್ ತಂಡ ನ್ಯೂಝಿಲೆಂಡ್ ಜೊತೆ ಟಿ20 ಸರಣಿಯನ್ನು ಆಡಲಿದೆ. ಆದರೀಗ ಐಪಿಎಲ್​ಗೆ ಆಯ್ಕೆಯಾಗಿರುವ ಕಿವೀಸ್ ಪಡೆಯ ಪ್ರಮುಖ ಆಟಗಾರರು ಪಾಕ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಆ ಆಟಗಾರರು ಯಾರೆಂದರೆ…

  1. ಮಿಚೆಲ್ ಸ್ಯಾಂಟ್ನರ್ (ಮುಂಬೈ ಇಂಡಿಯನ್ಸ್): ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಪಾಕಿಸ್ತಾನ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಅವರು ಅಲಭ್ಯರಾಗಿದ್ದಾರೆ.
  2. ಡೆವೊನ್ ಕಾನ್ವೆ (ಚೆನ್ನೈ ಸೂಪರ್ ಕಿಂಗ್ಸ್): ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅವಿಭಾಜ್ಯ ಅಂಗವಾಗಿರುವ ಡೆವೊನ್ ಕಾನ್ವೆ ಪಾಕಿಸ್ತಾನದ ವಿರುದ್ಧ ಆಡುವ ಬದಲು ಫ್ರಾಂಚೈಸಿ ಲೀಗ್​ನಲ್ಲಿ ಆಡಲು ಮುಂದಾಗಿದ್ದಾರೆ.
  3. ಲಾಕಿ ಫರ್ಗುಸನ್ (ಪಂಜಾಬ್ ಕಿಂಗ್ಸ್): ಗಾಯದ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದ ನ್ಯೂಝಿಲೆಂಡ್ ತಂಡದ ಪ್ರಮುಖ ವೇಗಿ ಲಾಕಿ ಫರ್ಗುಸನ್ ಸಹ ಪಾಕಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಬದಲಿಗೆ ಅವರು ಪಂಜಾಬ್ ಕಿಂಗ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.
  4. ಗ್ಲೆನ್ ಫಿಲಿಪ್ಸ್ (ಗುಜರಾತ್ ಟೈಟಾನ್ಸ್): ಚಾಂಪಿಯನ್ಸ್ ಟ್ರೋಫಿಯಲ್ಲಿ ಅದ್ಭುತ ಫೀಲ್ಡಿಂಗ್ ಮಾಡಿ ಮನೆಮಾತಾಗಿರುವ ಗ್ಲೆನ್ ಫಿಲಿಪ್ಸ್ ಸಹ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹೊರುಗಳಿದಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಅವರು ಗುಜರಾತ್ ಟೈಟಾನ್ಸ್​ ತಂಡವನ್ನು ಕೂಡಿಕೊಳ್ಳಲಿದ್ದಾರೆ.
  5. ಇದನ್ನೂ ಓದಿ
    IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
    15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
    ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
    ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು
  6. ರಚಿನ್ ರವೀಂದ್ರ (ಚೆನ್ನೈ ಸೂಪರ್ ಕಿಂಗ್ಸ್): ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ನ್ಯೂಝಿಲೆಂಡ್​ನ ಯುವ ದಾಂಡಿಗ ರಚಿನ್ ರವೀಂದ್ರ ಸಹ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದಿದ್ದಾರೆ. ಅಲ್ಲದೆ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಪ್ರಾಶಸ್ತ್ಯ ನೀಡಿದ್ದಾರೆ.
  7. ಬೆವೊನ್ ಜೇಕಬ್ಸ್ (ಮುಂಬೈ ಇಂಡಿಯನ್ಸ್): ನ್ಯೂಝಿಲೆಂಡ್ ತಂಡದ ಯುವ ಆಲ್‌ರೌಂಡರ್ ಪಾಕಿಸ್ತಾನ್ ವಿರುದ್ಧದ ಸರಣಿಗೆ ಅಲಭ್ಯರಾಗಿದ್ದು, ಶೀಘ್ರದಲ್ಲೇ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮುಂದಿನ ವಿಶ್ವಕಪ್​ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇಲ್ಲ..!

ಈ 6 ಪ್ರಮುಖ ಆಟಗಾರರ ಅಲಭ್ಯತೆಯ ನಡುವೆ ನ್ಯೂಝಿಲೆಂಡ್ ಟಿ20 ತಂಡವನ್ನು ಪ್ರಕಟಿಸಿದ್ದು, ಇವರಲ್ಲಿ ವಿಲ್ ಒರೋಕ್, ಕೈಲ್ ಜೇಮಿಸನ್ ಮೊದಲ 3 ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಪಾಕಿಸ್ತಾನ್ ವಿರುದ್ಧದ ಸರಣಿಗೆ ನ್ಯೂಝಿಲೆಂಡ್ ತಂಡ ಹೀಗಿದೆ…

ನ್ಯೂಝಿಲೆಂಡ್ ಟಿ20 ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಫಿನ್ ಅಲೆನ್, ಮಾರ್ಕ್ ಚಾಪ್‌ಮನ್, ಜಾಕೋಬ್ ಡಫಿ, ಜ್ಯಾಕ್ ಫೌಲ್ಕ್ಸ್, ಮಿಚ್ ಹೇ, ಮ್ಯಾಟ್ ಹೆನ್ರಿ , ಕೈಲ್ ಜೇಮಿಸನ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ವಿಲ್ ಒರೋಕ್, ಟಿಮ್ ರಾಬಿನ್ಸನ್, ಬೆನ್ ಸಿಯರ್ಸ್, ಟಿಮ್ ಸೀಫರ್ಟ್, ಇಶ್ ಸೋಧಿ.